ಜಾಲವಾದ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
Students from Jalavada High School selected for district level
ದೇವರಹಿಪ್ಪರಗಿ 28: ತಾಲ್ಲೂಕಿನ ಜಾಲವಾದ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ರಸಪ್ರಶ್ನೆ ಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಿಂದಗಿ ತಾಲ್ಲೂಕಿನ ಕನ್ನೊಳ್ಳಿ ಗ್ರಾಮದ ಯೋಗಾಯೋಗ ಪಬ್ಲಿಕ್ ಸ್ಕೂಲ್ ನಲ್ಲಿ ದಿ. 27ರಂದು ಜರುಗಿದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ರಸಪ್ರಶ್ನೆ ಯಲ್ಲಿ ಜಾಲವಾದ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಕುಮಾರಿ ಲಕ್ಷ್ಮಿ.ಬ.ಕಬಾಡಗಿ ಹಾಗೂ ಭಾಗ್ಯಶ್ರೀ.ಬ.ಕಬಾಡಗಿ ಇಬ್ಬರು ಸಹೋದರಿಯರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ನಂತರ ಸಿಂದಗಿಯ ಶಿಕ್ಷಣ ಸಂಯೋಜಕರಾದ ಸತ್ಯಪ್ಪ ಕಪನಿಂಬರಗಿ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.ಈ ಸಂದರ್ಭದಲ್ಲಿ ರಸಪ್ರಶ್ನೆಯ ನಿರ್ಣಾಯಕರಾಗಿ ಕಾರ್ಯ ನಿರ್ವಹಿಸಿದ ಅರ್ಜುನ ಮಲ್ಲೇವಾಡಿ, ಗೀರೀಶ ಇನಾಮದಾರ, ಪಿ.ಎಸ್.ಅಗ್ನಿ ಹಾಗೂ ಕೆ.ಪಿ.ಎಸ್ ಶಾಲೆಯ ಎಸ್.ಜೆ.ನಾಟೀಕಾರ ಶಿಕ್ಷಕರು ಇದ್ದರು.ಎಲ್ಲರೂ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ವಿಜೇತರಾಗಲಿ ಎಂದು ಶುಭ ಹಾರೈಸಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 