ಉಪ್ಪನಾಯಕನಹಳ್ಳಿ ಸರ್ಕಾರಿ ಶಾಲೆ ಉಳಿಸಲು ಆಗ್ರಹಿಸಿ ವಿದ್ಯಾರ್ಥಿಗಳ - ಪೋಷಕರ ಪ್ರತಿಭಟನೆ

ಉಪ್ಪನಾಯಕನಹಳ್ಳಿ ಸರ್ಕಾರಿ ಶಾಲೆ ಉಳಿಸಲು ಆಗ್ರಹಿಸಿ ವಿದ್ಯಾರ್ಥಿಗಳ - ಪೋಷಕರ ಪ್ರತಿಭಟನೆ Students and parents protest demanding to save Uppanayakanahalli Government School

                 ಹೊಸಪೆಟೆ 05: ಹಗರಿಬೊಮ್ಮನಹಳ್ಳಿ ತಾಲೂಕಿನ ಉಪ್ಪನಾಯಕನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರಕ್ಷಿಸಲು ಆಗ್ರಹಿಸಿ ವಿದ್ಯಾರ್ಥಿಗಳ ಪೋಷಕರ ಪ್ರತಿಭಟನೆ ಊರಿನ ಬಸ್ ತಂಗುದಾಣದ ಹತ್ತಿರ ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆ  ನೇತೃತ್ವದಲ್ಲಿ ನಡೆಯಿತು. ಪ್ರತಿಭಟನೆ ಉದ್ದೇಶಿಸಿ ಎಐಡಿಎಸ್‌ಓ ಜಿಲ್ಲಾಧ್ಯಕ್ಷರಾದ ರವಿಕಿರಣ್ ಜೆ ಪಿ ಅವರು ಮಾತನಾಡಿ ಉಪ್ಪನಾಯಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಿ, ವರದಪುರದಲ್ಲಿ ಕೆಪಿಎಸ್ ಮ್ಯಾಗ್ನೆಟ್ ಶಾಲೆಯನ್ನು ಮಾಡಲು ಸರ್ಕಾರ ಮುಂದಾಗಿದೆ. 

                 ಉಪ್ಪನಾಯಕನಹಳ್ಳಿಯಿಂದ ಮೂರು ಕಿಲೋಮೀಟರ್ ದೂರದಲ್ಲಿರುವ ವರದಾಪುರದ ಕೆಪಿಎಸ್ ಶಾಲೆಗೆ 5 ವರ್ಷದ ಮಕ್ಕಳು ಹೇಗೆ ಹೋಗಬೇಕು? ಕೆಪಿಎಸ್ ಮ್ಯಾಗ್ನೆಟ್ ಶಾಲೆ ಆದ ನಂತರ ವಿದ್ಯಾರ್ಥಿಗಳನ್ನು ಕರೆದೊಯ್ಯಲು ಉಚಿತವಾಗಿ ಬಸ್ ವ್ಯವಸ್ಥೆ ಮಾಡಲಾಗುತ್ತದೆ ಎನ್ನುವ ಸರ್ಕಾರ, ಬಸ್ ಬಿಡುವ ವ್ಯವಸ್ಥೆಯ ಜವಾಬ್ದಾರಿಯನ್ನು ತೆಗೆದುಕೊಳ್ಳದೆ, ಬಸ್ ಬಿಡುವ ವ್ಯವಸ್ಥೆಯನ್ನು ಹಾಗೂ ಶಾಲೆ ನಡೆಸಿಕೊಂಡು ಹೋಗುವ ಜವಾಬ್ದಾರಿಯನ್ನು ನಿರ್ವಹಿಸಬೇಕೆಂದು ಆದೇಶ ಹೊರಡಿಸಿದೆ.

                 ಸರ್ಕಾರ ಶಿಕ್ಷಣ ನೀಡುವ ತನ್ನ ಜವಾಬ್ದಾರಿಯಿಂದ ನುಣಿಚಿಕೊಂಡು, ಖಾಸಗಿ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ಪ್ರಾರಂಭಿಸಿ, ಬಡ ಮತ್ತು ಮಧ್ಯಮ ವರ್ಗದ, ರೈತ ಕಾರ್ಮಿಕರ ಮಕ್ಕಳಿಂದ ಶಿಕ್ಷಣ ಪಡೆಯುವ ಹಕ್ಕನ್ನು ಕಿತ್ತುಕೊಳ್ಳಲಾಗುತ್ತಿದೆ.  ನಮ್ಮ ದೇಶದ ಮಹಾನ್ ಮಾನವತಾವಾದಿ ಜ್ಯೋತಿರಾವ್ ಫುಲೆ ಮತ್ತು ಸಾವಿತ್ರಿ ಬಾಯಿ ಫುಲೆ ಅವರು ಇಡೀ ಜೀವನವನ್ನು ಶಿಕ್ಷಣಕ್ಕಾಗಿ ದುಡಿದು,  ಶೋಷಿತರಿಗೆ, ದಲಿತರಿಗೆ ಮತ್ತು ಹೆಣ್ಣು ಮಕ್ಕಳಿಗೆ ಅಕ್ಷರ ಕ್ರಾಂತಿಯ ಹರಿಕಾರರಾದರು. ಭಗತ್ ಸಿಂಗ್, ನೇತಾಜಿ ಅವರ ಕನಸು, "ಸ್ವಾತಂತ್ರ್ಯ ನಂತರ ದೇಶದಲ್ಲಿ ಹುಟ್ಟಿದ ಪ್ರತಿಯೊಬ್ಬ ಮಗುವಿಗೂ ಶಿಕ್ಷಣ ನೀಡುವುದು ಸರ್ಕಾರದ ಜವಾಬ್ದಾರಿ" ಎಂದು ಸಾರಿದರು.

                    ಅಧಿಕಾರಿದ ಚುಕ್ಕಾಣಿ ಹಿಡಿದ ಎಲ್ಲಾ ಸರ್ಕಾರಗಳು ಬಡ ಮಕ್ಕಳಿಂದ ಶಿಕ್ಷಣವನ್ನು ಕಿತ್ತುಕೊಂಡು, ಸಮಾಜವನ್ನು ಇನ್ನೂಷ್ಟು ಕತ್ತಲೆ ಕೋಣೆಯಲ್ಲಿ ಹಾಕುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕ ಶಿಕ್ಷಣ ಉಳಿಸಿ ಜನರ ಸಮಿತಿ ನೇತೃತ್ವದಲ್ಲಿ ಸರ್ಕಾರಿ ಶಾಲೆಗಳನ್ನು ರಕ್ಷಿಸಿ, ಬಲಪಡಿಸಲು ಪ್ರಬಲ ಹೋರಾಟ ಕಟ್ಟಬೇಕು. ಹಾಗೂ ಶಿಕ್ಷಣವನ್ನು ಖಾಸಗೀಕರಣ ಮಾಡುತ್ತಿರುವ ಎಲ್ಲಾ ಸರ್ಕಾರಗಳ ವಿರುದ್ಧ ಜಾತಿ, ಧರ್ಮ ಬೇಧಬಾವವಿಲ್ಲದೆ ಎಲ್ಲಾರು ಒಂದಾಗಿ ಮತ್ತೊಂದು ನವೊದಯ ಚಳುವಳಿ ಕಟ್ಟಲು ಮುಂದಾಗಬೇಕು ಎಂದು ಕರೆ ನೀಡಿದರು. ಈ ಪ್ರತಿಭಟನೆಯಲ್ಲಿ ಂಋಙಓ ಸದಸ್ಯರಾದ ಶ್ರೀನಿವಾಸ, ಎಸ್‌.ಡಿ.ಎಮ್‌.ಸಿ ಅಧ್ಯಕ್ಷರು ಉಮೇಶ್ ವಿ, ಗ್ರಾಮ ಪಂಚಾಯಿತಿ ಸದಸ್ಯರಾದ ಪರಶುರಾಮ  ಹಾಗೂ ಊರಿನ ಸರ್ಕಾರಿ ಶಾಲೆ ಉಳಿಸುವ ಸಮಿತಿ ಅಧ್ಯಕ್ಷ ಬಿ. ಬಸವರಾಜ್, ಕಾರ್ಯದರ್ಶಿ ಮೈಲಪ್ಪ, ಜಂಟಿ ಕಾರ್ಯದರ್ಶಿ ಡಿ. ಕೊಟ್ರ​‍್ಪ ಊರಿನ ಹಿರಿಯರು ಮತ್ತು ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.