ತಾಂತ್ರಿಕ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಟ್ರೈನಿ ಇಂಜಿನಿಯರ್ ಹುದ್ದೆಗೆ ಆಯ್ಕೆ
Students of technical education institutes selected for the post of trainee engineer
ತಾಂತ್ರಿಕ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಟ್ರೈನಿ ಇಂಜಿನಿಯರ್ ಹುದ್ದೆಗೆ ಆಯ್ಕೆ
ಧಾರವಾಡ 24: ಪ್ರತಿಷ್ಠಿತ ಜನತಾ ಶಿಕ್ಷಣ ಸಮಿತಿಯ ಕೆ.ಎಚ್.ಕಬ್ಬೂರ ತಾಂತ್ರಿಕ ಶಿಕ್ಷಣ ಸಂಸ್ಥೆಯ ಮೆಕ್ಯಾನಿಕಲ್ ವಿಭಾಗದ 5, ಆಟೋಮೊಬೈಲ್ ವಿಭಾಗದ 11, ಒಟ್ಟು 16 ವಿದ್ಯಾರ್ಥಿಗಳು ಬೆಂಗಳೂರಿನ ಟೊಯೋಟಾ ಇಂಡಸ್ಟ್ರೀಸ್ ಇಂಜಿನ್ ಇಂಡಿಯಾ ಪ್ರೈ.ಲಿಮಿಟೆಡ್ ಕಂಪನಿಯಲ್ಲಿ ಡಿಪ್ಲೋಮಾ ಟ್ರೈನಿ ಇಂಜಿನಿಯರ್ ಹುದ್ದೆಗೆ ಆಯ್ಕೆಯಾಗಿರುತ್ತಾರೆ. ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳಾದ ಡಾ.ಅಜಿತ ಪ್ರಸಾದ ಅವರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಜನತಾ ಶಿಕ್ಷಣ ಸಮಿತಿಯ ಆಡಳಿತಾಧಿಕಾರಿಗಳಾದ ಅರಿಹಂತ ಪ್ರಸಾದ, ಮಂಜುನಾಥೇಶ್ವರ ಐಟಿಐ ಕಾಲೇಜಿನ ಪ್ರಾಚಾರ್ಯರಾದ ಮಹಾವೀರ ಉಪಾಧ್ಯೆ, ಸಂಸ್ಥೆಯ ಪ್ರಾಚಾರ್ಯರಾದ ವೇದಾವತಿ ಆರ್.ತಿವಾರಿ, ಮೆಕ್ಯಾನಿಕಲ್ ಹಾಗೂ ಆಟೋಮೊಬೈಲ್ ವಿಭಾಗಗಳ ಮುಖ್ಯಸ್ಥರಾದ ಆರ್.ಬಿ.ಜೋಗಳೆ ಮತ್ತು ರವಿ ಯಮಕನಮರ್ಡಿ, ಪ್ಲೇಸಮೆಂಟ್ ಅಧಿಕಾರಿಗಳಾದ ಜಿ.ಬಿ.ಜಗದ ಹಾಗೂ ಜಯಶ್ರೀ ಅಳಗುಂಡಿ ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 