ಸೆ. 2ರವರೆಗೆ ರಾಜ್ಯ ಮಟ್ಟದ ಖಾದಿ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ
State-level Khadi exhibition and sale fair till Sept. 2
ಸೆ. 2ರವರೆಗೆ ರಾಜ್ಯ ಮಟ್ಟದ ಖಾದಿ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ
ಕೊಪ್ಪಳ 28: ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೊದ್ಯೋಗ ಮಂಡಳಿ, ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಕೊಪ್ಪಳ ಇವರ ಸಹಯೋಗದೊಂದಿಗೆ ಸರ್ಕಾರದವತಿಯಿಂದ “ರಾಜ್ಯ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತುಪ್ರದರ್ಶನ ಮಾರಾಟ “ಖಾದಿ ಉತ್ಸವ-2025” ಮೇಳವನ್ನು ಆ. 24 ರಿಂದ ಸೆಪ್ಟೆಂಬರ್ 2ರ ವರೆಗೆ ಒಟ್ಟು 10 ದಿನಗಳ ಕಾಲ ಕೊಪ್ಪಳ ನಗರದ ಹೊಸಪೇಟ್ ರಸ್ತೆಯ ನಗರಸಭೆ ಎದುರುಗಡೆಯ ಶಾದಿ ಮಹಲ್‌ನಲ್ಲಿ ಏರಿ್ಡಸಲಾಗಿದ್ದು, ಈ ವಸ್ತುಪ್ರದರ್ಶನವನ್ನು ಇತ್ತೀಚೆಗೆ (ರವಿವಾರ) ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೊದ್ಯೋಗ ಮಂಡಳಿಯ ಅಧ್ಯಕ್ಷರು ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವನಗೌಡ ತುರುವಿಹಾಳ ಮತ್ತು ಕೊಪ್ಪಳದ ಸ್ಥಳೀಯ ಶಾಸಕರು ಹಾಗೂ ಇತರೆ ಮುಖಂಡರುಗಳಿಂದ ಚಾಲನೆ ನೀಡಲಾಗಿದೆ.
ಈ ರಾಜ್ಯ ಮಟ್ಟದ ಖಾದಿ ಗ್ರಾಮೋದ್ಯೋಗ ವಸ್ತುಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ ಉತ್ತರ್ರದೇಶ, ಬಿಹಾರ, ಜಾರ್ಖಂಡ, ಕಾಶ್ಮೀರ, ಮಹಾರಾಷ್ಟ್ರ ರಾಜ್ಯಗಳಿಂದ ಹಾಗೂ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಖಾದಿ ಬಟ್ಟೆಗಳು, ರೇಷ್ಮೆ ಸೀರೆಗಳು ಮತ್ತು ಕರಕುಶಲ ವಸ್ತುಗಳು ಪ್ರದರ್ಶನ ಹಾಗೂ ಮಾರಾಟಕ್ಕೆ ಇಡಲಾಗಿದ್ದು, 2ರವರೆಗೆ ನಡೆಯಲಿರುವ ರಾಜ್ಯ ಮಟ್ಟದ ಖಾದಿ ಗ್ರಾಮೋದ್ಯೋಗ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಪರಿಸರ ಮತ್ತು ನೈಸರ್ಗಿಕ ಸ್ನೇಹಿತವಾದ ಉತ್ಪನ್ನಗಳು ಮಾರಾಟ ಮಾಡಲಾಗುತ್ತಿದ್ದು, ಇನ್ನು ಹೆಚ್ಚಿನ ಜನರು ಈ ವಸ್ತು ಪ್ರದರ್ಶನಕ್ಕೆ ಭೇಟಿ ನೀಡಿ ಖಾದಿ ಉತ್ಪನ್ನಗಳನ್ನು ಖರೀದಿಸಿ ಪ್ರೋತ್ಸಾಹಿಸಬೇಕು ಎಂದು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೊದ್ಯೋಗ ಮಂಡಳಿಯ ಕೊಪ್ಪಳ ಜಿಲ್ಲಾ ಕಛೇರಿಯ ಪ್ರಕಟಣೆ ತಿಳಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 