ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಹೆಚ್ಚಿಸಲು ಕ್ರಮ
Steps to improve SSLC results
ಲೋಕದರ್ಶನ ವರದಿ
ಹೂವಿನ ಹಡಗಲಿ 09: ಮಾರ್ಚ್ ತಿಂಗಳಲ್ಲಿ ನಡೆಯಲಿರುವ ಎಸ್ಸೆಸ್ಸೆಲ್ಸಿ ಮುಖ್ಯ ಪರೀಕ್ಷೆಯ ಫಲಿತಾಂಶ ಸುಧಾರಣೆಗಾಗಿ ಮುಖ್ಯ ಗುರುಗಳು ಕ್ರಮ ಕೈಗೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ವಿ ಪೂಜಾರ ಅಭಿಮತ ವ್ಯಕ್ತಪಡಿಸಿದರು.ಪಟ್ಟಣದ ತುಂಗಭದ್ರಾ ಪ್ರೌಢಶಾಲೆಯಲ್ಲಿ ಸೋಮವಾರ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಗತಿ ಪರೀಶೀಲನಾ ಸಭೆಯಲ್ಲಿ ಮಾತನಾಡಿದರು.ಕಳೆದ ವರ್ಷ ಕಲ್ಯಾಣ ಕರ್ನಾಟಕದಲ್ಲಿ ತಾಲೂಕು ಪ್ರಥಮ ಸ್ಥಾನ ಲಭಿಸಿದೆ. ಈ ವರ್ಷವೂ ಕಳೆದ ಬಾರಿಗಿಂತ ಹೆಚ್ಚು ಫಲಿತಾಂಶ ವೃದ್ಧಿಸಲುಶ್ರಮ ವಹಿಸಿರಿ ಎಂದು ಹೇಳಿದರು.ತಾಲೂಕಿನ 9 ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು.ಕುಡಿಯುವ ನೀರು, ಶೌಚಾಲಯ, ಪರೀಕ್ಷಾ ಕೊಠಡಿಗಳಿಗೆ ವಿದ್ಯುತ್ ಸಂಪರ್ಕ, ಪರೀಕ್ಷಾರ್ಥಿಗಳ ಆರೋಗ್ಯ ಕುರಿತು ನಿಗಾ ವಹಿಸಲು ಸೂಚಿಸಿದರು.ಕ್ಷೇತ್ರ ಸಮನ್ವಯಾಧಿಕಾರಿ ಎ ಕೋಟೆಪ್ಪ 8 ಮತ್ತು 9 ನೇ ತರಗತಿ ದ್ವಿತೀಯ ಮೌಲ್ಯಾಂಕನ ಪರೀಕ್ಷೆ ಕುರಿತು ಮಾಹಿತಿ ನೀಡಿದರು.ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ ಹನುಮಂತಪ್ಪ ಮಾತನಾಡಿದರು.ತಾಲೂಕು ಪ್ರೌಢಶಾಲಾ ಮುಖ್ಯ ಗುರುಗಳ ಸಂಘದ ಅಧ್ಯಕ್ಷ ಜಿ ಎಂ ಕಾಂತೇಶ್ ಶಾಲಾ ಮುಖ್ಯ ಗುರು ಸುರೇಶ ಅಂಗಡಿ ಇದ್ದರು.ತಾಲೂಕಿನ ಸರ್ಕಾರಿ ಅನುದಾನಿತ ಅನುದಾನರಹಿತ ಮೊರಾರ್ಜಿ ದೇಸಾಯಿ ವಸತಿ ಪ್ರೌಢಶಾಲೆಗಳ ಮುಖ್ಯ ಗುರುಗಳು ಭಾಗವಹಿಸಿದ್ದರು.
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ 