ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

State level selection in talent fountain competition

ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ 

ಭಾಗ್ಯನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ವಿದ್ಯಾವಿಕಾಸ ಶಿಕ್ಷಣ ಸಂಸ್ಥೆಯ ವಿದ್ಯಾವಿಕಾಸ ಕನ್ನಡ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ.ಚೈತ್ರಾ ಬಣ್ಣದ ಜಿಲ್ಲಾ ಮಟ್ಟದ ಭಾವಗೀತೆ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿಗೆ, ಮಾರ್ಗದರ್ಶಕ ಶಿಕ್ಷಕರಿಗೆ ವಿದ್ಯಾವಿಕಾಸ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಆಡಳಿತ ಮಂಡಳಿಯ ಸರ್ವಸದಸ್ಯರು ಅಭಿನಂದಿಸಿದ್ದಾರೆ.