ಹೋಲಿಕೆ ಬೀಡಿ, ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ - ಎಸ್ಪಿ ಡಾ.ರಾಮ್.ಎಲ್.ಅರಸಿದ್ದಿ - ಎಜ್ಯುಕೇರ್ ಸ್ಕೂಲ್ ವಾರ್ಷಿಕೋತ್ಸವ
Stop comparing, recognize the talent in children - SP Dr. Ram.L. Arasiddi - Educare School Annivers
ಕೊಪ್ಪಳ 02: ಮಕ್ಕಳನ್ನು ಮತ್ತೊಂದು ಮಗುವಿನ ಜೊತೆ ಹೋಲಿಕೆ ಮಾಡುವುದನ್ನು ಬಿಡಿ, ಆ ಮಗುವಿನಲ್ಲಿಯೇ ಇರುವ ವಿಶೇಷ ಪ್ರತಿಭೆಯನ್ನು ಗುರುತಿಸಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್.ಎಲ್.ಅರಸಿದ್ದಿ ಪಾಲಕರಿಗೆ ಸಲಹೆ ನೀಡಿದರು. ನಗರದ ಎಜುಕೇರ್ ಇಂಗ್ಲೀಷ್ ಮೀಡಿಯಮ್ ಸ್ಕೂಲ್ ನಲ್ಲಿ ಶನಿವಾರ ಸಂಜೆ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಂದು ಮಗುವಿನಲ್ಲಿ ಒಂದೊಂದು ಕಲಿಕಾ ಸಾಮರ್ಥ್ಯವಿರುತ್ತದೆ. ಅವರ ಕಲಿಕಾ ಸಾಮರ್ಥ್ಯ- ನ್ಯೂನತೆ ಗಮನಿಸಿ, ಅವರ ಬೌದ್ಧಿಕ ಮಟ್ಟ ಹೆಚ್ಚಿಸುವ ಕೆಲಸ ಮಾಡಬೇಕೆಂದು ಕರೆ ನೀಡಿದರು. ಇತ್ತೀಚಿನ ದಿನಗಳಲ್ಲಿ ಸಣ್ಣ-ಪುಟ್ಟ ವಿಷಯಕ್ಕೆ ಮಕ್ಕಳು ಆತ್ಮಹತ್ಯೆಯ ದಾರಿ ಹಿಡಿಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಹೀಗಾಗಿ ಮಾನಸಿಕವಾಗಿ ಮಕ್ಕಳಲ್ಲಿ ಗಟ್ಟಿತನ ಬೆಳೆಸುವ ಕೆಲಸವಾಗಬೇಕಿದೆ ಎಂದರು.
ಕಳೆದೊಂದು ದಶಕದಿಂದ ಮಕ್ಕಳಲ್ಲಿ ಜ್ಞಾನದ ಹಸಿವು ನಿಗಿಸುತ್ತಿರುವ ಎಜ್ಯುಕೇರ್ ಇಂಗ್ಲೀಷ ಮಿಡಿಯಂ ಶಾಲೆಯ ಸಾಧನೆ ನಿಜಕ್ಕೂ ಮೆಚ್ಚುವಂತಹದ್ದು. ನಾನು ಕೂಡ ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ಓದಿದ್ದೇನೆ. ನಾನು ಐಪಿಎಸ್ ಆದ ಬಳಿಕ ರಾಮಕೃಷ್ಣ ಆಶ್ರಮದ ಶಾಲೆಯ ಹೆಸರನ್ನು ಹೆಮ್ಮೆಯಿಂದ ಹೇಳುತ್ತಿದ್ದೇನೆ. ಅದೇ ರೀತಿ ಈ ಶಾಲೆಯಲ್ಲಿ ಕಲಿತ ಮಕ್ಕಳು ಮುಂದೆ ಉತ್ತಮ ಭವಿಷ್ಯ ಕಂಡುಕೊಂಡ ಬಳಿಕ ಈ ಶಾಲೆಯ ಹೆಸರನ್ನು ಚಿರಸ್ಥಾಯಿಯಾಗಿಸುತ್ತಾರೆ. ಹೀಗಾಗಿ ಮಕ್ಕಳ ಜೀವನದಲ್ಲಿ ಶಿಕ್ಷಣ ಸಂಸ್ಥೆ ಮಹತ್ತರ ಪಾತ್ರ ವಹಿಸುತ್ತದೆ ಎಂದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 