ಶಾಲೆಗೆ ವಿದ್ಯಾರ್ಥಿಗಳಿಂದ ಊಟದ ಗ್ಲಾಸ್ ದೇಣಿಗೆ
Students donate lunch glasses to school
ಕೊಪ್ಪಳ 14 : ನಗರದ ಬಾಲಕರ ಪದವಿಪೂರ್ವ ಕಾಲೇಜು ಮತ್ತು ಪ್ರೌಢಶಾಲೆಗೆ ಹಳೆಯ ವಿದ್ಯಾರ್ಥಿ 1998=99ರ ಟಛಿ ಬಳಗದಿಂದ ಮಹತ್ವದ ಸೇವಾಕಾರ್ಯ ನೆರವೇರಿಸಲಾಯಿತು. ಶಾಲೆಯ ವಿದ್ಯಾರ್ಥಿಗಳ ಉಪಯೋಗಕ್ಕಾಗಿ ಹಳೆಯ ವಿದ್ಯಾರ್ಥಿಗಳು ಒಟ್ಟಾಗಿ 150 ಊಟದ ತಟ್ಟೆಗಳು ಹಾಗೂ 150 ನೀರಿನ ಗ್ಲಾಸ್ಗಳನ್ನು ದೇಣಿಗೆಯಾಗಿ ನೀಡಿದರು.ಈ ದೇಣಿಗೆ ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳಾದ ಮಹೆಬೂಬ,ಮಣ್ಣೂರ್ ಅಮರೇಶ ಕೋರಿ,ಗವಿ ಮೊರಾನಾಳ್ ಪಕ್ರುಸಾಬ, ನದಾಫ್ ಚಂದ್ರಶೇಖರ, ಅಲಿನವಾಜ ಹುಸೇನ, ರಂಗನಾಥಲಾಲ್ ಸಾಬ್ ಹುಲಿಹೈದರ್ ಕೋಳುರು, ಮಾರುತಿ ಇಂದರಗಿ ಆಬಿದ ಹುಸೇನ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಕಾರ್ಯಕ್ರಮದ ಸಂದರ್ಭದಲ್ಲಿ ಶಾಲೆಯ ಗಣಿತ ಶಿಕ್ಷಕರಾದ ಮಹೇಶ್ ಸೊಪ್ಪಿಮಠ ಹಾಗೂ ಕ್ರಾಫ್ಟ್ ಶಿಕ್ಷಕರಾದ ನದಾಫ್ ಸರ್ ಮತ್ತು ಶಾಲೆಯ ಮುಖ್ಯೋಪಾಧ್ಯಾಯರಾದ ಶರಣಗೌಡರು ಮತ್ತು ಶಾಲೆಯ ಎಲ್ಲ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಹಳೆಯ ವಿದ್ಯಾರ್ಥಿಗಳ ಸೇವಾ ಮನೋಭಾವವನ್ನು ಪ್ರಶಂಸಿಸಿದರು.ಈ ಸಂದರ್ಭದಲ್ಲಿ ನಿವೃತ್ತಿ ವೃತ್ತಿ ಶಿಕ್ಷಕ ಹಾಗೂ ಪ್ರಶಸ್ತಿ ಪುರಸ್ಕೃತ ಅಮೀರ್ ಹಮ್ಜಾ ನದಾಫ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರುಶಾಲೆಯ ಅಭಿವೃದ್ಧಿಗೆ ಹಾಗೂ ವಿದ್ಯಾರ್ಥಿಗಳ ಕಲ್ಯಾಣಕ್ಕೆ ಹಳೆಯ ವಿದ್ಯಾರ್ಥಿಗಳಿಂದ ದೊರೆತ ಈ ಸಹಕಾರ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಇಂತಹ ಸೇವಾ ಕಾರ್ಯಗಳು ಮುಂದಿನ ಪೀಳಿಗೆಯ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿವೆ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿತು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 