ರಾಜ್ಯಮಟ್ಟದ ಕಲಾಶ್ರೀ ಪ್ರಶಸ್ತಿ ವಿಜೇತ ವಿದ್ಯಾರ್ಥಿನಿ ಬಿ.ಬಿ. ಆಯಿಷಾ ಅತ್ತಾರ ಅವರಿಗೆ ಜಿಲ್ಲಾಡಳಿತದಿಂದ ಸನ್ಮಾನ
State-level Kalashri award winner student B.B. Aisha Attara felicitated by the district administrat
ಧಾರವಾಡ ಡಿ.12: ನವಲೂರಿನ ತಡಸಿನಕೊಪ್ಪ ಗ್ಲೋಬಲ್ ಸ್ಕೂಲ್ ಆಫ್ ಎಕ್ಸಲೆನ್ಸ್ ಶಾಲೆಯ 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಬಿ.ಬಿ. ಆಯಿಷಾ ಅತ್ತಾರ ಬಾಲಕಿಯು ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಅಂಗವಾಗಿ ಧಾರವಾಡ ಜಿಲ್ಲಾ ಬಾಲ ಭವನದ ವತಿಯಿಂದ ಆಯೋಜಿಸಿದ್ದ ಮಕ್ಕಳ ಸ್ಪರ್ಧೆಯಲ್ಲಿ ವಿಜೇತಳಾಗಿ ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು ಇಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಜಾನಪದ ನೃತ್ಯದಲ್ಲಿ ಸ್ಪರ್ಧಿಸಿ, ರಾಜ್ಯ ಮಟ್ಟದ ಕಲಾಶ್ರೀ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾಳೆ.
ಇತ್ತೀಚೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ 50 ವರ್ಷದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಕಲಾಶ್ರೀ ಪ್ರಶಸ್ತಿ ನೀಡಿ, ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಸನ್ಮಾನಿಸಿ ಅಭಿನಂದಿಸಿದ್ದಾರೆ.
ಪ್ರಶಸ್ತಿ ಪುರಸ್ಕೃತ ವಿದ್ಯಾರ್ಥಿ ಬಿ.ಬಿ. ಆಯಿಷಾ ಅತ್ತಾರ ಅವರನ್ನು ಇಂದು (ಡಿ.12) ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಕಾನೂನೂ ಸೇವೆಗಳ ಪ್ರಾಧಿಕಾರದ ಸದಸ್ಯಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ದೊಡ್ಡಮನಿ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕಿ ಡಾ. ಎಚ್.ಎಚ್. ಕುಕನೂರ್ ಅವರು ವಿದ್ಯಾರ್ಥಿನಿಯನ್ನು ಸನ್ಮಾನಿಸಿ, ಅಭಿನಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 