ಸಿರಿಗೇರಿಯಲ್ಲಿ ಕನಕದಾಸರ ಮತ್ತು ಸಂಗೊಳ್ಳಿ ರಾಯಣ್ಣ ಪುತ್ಥಳಿ ಉದ್ಘಾಟನೆ
Statues of Kanakadasa and Sangolli Rayanna inaugurated in Sirigeri
ಬಳ್ಳಾರಿ 13 : ಸಿರಿಗೇರಿ ಗ್ರಾಮದ ಮುಖ್ಯ ವೃತ್ತದ ಹತ್ತಿರ ಕುರುಬ ಸಮುದಾಯದಿಂದ ಕನಕದಾಸ ಯುವಕ ಸಂಘ ಮತ್ತು ಸಂಗೋಳ್ಳಿ ರಾಯಣ್ಣ ಯುವಕ ಸಂಘ ನೇತೃತ್ವದಲ್ಲಿ ದಾಸ ಶ್ರೇಷ್ಠ ಕನಕದಾಸರ ಪುತ್ತಳಿ ಮತ್ತು ವೀರ ಸಂಗೊಳ್ಳಿ ರಾಯಣ್ಣ ಇವರ ಪುತ್ಥಳಿ ಉದ್ಘಾಟನಾ ಕಾರ್ಯಕ್ರಮ ಸಂಭ್ರಮದಿಂದ ನೆರವೇರಿಸಲಾಯಿತು. ತಿಂತಿಣಿ ಮಠದ ಸಿದ್ದರಾಮಯ್ಯನಂದಪೂರಿ ಮಹಾಸ್ವಾಮಿಗಳು ಉಭಯ ಮೂರ್ತಿಗಳನ್ನು ಉದ್ಘಾಟನಾ ಗೊಳಿಸಿ ಲೋಕಾರೆ್ಣ ಮಾಡಿದರು,ವೇದಿಕೆ ಕಾರ್ಯಕ್ರಮದಲ್ಲಿ ಗಣ್ಯರಿಗೆ ಸನ್ಮಾನ ಮತ್ತು ಶ್ರೀಗಳಿಗೆ ತುಲಾಭಾರ ನೆರವೇರಿಸಲಾಯಿತು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ಬಿ.ಮುರಳಿ ಕೃಷ್ಣ ನವರು 21 ಸಾವಿರ ರೂಪಾಯಿಗಳು ದೇಣಿಗೆ ಆಪ್ತರ ಮೂಲಕ ಕಳಿಸಿಕೊಟ್ಟಿದ್ದರು. ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷರಾದ ಎಲ್.ಗಾದಿಲಿಂಗ ಗೌಡರು ಸಿರುಗುಪ್ಪ ತಾಲೂಕ ಕುರುಬರ ಸಂಘದ ಅಧ್ಯಕ್ಷರಾದ ಸೋಮಪ್ಪನವರು ಪ್ರಧಾನ ಕಾರ್ಯದರ್ಶಿಗಳಾದ ಕರಿಬಸಪ್ಪ ಕರ್ನಾಟಕ ಪ್ರದೇಶ ಯುವ ಕುರುಬರ ಸಂಘದ ರಾಜ್ಯ ಅಧ್ಯಕ್ಷರಾದ ಬಿ.ಎಂ.ಪಾಟೀಲ್ ಉಪಾಧ್ಯಕ್ಷರಾದ ಅಯ್ಯಾಳಪ್ಪ ನಾಡಂಗ ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದ್ಯಸರು,ಸಮಾಜದ ಮುಖಂಡರು ಗ್ರಾಮದ ಗುರು-ಹಿರಿಯರು,ಯುವಕರು ಭಾಗವಹಿಸಿದ್ದರು
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 