ಯೋಗದಿಂದ ಒತ್ತಡ ನಿರ್ವಹಣೆ
Stress management with yoga
ಬಳ್ಳಾರಿ 21: ಯೋಗವು ಮನಸ್ಸು, ದೇಹ ಮತ್ತು ಆತ್ಮವನ್ನು ಸಂಯೋಜಿಸುವ ಮೂಲಕ ಒತ್ತಡದ ಜೀವನವನ್ನು ನಿರ್ವಹಿಸಲು ಹಾಗೂ ಆರೋಗ್ಯ ಸುಧಾರಣೆಗೆ ಸಹಕಾರಿಯಾಗಿದೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಸಚಿವ ್ರೊ.ತಿ್ೇರುದ್ರ್ಪ ಅವರು ಹೇಳಿದರು.ವಿವಿಯ ಯೋಗ ಕೇಂದ್ರದಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ವಾರದಲ್ಲಿ ಮೂರು ದಿನಗಳ ‘ಯೋಗ, ಪ್ರಾಣಾಯಾಮ ಮತ್ತು ಧ್ಯಾನ ತರಗತಿಗಳ’ ಕಾರ್ಯಕ್ರಮ ಪತಂಜಲಿ ಮಹರ್ಷಿಯವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.ಯೋಗವನ್ನು ನಮ್ಮಲ್ಲಿ ಅಳವಡಿಸಿಕೊಳ್ಳುವುದರಿಂದ ಗುರಿ ಸಾಧನೆಗೆ ಸಹಾಯವಾಗುತ್ತದೆ. ಅರೋಗ್ಯಕರ ಜೀವನಶೈಲಿಯನ್ನು ರೂಢಿಸುತ್ತದೆ. ಯೋಗ ಕಾರ್ಯಕ್ರಮದಲ್ಲಿ ಎಲ್ಲ ಸಿಬ್ಬಂದಿ ಭಾಗವಹಿಸಿ ಎಂದರು.ವಿವಿಯ ಯೋಗ ಅಧ್ಯಯನ ವಿಭಾಗದ ಉಪನ್ಯಾಸಕ ಡಿ.ಮಹೇಶ ಬಾಬು ಅವರು ಯೋಗದ ಮಹತ್ವದ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಡೀನ್ ಪ್ರೊ.ಸದ್ಯೋಜಾತಪ್ಪ, ಶಿಕ್ಷಣ ನಿಕಾಯದ ಡೀನ್ ಪ್ರೊ.ಸಾಹೇಬ್‌ಅಲಿ ನಿರಗುಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಡಾ.ಶಶಿಧರ ಕೆಲ್ಲೂರ ಗಣ್ಯರನ್ನು ಸ್ವಾಗತಿಸಿ, ನಿರೂಪಿಸಿದರು. ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಮುಖ್ಯಸ್ಥರು, ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಯೋಗಾಭ್ಯಾಸ ಮಾಡಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 