ಮೀಸಲಾತಿ ಹೋರಾಟದಲ್ಲಿ ಬಿಜೆಪಿ, ಆರ್‌ಎಸ್‌ಎಸ್‌ನಿಂದ ಕಲ್ಲು ತೂರಾಟ

Stone pelting by BJP, RSS in reservation struggle

ಮೀಸಲಾತಿ ಹೋರಾಟದಲ್ಲಿ ಬಿಜೆಪಿ, ಆರ್‌ಎಸ್‌ಎಸ್‌ನಿಂದ ಕಲ್ಲು ತೂರಾಟ 

ಬೆಳಗಾವಿ  12: 2ಎ ಮೀಸಲಾತಿಗಾಗಿ ಹೋರಾಟ ಮಾಡುತ್ತಿದ್ದ ಪಂಚಮಸಾಲಿಗಳ ಮೇಲೆ ಲಾಠಿ ಚಾರ್ಜ್‌ ಮಾಡಿರುವ ವಿಷಯವಾಗಿ ಚರ್ಚೆ ಕಾವೇರಿದ್ದು, ಪಂಚಮಸಾಲಿಗಳ ಹೋರಾಟದಲ್ಲಿ ಕಲ್ಲು ತೂರಿದವರು ನಮ್ಮ ಸಮಾಜದವರಲ್ಲ. ಅವರು ಬಿಜೆಪಿ ಕಾರ್ಯಕರ್ತರು ಮತ್ತು ಆರ್‌ಎಸ್‌ಎಸ್ ನವರು ಎಂದು ಹೇಳುವ ಮೂಲಕ ವಿದಾನಸಭೆಯಲ್ಲಿ ಶಾಸಕ ವಿಜಯಾನಂದ ಕಾಶಪ್ಪನವ ಹೊಸ ಬಾಂಬ್ ಸಿಡಿಸಿದ್ದಾರೆ. 

ಪಂಚಮಸಾಲಿಗಳ ನಡೆಸಿದ್ದ ಮೀಸಲಾತಿ ಹೋರಾಟದ ವೇಳೆ ಲಾಠಿ ಚಾರ್ಜ ವಿಷಯವಾಗಿ ಗುರುವಾರ ವಿಧಾನ ಸಭೆಯಲ್ಲಿ ನಡೆದ ಲಾಠಿ ಚಾರ್ಜ ವಿಷಯವಾಗಿ ಮಾತನಾಡಿದ ಶಾಸಕ ವಿಜಯಾನಂದ ಕಾಶಪ್ಪನವರ್ ಅವರು, ನಮ್ಮ ಸಮಾಜದ ಶಾಂತಿಯುತವಾಗಿ ಹೋರಾಟ ಮಾಡುತ್ತಿತ್ತು. ಆದರೆ ಬಿಜೆಪಿ ಹಾಗೂ ಆರ್‌ಎಸ್‌ಎಸ್ ನವರು ಪೊಲೀಸರ ಮೇಲೆ ಕಲ್ಲು ತೂರಿದ್ದಾರೆ. ಈ ಹಿನ್ನೆಯಲ್ಲಿ ನಮ್ಮ ಸಮಾಯದ ಅಮಾಯಕರ ಮೇಲೆ ಲಾಠಿ ಚಾರ್ಜ ಮಾಡಲಾಯಿತು ಎಂದು ಸದನಕ್ಕೆ ತಿಳಿಸಿದರು.  

ಈ ಹಿಂದೆ ನಾವೆಲ್ಲರು ಸೇರಿ 712 ಕಿ.ಮೀ ಹೋರಾಟ ಮಾಡಿದ್ದೇವೆ. ಸ್ವಾಮೀಜಿಗೆ ನಾನು ಗೌರವ ಕೊಡುತ್ತೇನೆ. ಪ್ರತಿಭಟನೆ ವೇಳೆ ಒಂದಾದರೂ ಗಲಾಟೆ ಆಯ್ತಾ? ಉದ್ದೇಶ ಪೂರ್ವಕವಾಗಿ ಈಗ ಗಲಾಟೆ ಮಾಡಿಸಿದ್ದಾರೆ. ಗಾಯಾಳುಗಳನ್ನು ಯಾರು ನೋಡಿಕೊಳ್ಳುತ್ತಾರೆ. ಸ್ವಾಮೀಜಿ ನೋಡ್ಕೋತಾರ? ಮುಖಂಡರು ನೋಡಿಕೊಳ್ಳುತ್ತಾರಾ? ನ್ಯಾಯಾಲಯದಲ್ಲಿ ತಡೆಯಾಜ್ಞೆ ಇದೆ ಅದನ್ನ ತೆಗೆಯಬೇಕು. ಸ್ವಾಮೀಜಿ ತೀರ್ಮಾನ ಒಂದೇ ಅಲ್ಲಾ ಸಮಾಜ ಇದೆ. ನಾವು 12 ಜನ ಶಾಸಕರು ಇದ್ದೇವೆ. ಬಿಜೆಪಿ ಪಾರ್ಟಿಯ ವೇದಿಕೆಗೆ ಹೋಗಿ ಭಾಷಣ ಮಾಡುತ್ತಾರೆ. ನಾವು ಮೀಸಲಾತಿ ಕೊಡಿಸುತ್ತೇವೆ ಎಂದಿದ್ದಾರೆ.  

ಎಂದು ಲಾಠಿ ಚಾರ್ಜ ವಿಷಯವನ್ನು ಸದನದಲ್ಲಿ ಪ್ರಸ್ತಾಪ ಮಾಡುತ್ತಿದ್ದಂತೆ ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಡಿಸಿ ಏರು ಧ್ವನಿಯಲ್ಲಿ ಕಾಶಪ್ಪನವರ ಅವರನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ವಿಜಯಾನಂದ ಕಾಶಪ್ಪನವರ ಅವರನ್ನು ತರಾಟೆಗೆ ತೆಗೆದುಕೊಂಡು ಚೀರಾಟ ಕೂಗಾಟ ಹೆಚ್ಚಾಗುತ್ತಿದ್ದಂತೆ ಸಭಾಧ್ಯಕ್ಷ ಯುಟಿ ಖಾದರ್ ಅವರು ಸದನವನ್ನು ಸ್ವಲ್ಪ ಹೊತ್ತು ಮುಂದೂಡಿದ ಪ್ರಸಂಗ ನಡೆಯಿತು.