ವಿದ್ಯಾರ್ಥಿಗಳ ಸ್ವಾಗತ, ದೀಕ್ಷಾಬೋಧ ಕಾರ್ಯಕ್ರಮ
Student welcome and initiation program
ವಿದ್ಯಾರ್ಥಿಗಳ ಸ್ವಾಗತ, ದೀಕ್ಷಾಬೋಧ ಕಾರ್ಯಕ್ರಮ
ಧಾರವಾಡ, 11 : ಪಠ್ಯದ ಜೊತೆ ಜೊತೆಗೆ ಪಠ್ಯೇತರ ಚಟುವಟಿಕೆಗಳು ಸಹ ವಿದ್ಯಾರ್ಥಿಗಳ ಸವಾಂರ್ಗೀಣ ವಿಕಾಸಕ್ಕೆ ಪೂರಕ. ಹೀಗಾಗಿ ವಿದ್ಯಾರ್ಥಿಗಳು ಕಲೆ, ಕ್ರೀಡೆ ಸೇರಿದಂತೆ ಇನ್ನಿತರ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಅನಾವರಣಗೊಳಿಸಲು ಸನ್ನದ್ಧರಾಗಬೇಕು ಎಂದು ಉಪಪ್ರಾಚಾರ್ಯ ಡಾ. ಸೂರಜ ಜೈನ್ ಹೇಳಿದರು.
ನಗರದ ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಗೆ ಪದವಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ಸ್ವಾಗತ ಮತ್ತು ದೀಕ್ಷಾಬೋಧ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಮ್ಮ ಜನತಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು ಹಾಗೂ ಕಾಲೇಜಿನ ಪ್ರಾಚಾರ್ಯರಾದ ಡಾ. ಅಜಿತ ಪ್ರಸಾದ ಅವರು ಈ ಕಾಲೇಜಿನ ಏಳಿಗೆಗಾಗಿ ಸತತವಾಗಿ ಶ್ರಮಿಸಿ ಗುಣ ಮಟ್ಟದ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳಿಗೆ ಸಾಕಷ್ಟು ಸೌಕರ್ಯಗಳನ್ನು ಒದಗಿಸಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆ ಗಳ ತಯಾರಿಗಾಗಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಗ್ರಂಥಾಲಯ ನಿರ್ಮಿಸಿದ್ದಾರೆ. ಈ ಗ್ರಂಥಾಲಯದಲ್ಲಿ ಸುಮಾರು ನಲವತ್ತು ಸಾವಿರ ಪುಸ್ತಕಗಳಿದ್ದು ಅವುಗಳ ಪ್ರಯೋಜನ ಪಡೆಯುವಂತೆ ತಿಳಿಸಿದರು. ಅಲ್ಲದೇ ಉದ್ಯೋಗ ಮೇಳ ಸಂಘಟಿಸಿ ಆ ಮೂಲಕ ವಿದ್ಯಾರ್ಥಿಗಳಿಗೆ ಉದ್ಯೋಗವನ್ನು ಕಲ್ಪಿಸಿದ್ದಾರೆ. ಕ್ರೀಡಾ ಪಟುಗಳಿಗೆ ವಿಶೇಷ ಉತ್ತೇಜನವನ್ನು ನೀಡುತ್ತಾ ಬಂದಿರುತ್ತಾರೆ. ಆ ಕ್ರೀಡಾಪಟುಗಳಿಗೆ ಶಿಷ್ಯವೇತನ ನೀಡಿ ಪ್ರೋತ್ಸಾಯಿಸುತ್ತಿರುವುದು ನಮಗೆಲ್ಲ ಸಂತೋಷ ನೀಡಿದೆ. ಅಲ್ಲದೇ ಕ್ರೀಡಾಪಟುಗಳಿಗೆ ಉಚಿತ ತರಬೇತಿ ನೀಡಿ ಮುನ್ನಡೆಸುತ್ತಿದ್ದಾರೆ. ಸತತವಾಗಿ ಕಾಲೇಜಿನ ವಿವಿಧ ಕೋರ್ಸುಗಳ ವಿದ್ಯಾರ್ಥಿಗಳಿಗೆ ಯುನಿವರ್ಸಿಟಿಯ ರಾ್ಯಂಕ್ಗಳು ಬಂದಿರುವುದು ಹೆಮ್ಮೆಯ ವಿಷಯವಾಗಿದೆ. ಅವರ ಆಶ್ರಯದಲ್ಲಿ ಪ್ರಾಧ್ಯಾಪಕರೆಲ್ಲರೂ ಶಿಸ್ತುಬದ್ಧವಾಗಿ ಪಾಠ ಬೋಧಿಸುತ್ತಿರುವುದು ಸಂತೋಷವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕಾಲೇಜಿನ ನಿಯಮಗಳಿಗೆ ಕಟ್ಟುನಿಟ್ಟಾಗಿ ನಡೆಯಬೇಕು. ಮೊಬೈಲ್ ಗಳ ಬಳಕೆಯನ್ನು ಶಿಕ್ಷಣಕ್ಕೆ ಬಳಸಬೇಕು.ಯಾವುದೇ ರೀತಿಯ ದುಷ್ಚಟಗಳಿಗೆ ವಿದ್ಯಾರ್ಥಿಗಳು ಬಲಿಯಾಗಬಾರದು. ಸಜ್ಜನರ ಜೊತೆ ಸಹವಾಸ ಮಾಡಿ ಆದರ್ಶ ವ್ಯಕ್ತಿತ್ವ ರೂಪಿಸಿಕೊಳ್ಳಬೇಕೆಂದು ಹೇಳಿದರು. ನಮ್ಮ ಕಾಲೇಜಿಗೆ ಉತ್ತರ ಕರ್ನಾಟಕದ ವಿವಿಧ ಊರುಗಳಾದ ಗಂಗಾವತಿ, ಕೊಪ್ಪಳ, ಮಾನವಿ, ಹೊಸಪೇಟ, ಕಲಘಟಗಿ, ಗದಗ, ಶಿರಸಿ ಹೀಗೆ ಮುಂತಾದ ಊರುಗಳ ವಿದ್ಯಾರ್ಥಿಗಳು ಪ್ರವೇಶ ಪಡೆದುಕೊಂಡಿರುವುದು ಸಂತಸ ತಂದಿದೆ. ಕಾಲೇಜಿನ ಸೌಕರ್ಯಗಳ ಸದುಪಯೋಗ ಪಡೆದು ಉಜ್ವಲ ಭವಿಷ್ಯ ಕಟ್ಟಿಕೊಳ್ಳಿರಿ ಎಂದು ವಿದ್ಯಾರ್ಥಿಗಳಿಗೆ ಶುಭಕೋರಿದರು.
ಕು. ಚಿನ್ಮಯಿ ಜಾಗೀರದಾರ ಪ್ರಾರ್ಥಿಸಿದರು. ಡಾ. ಆರ್.ವಿ. ಚಿಟಗುಪ್ಪಿ ಸ್ವಾಗತಿಸಿದರು. ಪ್ರೊ. ಶೃತಿ ಶೆಟ್ಟಿ ವಂದಿಸಿದರು. ಪ್ರೊ. ಮಹಾಂತ ಎಂ. ದೇಸಾಯಿ ನಿರೂಪಿಸಿದರು. ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಪಾಲಕರು ಮತ್ತು ವಿದ್ಯಾರ್ಥಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 