ರೈತರ ಸಾಲಮನ್ನಾ, ಬರ ಪರಿಹಾರಕ್ಕೆ ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಲಿ: ಪರಶುರಾಮಸಿಂಗ್ ರಾಜಪೂತ
State government should take immediate action on farm loan waivers and drought relief: Parashuram S
ಲೋಕದರ್ಶನ ವರದಿ
ವಿಜಯಪುರ, 28: ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೆರೆಯ ಮಹಾರಾಷ್ಟ್ರ ಸರ್ಕಾರ ರೈತರ ?2 ಲಕ್ಷದವರೆಗಿನ ಸಾಲಮನ್ನಾ ಮಾಡಿರುವ ಮಾದರಿಯಲ್ಲಿ ಕರ್ನಾಟಕ ಸರ್ಕಾರವೂ ತಕ್ಷಣ ರೈತರ ನೆರವಿಗೆ ಬರಬೇಕು ಎಂದು ನಗರಸಭೆ ಮಾಜಿ ಅಧ್ಯಕ್ಷ ಪರಶುರಾಮಸಿಂಗ್ ರಾಜಪೂತ ಆಗ್ರಹಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೇಂದ್ರ ಸರ್ಕಾರದಿಂದ ಅಗತ್ಯ ನೆರವು ದೊರೆಯುವ ವಿಶ್ವಾಸವಿದೆ. ಆದರೆ ಅದಕ್ಕೂ ಮುನ್ನ ರಾಜ್ಯ ಸರ್ಕಾರ ತನ್ನ ಜವಾಬ್ದಾರಿಯನ್ನು ನಿರ್ವಹಿಸಬೇಕು. ವಿಶೇಷ ಅಧಿವೇಶನ ಕರೆದು ರೈತರ ಸಾಲಮನ್ನಾ ಹಾಗೂ ಪ್ರತಿ ಎಕರೆಗೆ ಪರಿಹಾರ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.
ರಾಜ್ಯ ಸರ್ಕಾರ ಸಂಕಷ್ಟದಲ್ಲಿರುವ ರೈತರಿಗೆ ಕೇವಲ ?2,500 ಇನ್ಪುಟ್ ಸಬ್ಸಿಡಿ ನೀಡಿ ಕೈತೊಳೆದುಕೊಂಡಿದೆ ಎಂದು ಟೀಕಿಸಿದ ಅವರು, ಬರ ಪರಿಹಾರ ಹಾಗೂ ಸಾಲಮನ್ನಾ ಕುರಿತು ಸರ್ಕಾರ ತಕ್ಷಣ ಸ್ಪಷ್ಟ ಕ್ರಮ ಕೈಗೊಳ್ಳಬೇಕು ಎಂದರು.
ರೈತರ ಸಮಸ್ಯೆಗಳ ಕುರಿತು ಬಿಜೆಪಿ ಹಾಗೂ ಮಿತ್ರಪಕ್ಷಗಳಾದ ಜೆಡಿಎಸ್ನ ಮುಖಂಡರು ಸರ್ಕಾರದ ಗಮನ ಸೆಳೆಯಲು ಮನವಿ ಸಲ್ಲಿಸಿದ್ದರೂ ಸರ್ಕಾರ ಸೂಕ್ತವಾಗಿ ಸ್ಪಂದಿಸಿಲ್ಲ ಎಂದು ರಾಜಪೂತ ಆರೋಪಿಸಿದರು.
ರೈತರಿಗೆ ?2,500 ಪರಿಹಾರ ನೀಡುವುದನ್ನು ಸಚಿವ ಸಂಪುಟ ಸಭೆಯಲ್ಲಿಯೇ ಘೋಷಿಸಬಹುದಾಗಿತ್ತು. ಹಾಗಿದ್ದರೆ ವಿಶೇಷ ಅಧಿವೇಶನ ಕರೆದು ರೈತರಲ್ಲಿ ನೀರೀಕ್ಷೆ ಮೂಡಿಸಿ, ಸರ್ಕಾರದ ಕೋಟ್ಯಂತರ ರೂಪಾಯಿ ವ್ಯಯಿಸುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದರು.
ಮಹಾರಾಷ್ಟ್ರ ಸರ್ಕಾರದ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ರೈತರ ?2 ಲಕ್ಷದವರೆಗಿನ ಸಾಲಮನ್ನಾ ಮಾಡಬೇಕು. ಬರದಿಂದ ಬೆಳೆ ಹಾನಿಗೊಳಗಾದ ರೈತರಿಗೆ ಪ್ರತಿ ಎಕರೆಗೆ ?50 ಸಾವಿರ ಪರಿಹಾರ ನೀಡಬೇಕು. ರೈತರ ಮಕ್ಕಳ ಶಾಲಾ ಶುಲ್ಕವನ್ನೂ ಸರ್ಕಾರವೇ ಭರಿಸಬೇಕು ಎಂದು ಅವರು ಒತ್ತಾಯಿಸಿದರು.
ಐವರು ಪೋಲಿಸರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ನಾಗರಿಕರ ಪ್ರತಿಭಟನೆ, ನೀಲಗಾರ ಗಣಪತಿ ದರ್ಶನ ರದ್ದು
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ 