ನಾಳೆ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಶೈಕ್ಷಣಿಕ ಮಹಾ ಸಮ್ಮೇಳನ
State-level educational conference in Bengaluru tomorrow
ಕೊಪ್ಪಳ 26: ರಾಜ್ಯಮಟ್ಟದ ಶೈಕ್ಷಣಿಕ ಮಹಾ ಸಮ್ಮೇಳನ ಧನ್ಯತಾ ಸಮಾರಂಭ, ಸಂಘದ ಸುವರ್ಣ ಮಹೋತ್ಸವ ಹಾಗೂ ಗುರುವಂದನಾ ಸಮಾರಂಭ ನಾಳೆ ದಿ.28 ರಂದು ಶನಿವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜರುಗುವದೆಂದು ಕೊಪ್ಪಳ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶರಣಬಸವನಗೌಡ ಪಾಟೀಲ್ ಹಲಗೇರಿ ಹೇಳಿದರು. ಅವರು ಗುರುವಾರದಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಈ ಸಮ್ಮೇಳನದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರ್ಪ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ್ ನುಗ್ಗಲಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್ ಎಚ್.ಎಸ್, ರಾಜ್ಯ ಗೌರವಾಧ್ಯಕ್ಷ ಕೆ ನಾಗೇಶ್ ಸೇರಿದಂತೆ ರಾಜ್ಯ ಸಂಘದ ಎಲ್ಲಾ ಪಾದಾಧಿಕಾರಿಗಳು ಪಾಲ್ಗೊಳ್ಳುವರು ಎಂದ ಅವರು ಸಮ್ಮೇಳನದಲ್ಲಿ ವಿವಿಧ ಬೇಡಿಕೆಗಳಾದ ಪ್ರಾಥಮಿಕ ಶಾಲಾ ಸಹ ಶಿಕ್ಷಕ ಹುದ್ದೆಯಿಂದ ಮುಖ್ಯ ಗುರುಗಳ ಹುದ್ದೆಗೆ ಭರ್ತಿ ನೀಡುವಂತೆ ಆದೇಶ ಮಾಡಿಸಲಾಗುವುದು,
ಪ್ರೌಢಶಾಲಾ ಶಿಕ್ಷಕ ವೃಂದ ಗ್ರೇಡ್-1 ಹುದ್ದೆಗಳಿಗೆ ಬಡ್ತಿ ನೀಡುವಂತೆ ಒತ್ತಾಯಿಸಲಾಗುವುದು, ಪದವಿ ಹೊಂದಿದ ಎಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಆರ್ಥಿಕ ಸೌಲಭ್ಯವನ್ನು ಒದಗಿಸುವಂತೆ ಸರ್ಕಾರದ ಮೇಲೆ ಒತ್ತಡ ಹಾಕುವುದು, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ನಲಿ ಕಲಿ ಪದ್ದತಿಯನ್ನು ರದ್ದುಗೊಳಿಸುವಂತೆ ಒತ್ತಾಯಿಸುವುದು, ಶಿಕ್ಷಕರ ಕಾಲು ಹುದ್ದೆಗಳನ್ನು ಭರ್ತಿ ಮಾಡುವಂತೆ ಒತ್ತಾಯಿಸುವಂತೆ ಸೇರಿದಂತೆ ಇತರೆ ಬೇಡಿಕೆಗಳನ್ನು ಸಮ್ಮೇಳನದಲ್ಲಿ ಒತ್ತಾಯಿಸಲಾಗುವುದು ಎಂದರುಈ ರಾಜ್ಯ ಮಟ್ಟದ ಶೈಕ್ಷಣಿಕ ಮಹಾ ಸಮ್ಮೇಳನಕ್ಕೆ ಕೊಪ್ಪಳ ಜಿಲ್ಲೆಯಿಂದ 1500 ಶಿಕ್ಷಕರು ಪಾಲ್ಗೊಳ್ಳುವ ನೀರೀಕ್ಷೆ ಇದೆ ಎಂದರು. ಈ ಸಮ್ಮೇಳನಕ್ಕೆ ಜಿಲ್ಲೆಯ ಪ್ರಾಥಮಿಕ ಶಾಲಾ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಕೊಪ್ಪಳ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಮಂಜುನಾಥ್ .ಬಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 