ರಾಜ್ಯ ಮಟ್ಟದ ಕ್ರೀಡಾಕೂಟಗಳ ಅಗತ್ಯವಿದೆ:ನಾಗರಾಜ ಆರ್ ಜುಮ್ಮಣ್ಣನ್ನವರ
State-level sports events are needed: Nagaraja R Jummannavara
ಕೊಪ್ಪಳ 20: ವಿಕಲಚೇತನ ನೌಕರರಿಗೆ ಅವರ ಅಂಗವೈಕಲ್ಯತೆಗೆ ಅನುಗುಣವಾಗಿ ಸರಕಾರಿ ನೌಕರರ ಕ್ರೀಡಾಕೂಟದ ಜೊತೆ ಜೊತೆಯಲ್ಲಿ ರಾಜ್ಯ ಮಟ್ಟದ ವಿಕಲಚೇತನ ನೌಕರರ ಕ್ರೀಡಾಕೂಟದ ಆಯೋಜನೆಯ ಅಗತ್ಯವಿದೆ ಎಂದು ಸರಕಾರಿ ನೌಕರರ ಸಂಘದ ಹಿರಿಯ ಉಪಾಧ್ಯಕ್ಷರಾದ ನಾಗರಾಜ ಆರ್ ಜುಮಣ್ಣನ್ನವರ ಹೇಳಿದರು. ಅವರು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸರಕಾರಿ ನೌಕರರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ವಿಕಲಚೇತನ ನೌಕರರ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತಾ,ವಿಕಲಚೇತನ ನೌಕರರಲ್ಲಿ ಕೂಡಾ ಅನೇಕ ರೀತಿಯ ವಿಶಿಷ್ಟ ಹಾಗೂ ವಿಭಿನ್ನವಾದ ಪ್ರತಿಭೆಗಳಿದ್ದು,ಅವುಗಳನ್ನು ಗುರುತಿಸಬೇಕಾದರೆ ವೇದಿಕೆಗಳ ಅಗತ್ಯ ಇರುವುದನ್ನು ಮನಗಂಡು ಕಳೆದ 5 ವರ್ಷಗಳಿಂದ ಸರಕಾರಿ ನೌಕರರ ಕ್ರೀಡಾಕೂಟ ಜೊತೆ ಜೊತೆಯಲ್ಲಿ ವಿಕಲಚೇತನ ನೌಕರರಿಗೂ ಕೂಡಾ ಅವರ ಅಂಗವೈಕಲ್ಯತೆಗೆ ಅನುಗುಣವಾದ ರೀತಿಯಲ್ಲಿ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗುತ್ತದೆ.ಆದರೆ ಇದು ಕೇವಲ ಜಿಲ್ಲೆಗೆ ಮಾತ್ರ ಸಿಮಿತವಾಗುತ್ತದೆ.ಇವರ ಪ್ರತಿಭೆಯನ್ನು ರಾಜ್ಯ ಮಟ್ಟದಲ್ಲಿ ನೋಡಬೇಕಾದರೆ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿಕಲಚೇತನ ನೌಕರರಿಗಾಗಿ ಪ್ರತಿಯೊಂದು ಜಿಲ್ಲೆಗೆ ಹಾಗೂ ರಾಜ್ಯ ಹಂತದಲ್ಲಿ ಕ್ರೀಡಾಕೂಟವನ್ನು ಆಯೋಜನೆ ಅಗತ್ಯವಿದ್ದು,ವಿಕಲಚೇತನ ನೌಕರರ ಸಂಘದಿಂದ ಈಗಾಗಲೇ ಅನೇಕ ಬಾರಿಯಲ್ಲಿ ಮನವಿ ಮಾಡಿದ್ದಾರೆ.ಮುಂದಿನ ದಿನಮಾನಗಳಲ್ಲಿ ರಾಜ್ಯ ಸಂಘದ ಸಭೆಯಲ್ಲಿ ವಿಷಯವನ್ನು ಚರ್ಚೆ ಮಾಡುವ ಮೂಲಕ ರಾಜ್ಯ ಮಟ್ಟದ ಕ್ರೀಡಾಕೂಟದ ಆಯೋಜನೆಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ ಎಂದು ಹೇಳಿದರು.
ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರ್ಪ ಅಂಡಗಿ ಚಿಲವಾಡಗಿ ಮಾತನಾಡಿ,ವಿಕಲಚೇತನ ನೌಕರರೂ ಕೂಡಾ ಕ್ರೀಡಾಕೂಟದಲ್ಲಿ ಭಾಗಿಯಾಗಬೇಕು ಎಂಬ ಹಂಬಲವನ್ನು ಹೊಂದಿದ್ದಾರೆ.ಆದರೆ ಸಾಮಾನ್ಯ ನೌಕರರ ಜೊತೆಯಲ್ಲಿ ವಿಕಲಚೇತನ ನೌಕರರು ಸ್ಪರ್ಧೇಯನ್ನು ಒಡ್ಡುವುದು ಅಸಾಧ್ಯವಾಗಿದೆ.ಈ ಹಿನ್ನಲೆಯಲ್ಲಿ ವಿಕಲಚೇತನ ನೌಕರರ ಸಂಘದ ವತಿಯಿಂದ ರಾಜ್ಯದಲ್ಲಿ ಪ್ರಥಮ ಬಾರಿ ವಿಕಲಚೇತನ ನೌಕರರಿಗೆ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗುತ್ತಿತ್ತು.ಇದನ್ನು ಮನಗಂಡು ಸರಕಾರಿ ನೌಕರರ ಸಂಘದಿಂದ ನಮ್ಮ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಕೇವಲ 4 ಜಿಲ್ಲೆಯಲ್ಲಿ ಮಾತ್ರ ಕ್ರೀಡಾಕೂಟವನ್ನು ನಡೆಸಲಾಗುತ್ತದೆ.ಇದರಿಂದ ಉಳಿದ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಕಲಚೇತನ ನೌಕರರು ಕ್ರೀಡಾಕೂಟದಿಂದ ವಂಚಿತರಾಗುತ್ತಿದ್ದು,ಅಲ್ಲದೇ ಕೇವಲ 4 ಜಿಲ್ಲೆಯಲ್ಲಿ ಮಾತ್ರ ಕ್ರೀಡಾಕೂಟವನ್ನು ಆಯೋಜನೆ ಮಾಡುತ್ತಿರುವುದರಿಂದ ಪ್ರತಿಭೆಗಳು ಆ ಜಿಲ್ಲೆಗೆ ಮಾತ್ರ ಸಿಮಿತವಾಗುತ್ತವೆ.ರಾಜ್ಯ ಮಟ್ಟದಲ್ಲಿ ವಿಕಲಚೇತನ ನೌಕರರಿಗೆ ಕ್ರೀಡಾಕೂಟವನ್ನು ಆಯೋಜನೆ ಮಾಡುವ ನಿಟ್ಟಿನಲ್ಲಿ ಸರಕಾರವು ಗಮನ ಹರಿಸಲಿ ಎಂದು ಹೇಳಿದರು. ಕಾರ್ಯಕ್ರಮ ಅಧ್ಯಕ್ಷತೆಯನ್ನು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿಠ್ಠಲ್ ಜಾಬಗೌಡರ ವಹಿಸಿದ್ದರು.
ಸರಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯರಾದ ಮಹ್ಮದ್ ಆಸೀಫ್ ಅಲಿ,ಖಜಾಂಚಿ ಜಯತೀರ್ಥ ದೇಸಾಯಿ,ಗೌರವಾಧ್ಯಕ್ಷರಾದ ಸಿದ್ದಪ್ಪ ಮೇಳಿ,ಕನಕಗಿರಿ ತಾಲೂಕ ಅಧ್ಯಕ್ಷರಾದ ಶಂಶಾದಬೇಗಂ,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಶರಣಬಸವನಗೌಡ ಪಾಟೀಲ,ಎನ್.ಪಿ.ಎಸ್.ಸಂಘದ ಜಿಲ್ಲಾಧ್ಯಕ್ಷರಾದ ಗೋಪಾಲ ದುಬೆ,ವಿಕಲಚೇತನ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಬಸವರಾಜ ಮಾರನಬಸರಿ,ತಾಲೂಕ ಅಧ್ಯಕ್ಷರಾದ ಅಂದಪ್ಪ ಇದ್ಲಿ,ಯಲಬುರ್ಗಾ ತಾಲೂಕ ಅಧ್ಯಕ್ಷರಾದ ಮಹೇಶ ಆರೇರ ಮುಂತಾದವರು ಹಾಜರಿದ್ದರು. ಕಾರ್ಯಕ್ರಮವನ್ನು ದೈಹಿಕ ಶಿಕ್ಷಕರಾದ ಬಸವರಾಜ ನಿರೂಪಿಸಿದರು. ಸರಕಾರಿ ನೌಕರರ ಸಂಘದ ರಾಜ್ಯ ಪರಿಷತ್ತಿನ ಸದಸ್ಯರಾದ ಹೇಮಣ್ಣ ಕವಲೂರು ಸ್ವಾಗತಿಸಿ,ವಿಕಲಚೇತನ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಮಂಜುನಾಥ ಬುಲ್ಟಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 