ಬೀದಿ ಬದಿ ವ್ಯಾಪಾರಿಗಳ ಲೋಕ ಕಲ್ಯಾಣ ಮೇಳ
Street vendor's world welfare fair
ಕಂಪ್ಲಿ 23: ಬೀದಿ ಬದಿ ವ್ಯಾಪಾರಿಗಳ ಅಭಿವೃದ್ಧಿಗಾಗಿ ಸರ್ಕಾರದ ಹಲವು ಯೋಜನೆಗಳನ್ನು ರೂಪಿಸಿದ್ದು, ವ್ಯಾಪಾರಿಗಳು ಇದನ್ನು ಸದುಯೋಗಪಡಿಸಿಕೊಳ್ಳಬೇಕು ಎಂದು ಪುರಸಭೆ ಕಂದಾಯ ಅಧಿಕಾರಿ ಸಿ.ಪ್ರಶಾಂತ್ ಹೇಳಿದರು. ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಪುರಸಭೆ ಸಹಯೋಗದಲ್ಲಿ ಬೀದಿ ಬದಿ ವ್ಯಾಪಾರಿಗಳ ಲೋಕ ಕಲ್ಯಾಣ ಮೇಳಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿ, ವ್ಯಾಪಾರಿಗಳ ಸುರಕ್ಷತೆಗಾಗಿ ಕೇಂದ್ರ ಸರ್ಕಾರ ಪಿಎಂ ಸ್ವ-ನಿಧಿ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಗಳ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದರು. ನಂತರ ಜಿಲ್ಲಾ ಕೌಶಲ್ಯಾಭಿವೃದ್ಧಿಯ ವ್ಯವಸ್ಥಾಪಕ ಪ್ರಾಣೇಶ್ ಮಾತನಾಡಿ, ಡಿಜಿಟಲ್ ವ್ಯವಹಾರದಿಂದ ವ್ಯಾಪಾರಿಗಳಿಗೆ ಕ್ಯಾಶ್‌ಬ್ಯಾಕ್ ಸಿಗುತ್ತದೆ. ಸಾಲ ಸೌಲಭ್ಯ. ಸೇರಿದಂತೆ ಹಲವು ಯೋಜನೆಗಳು ಬೀದಿ ಬದಿ ವ್ಯಾಪಾರಿಗಳಿಗೆ ದೊರಕುತ್ತಿದ್ದು, ಈ ಯೋಜನೆಗಳ ಸದ್ಬಳಕೆಯೊಂದಿಗೆ ಆರ್ಥಿಕವಾಗಿ ಸಬಲರಾಗಬೇಕು ಎಂದರು.
ಪುರಸಭೆಯ ಸಮುದಾಯ ಸಂಘಟನಾಧಿಕಾರಿ ಜಯಲಕ್ಷ್ಮೀ ಪ್ರಾಸ್ತಾವಿಕವಾಗಿ ಮಾತನಾಡಿ, ಬೀದಿ ಬದಿ ವ್ಯಾಪಾರಿಗಳ ಕ್ಷೇಮಾಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಸಾಕಷ್ಟು ಯೋಜನೆಗಳನ್ನು ನೀಡುತ್ತಿದ್ದು, ಈ ಯೋಜನೆಗಳನ್ನು ಪಡೆದುಕೊಳ್ಳಲು ಮುಂದಾಗಬೇಕು ಎಂದರು. ಇಲ್ಲಿನ 10 ಜನ ವ್ಯಾಪಾರಿಗಳಿಗೆ ಬಾಕಿ ಸಾಲ ಸೌಲಭ್ಯ ಮಂಜೂರಾತಿ ಪತ್ರ ವಿತರಿಸಿದರು. ಈ ಸಂದರ್ಭದಲ್ಲಿ ಸಿಆರ್‌ಪಿಗಳಾದ ರೇಣುಕಮ್ಮ, ರೋಜಮ್ಮ, ವಿವಿಧ ಬ್ಯಾಂಕಿನ ಸುನೀಲ್, ಮಂಜುನಾಥ, ಪವನ್, ವೀರಾಂಜೀನೀಯಲು, ಸಚಿನ್ ಹಾಗೂ ಪಟ್ಟಣ ಮಾರುಕಟ್ಟೆ ಸಮಿತಿಯ ಸದಸ್ಯರಾದ ವನಿತಾ, ಮಾಮನ ಸತಿಯಂದಡರಾದ ಕಂದನಿತಾ ಕೆ.ರಂಗಪ್ಪ ಕಷ್ಟ ಕನಕ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 