ಜನೆವರಿಯಲ್ಲಿ ರಾಜ್ಯ ಸರಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ

ಧಾರವಾಡ 15: ಕರ್ನಾ ಟಕ ರಾಜ್ಯದ ಸರಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಗಳನ್ನು ಧಾರವಾಡ ನಗರದಲ್ಲಿ ಆಯೋಜಿಸಲಾಗುತ್ತಿದ್ದು, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ ಸಹಕಾರದಲ್ಲಿ ಕ್ರೀಡಾಕೂಟವನ್ನು ಸರಕಾರಿ ನೌಕರರ ಹಬ್ಬವಾಗಿ ವಿಜೃಂಬನೆಯಿಂದ ಆಚರಿಸಲು ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಕರ್ನಾ ಟಕ  ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.

ಅವರು ಇಂದು ಸಂಜೆ ಜಿಲ್ಲಾ ಸರಕಾರಿ ನೌಕರರ ಸಂಘದ ಸಭಾಭವನದಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪಧರ್ೆಗಳ ಪೂರ್ವ ಸಿದ್ದತಾ ಸಭೆಯಲ್ಲಿ ಜಿಲ್ಲಾ ಹಾಗೂ ತಾಲೂಕಾ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು.

ಧಾರವಾಡ ಜಿಲ್ಲೆಯ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವಲ್ಲಿ ತನ್ನದೆ ಆದ ಮಹತ್ವವನ್ನು ಪಡೆದಿದೆ. ಈಗಾಗಲೇ ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರ ಮಾರ್ಗದರ್ಶನದಲ್ಲಿ  ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅಚ್ಚುಕಟ್ಟಾಗಿ ಆಯೋಜಿಸಿ, ರಾಜ್ಯಕ್ಕೆ ಕೀತರ್ಿ ತಂದಿದೆ.

ಸುಮಾರು ಆರು ಸಾವಿರಕ್ಕೂ ಹೆಚ್ಚು ರಾಜ್ಯ ಸರಕಾರಿ ನೌಕರರು ಪಾಲ್ಗೊಳುವ ಈ ಕ್ರೀಡಾಕೂಟವನ್ನು ಯಾವುದೇ ರೀತಿಯ ತೊಂದರೆ, ಲೋಪಗಳಾಗದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ ಸಿ.ಇ.ಓ ಮತ್ತು ಎಸ್ಪಿಯವರ ಮಾರ್ಗದರ್ಶನದಲ್ಲಿ ಸಂಘಟಿಸೋಣ. ಜಿಲ್ಲಾ ಪದಾಧಿಕಾರಿಗಳು ಪ್ರತ್ಯೆಕವಾದ ಸಮಿತಿಗಳನ್ನು ರಚಿಸಿಕೊಂಡು ವಸತಿ, ಊಟ, ಉಪಹಾರ ಮತ್ತು ಸಾರಿಗೆ ವ್ಯವಸ್ಥೆಯನ್ನು ನಿರ್ವಹಿಸಬೇಕು.

ಕ್ರೀಡಾಕೂಟವನ್ನು ಮುಖ್ಯಮಂತ್ರಿಗಳು ಉದ್ಘಾಟಿಸುವರು. ಕ್ರೀಡಾಕೂಟಕ್ಕೆ ಅಗತ್ಯವಿರುವ ಅನುದಾನವನ್ನು ಧಾರವಾಡ ಜಿಲ್ಲಾಡಳಿತಕ್ಕೆ ರಾಜ್ಯ ಸರಕಾರದಿಂದ ಬಿಡುಗಡೆ ಮಾಡಲು ಮುಖ್ಯಮಂತ್ರಿಗಳು ಈಗಾಗಲೇ ಕ್ರೀಡಾ ಇಲಾಖೆಗೆ ನಿದರ್ೇಶನ ನೀಡಿದ್ದಾರೆ. ನೌಕರರ ಸಂಘದ ಕೇಂದ್ರ ಘಟಕದಿಂದಲೂ ಕ್ರೀಡಾಕೂಟಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗುವುದು. ಸ್ಮರಣ ಸಂಚಿಕೆ ಬಿಡುಗಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಗಳನ್ನು ಕ್ರೀಡಾಕೂಟದಲ್ಲಿ ಆಯೋಜಿಸಲಾಗುವದು.

ಪಾರದರ್ಶಕತೆ ಮತ್ತು ಅಚ್ಚುಕಟ್ಟುತನ ಕ್ರೀಡಾಕೂಟದ ಯಶಸ್ವಿಗೆ ಅತ್ಯಂತ ಅವಶ್ಯ. ಈ ನಿಟ್ಟಿನಲ್ಲಿ ಕ್ರೀಡಾಕೂಟಕ್ಕೆ ಆಗಮಿಸುವ ನೌಕರ ಬಂಧುಗಳಿಗೆ ಯಾವುದೇ ಕೊರತೆ ಆಗದಂತೆ ಆತಿಥ್ಯ ಸತ್ಕಾರ ನೀಡಲು ಕ್ರಮಕೈಗೊಳ್ಳಲಾಗುವುದು. ಅನಾವಶ್ಯಕ ಖಚ್ಚು ವೆಚ್ಚಗಳಿಗೆ ಕಡಿವಾಣ ಹಾಕೋಣ. 

ಕ್ರೀಡಾಕೂಟದ ಬಗ್ಗೆ ಸಾಮಾಜಿಕ ಜಾಲತಾಣಗಳನ್ನು ಸಮರ್ಪಕವಾಗಿ ಬಳಸಿಕೊಂಡು ಪ್ರತಿ ಕ್ರೀಡಾಪಟುವಿಗೆ ಅಗತ್ಯವಿರುವ ಕ್ರೀಡಾಂಗಣ, ಊಟ, ವಸತಿ, ಸಾರಿಗೆ ಮುಂತಾದ ಮಾಹಿತಿಯನ್ನು ಅವರ ಮೋಬೈಲ್ಗೆ ಕಳಿಸುವ ಹಾಗೂ ವ್ಯಾಪಕ ಪ್ರಚಾರ ನೀಡಲು ಯೋಜನಾಬದ್ಧವಾಗಿ ಕಾರ್ಯಕ್ರಮ ರೂಪಿಸಲು ಕೇಂದ್ರ ಸಮಿತಿ ಯೋಜನೆ ಸಿದ್ಧಗೊಳಿಸಿದೆ ಎಂದು ಸಭೆಯಲ್ಲಿ ತಿಳಿಸಿದರು.

ಕ್ರೀಡಾಕೂಟ ಆಯೋಜನೆಯ ಆತಿಥ್ಯವನ್ನು ಕೇಂದ್ರ ಸಮಿತಿ ಧಾರವಾಡ ಜಿಲ್ಲೆಗೆ ನೀಡಿದ್ದು, ಜಿಲ್ಲಾಡಳಿತದ ನೇರವಿನೊಂದಿಗೆ ಜಿಲ್ಲೆಯ ಎಲ್ಲ ಸರಕಾರಿ ನೌಕರರು ಉತ್ಸಾಹದಿಂದ ಭಾಗವಹಿಸಿ, ಯಶಸ್ವಿಗೊಳಿಸಬೇಕೆಂದು ಅವರು ಹೇಳಿದರು.

ಕರ್ನಾ ಟಕ  ರಾಜ್ಯದ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಫ್.ಸಿದ್ಧನಗೌಡರ ಸಭೆಯ ಅಧ್ಯಕ್ಷತೆ ವಹಿಸಿದ್ದರು. 

ರಾಜ್ಯ ಸಂಘದ ಪ್ರಧಾನಕಾರ್ಯದಶರ್ಿ ಜಗದೀಶ ಗೌಡಪ್ಪ ಪಾಟೀಲ, ಗೌರವಾಧ್ಯಕ್ಷ ಶಿವರುದ್ರಯ್ಯ.ವಿ.ವಿ., ಖಜಾಂಚಿ ಆರ್.ಶ್ರೀನಿವಾಸ, ಎ.ಐ.ಪಿ.ಟಿ.ಎಫ್ನ ರಾಷ್ಟ್ರೀಯ ಉಪಾಧ್ಯಕ್ಷರಾದ ಬಸವರಾಜ ಗುರಿಕಾರ, ಮಾಜಿ ಜಿಲ್ಲಾಧ್ಯಕ್ಷ ಎಸ್.ಕೆ.ರಾಮದುರ್ಗ, ರಾಜ್ಯ ಪರಿಷತ್ ಸದಸ್ಯ ಹೆಚ್.ಬಿ.ದಳವಾಯಿ ಹಾಗೂ ಜಿಲ್ಲಾ ಸಂಘದ ಪದಾಧಿಕಾರಿಗಳು ವೇದಿಕೆಯಲ್ಲಿ ಇದ್ದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ  ಎಸ್.ಬಿ.ಸುಬ್ಬಾಪೂರಮಠ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಗೌರವಾಧ್ಯಕ್ಷ ಆರ್.ಬಿ.ಲಿಂಗಧಾಳ ವಂದಿಸಿದರು. 

ಸಭೆಯಲ್ಲಿ ರಾಜ್ಯ ನೌಕರರ ಸಂಘದ ಜಿಲ್ಲಾ ನಿದರ್ೇಶಕರು, ಪದಾಧಿಕಾರಿಗಳು ಮತ್ತು ತಾಲೂಕಾ ಘಟಕಗಳ ಪದಾಧಿಕಾರಿಗಳು, ಎಲ್ಲಾ ಇಲಾಖೆಗಳ ವೃಂದ ಸಂಘಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.