ಪ್ರಗತಿಗೆ ಶ್ರಮಿಸದ ಬೇಜವಾಬ್ದಾರಿ ಸಿಬ್ಬಂದಿಗಳಿಗೆ ಕಠಿಣ ಕ್ರಮ: ಇಒ ಕಂದಕೂರ
Strict action against irresponsible staff who do not work for progress: EO Kandakura
ಪ್ರಗತಿಗೆ ಶ್ರಮಿಸದ ಬೇಜವಾಬ್ದಾರಿ ಸಿಬ್ಬಂದಿಗಳಿಗೆ ಕಠಿಣ ಕ್ರಮ: ಇಒ ಕಂದಕೂರ
ಗಜೇಂದಗಡ 06 : ತಾಲೂಕಿನಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲ ಕಾರ್ಯಕ್ರಮಗಳನ್ನು ನಿಗದಿತ ಗುರಿಗೆ ಅನುಗೂಣವಾಗಿ ಸರಿಯಾದ ಸಮಯಕ್ಕೆ ಪ್ರಗತಿ ಸಾಧಿಸಬೇಕು. ಗುರಿಗೆ ಅನುಗೂಣವಾಗಿ ಪ್ರಗತಿಗೆ ಶ್ರಮಿಸದ ಅಧಿಕಾರಿಗಳ ವಿರುದ್ಧ ಕಡ್ಡಾಯವಾಗಿ ಕಠಿಣ ಕ್ರಮ ತಗೆದುಕೊಳ್ಳಲಾಗುವುದು. ಹಾಗೆಯೇ ಪ್ರಗತಿಗೆ ಶ್ರಮಿಸುವ ಅಧಿಕಾರಿಗಳನ್ನು ಗೌರವಿಸುವ ಕೆಲಸವನ್ನು ಮಾಡಲಾಗುವುದು ಎಂದು ಸಂಬಂಧಿಸಿದ ತಾಲೂಕಿನ ಅಧಿಕಾರಿಗಳ ವಿರುದ್ಧ ಮೊದಲ ಪ್ರಗತಿ ಪರೀಶೀಲನಾ ಸಭೆಯಲ್ಲಿ ನೂತನ ಇಒ ಚಂದ್ರಶೇಖರ ಬಿ, ಕಂದಕೂರು ಛಾಟಿ ಬೀಸಿದರು.
ತಾಲೂಕು ಪಂಚಾಯತ ಸಭಾಂಗಣದಲ್ಲಿ ಬುಧವಾರ ಬೆಳಿಗ್ಗೆ 10 ಗಂಟೆಗೆ ನಡೆದ ತಾಲೂಕಿನ ಪ್ರಗತಿ ಪರೀಶೀಲನಾ ಸಭೆಯಲ್ಲಿ ತಾಲೂಕಿನ 13 ಗ್ರಾಮ ಪಂಚಾಯತಗಳ ಅಧಿಕಾರಿಗಳು, ತಾಲೂಕು ನರೇಗಾ ಸಿಬ್ಬಂದಿ ವರ್ಗ, ಬಿಲ್ ಕಲೆಕ್ಟರಗಳು, ಪಂಚಾಯತ ಕಾರ್ಯದರ್ಶಿ, ಕಂಪ್ಯೂಟರ್ ಆಫರೇಟರಗಳು, ಬಿಎಫ್ ಟಿಗಳು, ಗ್ರಾಮಕಾಯಕಮಿತ್ರರು ಅವರನ್ನು ಉದ್ದೇಶಿಸಿ ಮಾತನಾಡಿದರು. ತಾಲೂಕಿನಲ್ಲಿ ಗ್ರಾಮ ಪಂಚಾಯತಗಳ ವ್ಯಾಪ್ತಿಯಲ್ಲಿ ತೆರಿಗೆ ವಸೂಲಾತಿ ಕುಂಠಿತವಾಗಿದೆ. ಜಿಲ್ಲೆಯಲ್ಲಿಯೇ ಗಜೇಂದ್ರಗಡ ತಾಲೂಕು ಮುಂದಿನ ವಾರದಲ್ಲಿ ತೆರಿಗೆ ವಸೂಲಾತಿಯಲ್ಲಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆಯಬೇಕು. ತಾಲೂಕಿನ ಎಲ್ಲ ಗ್ರಾಪಂ ಗಳು 50ಅ ಕ್ಕಿಂತ ಹೆಚ್ಚು ಪ್ರಗತಿ ಸಾಧಿಸಬೇಕು. ವಾರದೊಳಗೆ ಅತೀ ಹೆಚ್ಚು ತೆರಿಗೆ ವಸೂಲಾತಿ ಮಾಡುವ 05 ಗ್ರಾಪಂ ಗಳ ಬಿಲ್ ಕಲೆಕ್ಟರ್ ಗಳಿಗೆ ಚಾಂಪಿಯನ್ಸ ಆಫ್ ಟ್ಯಾಕ್ಸ್ ಕಲೆಕ್ಷನ್ ಎಂಬ ಹೆಸರಿನಡಿ ಪ್ರೋತ್ಸಾಹಕವಾಗಿ ಪ್ರಮಾಣ ಪತ್ರ ಮತ್ತು ಪಾರಿತೋಷಕ ನೀಡಿ ಗೌರವ ಸಲ್ಲಿಸಲಾಗುವುದು ಎಂದರು.
ನರೇಗಾ ಯೋಜನೆಯಡಿ ಪ್ರಗತಿಯಲ್ಲಿರುವ ಶಾಲಾ ಅಭಿವೃದ್ಧಿ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಬೇಕು. ಯೋಜನೆಯಡಿ ಯಾವುದೇ ಕಾಮಗಾರಿ ಇರಲಿ ವಿಳಂಬ ಮಾಡದೇ ತಾಂತ್ರಿಕವಾಗಿ ಮತ್ತು ಆಡಳಿತಾತ್ಮಕವಾಗಿ ಒಪ್ಪಿಗೆ ನೀಡಿ ಆದಷ್ಟು ಬೇಗ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳ್ಳುವಂತೆ ನರೇಗಾ ಸಿಬ್ಬಂದಿ ಮುತುವರ್ಜಿವಹಿಸಬೇಕೆಂದರು.ತಾಲೂಕಿನ ಎಲ್ಲ ಗ್ರಾಮ ಪಂಚಾಯಗಳಲ್ಲಿ ಸಾರ್ವಜನಿಕ ಸ್ನೇಹಿ ವಾತಾವರಣ ನಿರ್ಮಾಣ ಮಾಡಬೇಕು. ಇದಕ್ಕೆ ಪೂರಕವಾಗಿ ಪಿಡಿಒ ಸೇರಿದಂತೆ ಗ್ರಾಪಂ ಸಿಬ್ಬಂದಿಗಳು ಸರಿಯಾದ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗಿ ಗ್ರಾಪಂ ಕಚೇರಿಗೆ ಬರುವ ಸಾರ್ವಜನಿಕರೊಂದಿಗೆ ನಯ-ವಿನಯತೆಯಿಂದ ವರ್ತಿಸಬೇಕು. ಈ ಮೂಲಕ ತಾಲೂಕಿನ ಸಾರ್ವಜನಿಕರಿಗೆ ಸರ್ಕಾರಿ ಕಚೇರಿಗಳ ಬಗ್ಗೆ ವಿಶ್ವಾಸ ಮೂಡಿಸುವ ಕೆಲಸ ಮಾಡಿ ಎಂದರು.ಬಸವರಾಜ ಬಡಿಗೇರ್ ಸಹಾಯಕ ನಿರ್ದೇಶಕರು ಉದ್ಯೋಗ ಖಾತರಿ ತಾಪಂ ಗಜೇಂದ್ರಗಡ ಅವರು ನೂತನ ಇಒ ಚಂದ್ರಶೇಖರ ಬಿ, ಕಂದಕೂರು ಅವರಿಗೆ ಸಾಥ್ ನೀಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 