ನಾಳೆ ಅರಮನೆ ಮೈದಾನದಲ್ಲಿ ರಾಜ್ಯಮಟ್ಟದ ಶೈಕ್ಷಣಿಕ ಮಹಾ ಸಮ್ಮೇಳನ
State-level educational conference to be held at the Palace grounds tomorrow
ರಾಯಬಾಗ, 26 : ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು 55 ವರ್ಷಗಳನ್ನು ಪೂರೈಸಿರುವ ಪ್ರಯುಕ್ತ ಫೆ .28 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯಮಟ್ಟದ ಶೈಕ್ಷಣಿಕ ಮಹಾ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಾಲೂಕಾಧ್ಯಕ್ಷ ವಿಷ್ಣು ಅರಗೆ ತಿಳಿಸಿದ್ದಾರೆ.
ಗುರುವಾರ ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಧನ್ಯತಾ ಸಮಾರಂಭ, ಸಂಘದ ಸುವರ್ಣ ಮಹೋತ್ಸವ ಹಾಗೂ ಗುರುವಂದನಾ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಸಮ್ಮೇಳನವನ್ನು ಸಿಎಂ.ಸಿದ್ದಾರಾಮಯ್ಯ ಉದ್ಘಾಟಿಸಲಿದ್ದಾರೆ, ಡಿ.ಸಿಎಂ.ಡಿ.ಕೆ ಶಿವಕುಮಾರ, ಸಚಿವ ಮಧು ಬಂಗಾರ್ಪ ಸೇರಿ ವಿವಿಧ ಸಚಿವರು, ಶಾಸಕರು, ಎಂಎಲ್ಸಿಗಳು ಹಾಗೂ ಇಲಾಖೆ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.
ಪ್ರತಿ ಜಿಲ್ಲೆಯ ಒಬ್ಬ ಸಾಧಕ ಶಿಕ್ಷಕನಿಗೆ ಮಹಾತ್ಮ ಜೋತಿಬಾ ಫುಲೆ ಪ್ರಶಸ್ತಿ ಹಾಗೂ ಸಾಧಕಿ ಶಿಕ್ಷಕಿಗೆ ಮಾತೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಗಣ್ಯರು ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಸಮ್ಮೇಳನದಲ್ಲಿ ಭಾಗವಹಿಸುವ ಶಿಕ್ಷಕರಿಗೆ ಅನ್ಯ ಕಾರ್ಯನಿಮಿತ್ಯ ರಜೆ( ಒಒಡಿ) ಸೌಲಭ್ಯವಿದೆ. ಹಾಗಾಗಿ ತಾಲೂಕಿನ ಎಲ್ಲ ಶಿಕ್ಷಕರು ಸಮ್ಮೇಳನದಲ್ಲಿ ಭಾಗವಹಿಸಬೇಕೆಂದರು.
ಶಿಕ್ಷಕರ ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಸಂಘ ನಿರಂತರ ಪ್ರಯತ್ನ ನಡೆಸುತ್ತಿದೆ. ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಶಿಕ್ಷಕರ ಪರ ತಿದ್ದುಪಡಿ, ಬಡ್ತಿ ನಿಯಮಾವಳಿ, ಕೌನ್ಸಲಿಂಗ ಮೂಲಕ ಬಡ್ತಿ, ದೈಹಿಕ ಶಿಕ್ಷಣ ಶಿಕ್ಷಕರಿಗೆ ಗ್ರೇಡ 1 ಬಡ್ತಿ, ರಾಜ್ಯದ 1.5 ಲಕ್ಷ ಶಿಕ್ಷಕರರಿಗೆ ಉಚಿತ ಐಟಿ ಹಾಗೂ ಇ- ಫೈಲಿಂಗ ಸೌಲಭ್ಯ, ಮಹಿಳಾ ಶಿಕ್ಷಕರಿಗೆ ವೇತನ ಸಹಿತ ಋತುಚಕ್ರ ರಜೆ, ಆಕಸ್ಮಿಕ ನಿಧನರಾದ ಶಿಕ್ಷಕರ ಕುಟುಂಬಗಳಿಗೆ ಲಕ್ಷಾಂತರ ಪರಿಹಾರ, 45 ಸಾವಿರಕ್ಕೂ ಹೆಚ್ಚು ಶಿಕ್ಷಕರಿಗೆ ವರ್ಗಾವಣೆ ಭಾಗ್ಯ, ಅನಗತ್ಯ ಹಾಜರಾತಿ ಆಪ್ಯ ರದ್ದತಿ, ವಿದ್ಯುತ್ ಬಿಲ್ ಉಚಿತ, ಕ್ರೀಡಾ ಚಟುವಟಿಕೆಗಳಿಗೆ ಪ್ರತ್ಯೇಕ ಅನುದಾನ ಸೇರಿ ಶಿಕ್ಷಕ ಪರ ಹಲವು ನಿರ್ಣಯಗಳನ್ನು ಈಡೇರಿಸಲಾಗಿದೆ ಎಂದು ತಿಳಿಸಿದರು.
ಪ್ರಧಾನ ಕಾರ್ಯದರ್ಶಿ ಎಸ್.ಡಿ. ರಾಜಮಾನೆ , ಎಮ್.ಬಿ ಬಡಿಗೇರ, ಸಿ. ಆರ್. ಪುಜೇರಿ, ಅಶೋಕ ಕವಲಗುಡ್ಡ, ಶಿಲಾ ಚೌಗಲಾ, ಬಿ.ಎಸ್.ವಿಭುತಿಆನಂದಪ್ಪಾ , ಶ್ರಿಧರ ಚೌಗಲಾ, ಶಾರದಾ ಬಿ.ಎಲ್, ಎ.ಎಸ್. ಹಸುರೆ, ಕೆ.ಎಸ್.ದಳವಾಯಿ, ವೀನಾ ಬಿ.ಎಸ್, ಎಮ್.ಸಿ.ಐಹೊಳೆ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 