ಹಡಗಲಿ ತಾ.ಪಂ.ಗೆ ರಾಜ್ಯ ಮಟ್ಟದ ಪ್ರಶಸ್ತಿ
ಹೂವಿನಹಡಗಲಿ 05: ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಹೂವಿನಹಡಗಲಿ ತಾಲ್ಲೂಕು ಪಂಚಾಯತಗೆ ನರೇಗಾ ರಾಜ್ಯ ಮಟ್ಟದ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.ಮಹಾತ್ಮ ಗಾಂಧಿ ನರೇಗಾ ಯೋಜನೆಯನ್ನು ಅತ್ಯುತ್ತಮವಾಗಿ ಅನುಷ್ಠಾನಗೊಳಿಸಿ ಸಾಧನೆ ಮಾಡಿರುವ ರಾಜ್ಯಮಟ್ಟದ ಮಹಾತ್ಮ ಗಾಂಧಿ ನರೇಗಾ ಪ್ರಶಸ್ತ-2025 ನ್ನು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರು ಸನ್ಮಾನ್ಯ ಪ್ರಿಯಾಂಕ ಖರ್ಗೆಯವರು ಹಡಗಲಿ ಕಾರ್ಯನಿರ್ವಕ ಅಧಿಕಾರಿ ಎಂ.ಉಮೇಶ್ ಹಾಗೂ ನರೇಗಾ ಸಹಾಯಕ ನಿರ್ದೇಶಕರು ವೀರಣ್ಣ ನಾಯಕ ಇವರಿಗೆ, ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.