ಹಾವೇರಿ ಲೋಕಸಭಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದು
ಹಾವೇರಿ 07: ಲೋಕಸಭಾ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.ಅವರು ಸೋಮವಾರ ಬ್ಯಾಡಗಿ ರೇಲ್ವೆ ನಿಲ್ದಾಣದಲ್ಲಿ ಈ ಹಿಂದೆ ನಡೆದ ಕಾಮಗಾರಿಗಳನ್ನು ಪರೀಶೀಲಿಸಿ ಮಾತನಾಡಿದರು. ನನ್ನ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರೈಲ್ವೆ ನಿಲ್ದಾಣಗಳ ಅಭಿವೃದ್ಧಿಗೆ ಶ್ರಮಿಸುವ ಜೊತೆಗೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಬೇಕಾಗಿರುವ ಹಾಗೂ ಸೌಲಭ್ಯಗಳನ್ನು ಕಲ್ಪಿಸಲು ಜನತೆಯೊಂದಿಗೆ ಚರ್ಚಿಸಿ ದೇಶದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿಸಲು ಪ್ರಯತ್ನಿಸುವುದಾಗಿ ಹೇಳಿದ ಅವರು ಸ್ಥಳೀಯ ರೈಲ್ವೆ ನಿಲ್ದಾಣದಲ್ಲಿ ವೇಗದೂತ ರೈಲುಗಳು ನಿಲ್ಲುತ್ತಿಲ್ಲವೆಂದು ಸ್ಥಳೀಯ ರೈಲ್ವೆ ಹೋರಾಟ ಸಮಿತಿಯವರು ಮನವಿ ನೀಡಿದ್ದು,
ಅದರೊಂದಿಗೆ ರೈಲ್ವೆ ನಿಲ್ದಾಣದ ಕಾಮಗಾರಿ ಅವೈಜ್ಞಾನಿಕವಾಗಿದ್ದು, ದ್ವಾರ ಭಾಗಿಲಲ್ಲಿ ಸೋರುವುದು, ನಿಲ್ದಾಣದಲ್ಲಿ ಶೌಚಾಲಯಗಳು ಇಲ್ಲದಿರುವುದು, ರಾತ್ರಿ ಸಮಯದಲ್ಲಿ ರೈಲ್ವೇ ನಿಲ್ದಾಣಕ್ಕೆ ಬರಲು ಬೆಳಕಿನ ವ್ಯವಸ್ಥೆ ಇಲ್ಲದೇ ಇರುವುದು, ಪ್ರಯಾಣಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದಿರುವುದು, ಸಾರ್ವಜನಿಕರ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.
ಅದರೊಂದಿಗೆ ವೇಗದೂತ ರೈಲುಗಳಾದ ಯಶವಂತಪುರ ವಾಸ್ಕೋ ಎಕ್ಸ್ ಪ್ರೆಸ್, ರಾಣಿ ಚೆನ್ನಮ್ಮ ಎಕ್ಸ್ ಪ್ರೆಸ್, ಮೈಸೂರು ದಾದರ ಎಕ್ಸ್ ಪ್ರೆಸ್, ಪುದುಚೇರಿ ದಾದರ ಎಕ್ಸ್ ಪ್ರೆಸ್, ತಿರುವನೆಲಿ ದಾದರ್ ಎಕ್ಸ್ ಪ್ರೆಸ್ ರೈಲುಗಳನ್ನು ನಿಲುಗಡೆಗೆ ಮನವಿ ನೀಡಿದ್ದು,ಮುಂಬರುವ ದಿನಗಳಲ್ಲಿ ಹಂತ ಹಂತವಾಗಿ ಬ್ಯಾಡಗಿ ರೈಲ್ವೇ ನಿಲ್ದಾಣದಲ್ಲಿ ವೇಗದೂತ ರೈಲುಗಳು ನಿಲುಗಡೆಗೆ ಕ್ರಮ ವಹಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕಾ ಬಿಜೆಪಿ ಕಾರ್ಯಕರ್ತರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.