ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದಿಂದ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ: ಶಾಂತಿಪೂರ್ಣ ಸಭೆ
Struggle for Social Justice by All India Banjara Seva Sangh: Peaceful Meeting
ಇಂಡಿ 02: ಸಮಾಜದ ಹಿಂದುಳಿದ ವರ್ಗಗಳು ಹಾಗೂ ಬಂಜಾರಾ ಸಮುದಾಯದ ಜನರಿಗೆ ನ್ಯಾಯ ದೊರಕಿಸಿಕೊಡುವ ಉದ್ದೇಶದಿಂದ ಆಲ್ ಇಂಡಿಯಾ ಬಂಜಾರಾ ಸೇವಾ ಸಂಘವು ನಿರಂತರವಾಗಿ ಹೋರಾಟ ನಡೆಸುತ್ತಿದೆ ಎಂದು ಸಂಘದ ಅಧ್ಯಕ್ಷ ಸಂಜೀವ ಚವ್ಹಾಣ ತಿಳಿಸಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ನೂತನ ಮಹಿಳಾ ಘಟಕದ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದ ಮಕ್ಕಳಿಗೆ ಶಿಕ್ಷಣದ ಅರಿವು ಮೂಡಿಸುವುದು ಮತ್ತು ಅವರ ಅಭಿವೃದ್ಧಿಗೆ ವೇದಿಕೆ ಒದಗಿಸುವುದು ಸಂಘದ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು. ಪ್ರತಿಯೊಂದು ತಾಲ್ಲೂಕಿನಲ್ಲಿ ಗ್ರಾಮ ಘಟಕಗಳನ್ನು ಆರಂಭಿಸುವ ಕಾರ್ಯವೂ ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಳೂಕು ಕಾರ್ಯಾಧ್ಯಕ್ಷ ಸಂಜೀವ ಜಾಧವ, ಉಪಾಧ್ಯಕ್ಷ ವಿಜಯ ರಾಠೋಡ್, ಗಣೇಶ್ ರಾಠೋಡ್, ಧರ್ಮಸಿಂಗ್ ರಾಠೋಡ್, ಹಾಗೂ ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ ರಾಠೋಡ್, ಮೋಹನ್ ರಾಠೋಡ್, ದಶರಥ ರಾಠೋಡ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಯುವ ಘಟಕದ ಅಧ್ಯಕ್ಷ ಕಿರಣ್ ರಾಠೋಡ್, ಉಪಾಧ್ಯಕ್ಷ ಸುನೀಲ್ ರಾಠೋಡ್ ಹಾಗೂ ಕಾರ್ಯದರ್ಶಿ ಭೀಮರಾವ್ ಚವ್ಹಾಣ ಸೇರಿದಂತೆ ಅನೇಕರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಮಾಜದ ಏಕತೆ, ಶಿಕ್ಷಣ ಮತ್ತು ಹಕ್ಕುಗಳ ರಕ್ಷಣೆಗೆ ಸಂಘವು ಮುಂದುವರಿಯಲಿದೆ ಎಂದು ಸಂಘದ ಪದಾಧಿಕಾರಿಗಳು ಭರವಸೆ ವ್ಯಕ್ತಪಡಿಸಿದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 