ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಿ : ಮೇಟಿ
Students should develop a competitive spirit: Matee
ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಿ : ಮೇಟಿ
ಬಾಗಲಕೋಟೆ 15: ವಿದ್ಯಾರ್ಥಿ ಜೀವನದಲ್ಲಿ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳುವದರೊಂದಿಗೆ ಉತ್ಸಾಹದಿಂದ ಎಲ್ಲ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು ಎಂದು ಶಾಸಕ ಹಾಗೂ ಬಿಟಿಡಿಎ ಅಧ್ಯಕ್ಷ ಎಚ್.ವಾಯ್.ಮೇಟಿ ಹೇಳಿದರು.
ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನವನಗರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಐಎಎಸ್ ಐಪಿಎಸ್ ನಂತಹ ದೊಡ್ಡ ಮಟ್ಟದ ಕನಸುಗಳನ್ನಿಟ್ಟುಕೊಂಡು ಅದರ ಸಲುವಾಗಿ ನಿರಂತರ ಅಧ್ಯಯನ ಕೈಗೊಳ್ಳಬೇಕು ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಯುವಜನೋತ್ಸವದಲ್ಲಿ ವಿವಿಧ ಸ್ಪರ್ಧೆಗಳನ್ನ ಆಯೋಜಿಸಲಾಗಿದ್ದು, ಅದರಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುವಂತೆ ಅದರಲ್ಲೂ, ಭಾಷಣ ಸ್ಪರ್ಧೆ ವಿಷಯವಾದ ತುರ್ತು ಪರಿಸ್ಥಿತಿ ಕುರಿತಂತೆ ವಿದ್ಯಾರ್ಥಿಗಳು ಅರಿತುಕೊಳ್ಳುವುದು ಅವರ ಜ್ಞಾನ ವಿಸ್ತಾರಕ್ಕೆ ಅನುಕೂಲ ಆಗುವುದು ಎಂದರು.
ಜಿಲ್ಲಾಧಿಕಾರಿ ಸಂಗಪ್ಪ ಮಾತನಾಡಿ, ಯುವಜನೋತ್ಸವವು ಕೇವಲ ಸಾಂಸ್ಕೃತಿಕ ಕಾರ್ಯಕ್ರಮವಲ್ಲ. ಇದು ಪ್ರತಿ ವಿದ್ಯಾರ್ಥಿಯಲ್ಲಿರುವ ಪ್ರತಿಭೆಯನ್ನು ಗುರುತಿಸಲು ಮತ್ತು ಅದನ್ನು ಬೆಳಗಿಸಲು ಒಂದು ವೇದಿಕೆ, ನೃತ್ಯ, ಸಂಗೀತ, ನಾಟಕ, ಕ್ರೀಡೆ ಅಥವಾ ತಂತ್ರಜ್ಞಾನ ಯಾವ ಕ್ಷೇತ್ರದಲ್ಲಿದ್ದರೂ ನಿಮ್ಮ ಪ್ರತಿಭೆಯನ್ನು ಹಂಚಿಕೊಳ್ಳಬೇಕು. ಈ ದಿನದಲ್ಲಿ ಗೆಲುವು ಅಥವಾ ಸೋಲು ಮುಖ್ಯವಲ್ಲ. ಭಾಗವಹಿಸುವುದು ಮುಖ್ಯವೆಂದರು.
ಜಿಲ್ಲಾ ಪಂಚಾಯತ್ ಸಿಇಒ ಶಶಿಧರ ಕುರೇರ್ ಮಾತನಾಡಿ ಯುವಜನೋತ್ಸವ ಕಾರ್ಯಕ್ರಮವೂ ವಿದ್ಯಾರ್ಥಿಗಳಲ್ಲಿನ ಪಠ್ಯೇತರ ಕೌಶಲ್ಯಗಳನ್ನ ಗುರುತಿಸಿ, ಬೆಂಬಲಿಸಲು ಆಯೋಜಿಸಲಾಗಿದ್ದು, ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಸವಿತಾ ಲೆಂಕಣ್ಣವರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಅರುಣಕುಮಾರ ಗಾಳಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 