ವಿದ್ಯಾರ್ಥಿಗಳು ನಾಯಕತ್ವ ಗುಣ ಬೆಳೆಸಿಕೊಳ್ಳಿ: ಪ್ರೊ.ಎಂ ಮುನಿರಾಜು
Students should develop leadership qualities: Prof. M Muniraju
ಬಳ್ಳಾರಿ 17 : ವಿದ್ಯಾರ್ಥಿಗಳಲ್ಲಿ ಸಮಾಜ ಸೇವೆ, ನಾಯಕತ್ವ ಗುಣ ಹಾಗೂ ಸಾಮಾಜಿಕ ಸೇವಾ ಮನೋಭಾವ ಬೆಳೆಸಲು ರಾಷ್ಟ್ರೀಯ ಸೇವಾ ಯೋಜನೆಯು ಹಗಲಿರುಳು ಶ್ರಮಿಸುತ್ತಿದೆ ಎಂದು ವಿಶ್ರೀಕೃವಿವಿ ಕುಲಪತಿಗಳಾದ ಪ್ರೊ ಎಂ ಮುನಿರಾಜು ಹೇಳಿದರು.
ವಿಶ್ವವಿದ್ಯಾಲಯದ ಡಾ. ಬಿ ಆರ್ ಅಂಬೇಡ್ಕರ್ ಸಭಾಂಗಣದಲ್ಲಿ ವಿವಿ ರಾಷ್ಟ್ರೀಯ ಸೇವಾ ಯೋಜನೆ ಕೋಶವು ಆಯೋಜಿಸಿದ್ದ ವಿಶ್ವವಿದ್ಯಾಲಯ ಮಟ್ಟದ ರಾಷ್ಟ್ರೀಯ ಸೇವಾ ಯೋಜನೆಯ 2023-24ನೇ ಸಾಲಿನ ಉತ್ತಮ ಎನ್‌ಎಸ್‌ಎಸ್. ಘಟಕ ಕಾರ್ಯಕ್ರಮ ಅಧಿಕಾರಿಗಳು ಮತ್ತು ಸ್ವಯಂ ಸೇವಕ/ಸೇವಕಿಯರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ವಿವಿ ವ್ಯಾಪ್ತಿಗೆ ಒಳಪಡುವ ರಾ.ಸೇ.ಯೋ. ಘಟಕಗಳನ್ನು ಹೊಂದಿರುವ ಪದವಿ ಮಹಾವಿದ್ಯಾಲಯಗಳ ಪ್ರಾಂಶುಪಾಲರುಗಳಿಗೆ ಮತ್ತು ಘಟಕಗಳ ಕಾರ್ಯಕ್ರಮಧಿಕಾರಿಗಳಿಗೆ ‘ಒಂದು ದಿನದ ನಾಯಕತ್ವ ತರಬೇತಿ ಶಿಬಿರ’ವನ್ನು ಗಣ್ಯರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಚಾಲನೆ ನೀಡಿದರು.
ನಾಯಕತ್ವ ಗುಣ ಎಲ್ಲರಲ್ಲೂ ಕಾಣಲು ಸಾಧ್ಯವಿಲ್ಲ. ನಾಯಕತ್ವವನ್ನು ವಹಿಸಿಕೊಂಡಾಗ ನಾಯಕತ್ವದ ಪ್ರಜ್ಞೆ ಬೆಳೆಯುತ್ತದೆ. ಎಲ್ಲವನ್ನು ಮೆಟ್ಟಿ ನಿಲ್ಲುವವನೆ ನಿಜವಾದ ನಾಯಕ. ವಿದ್ಯಾರ್ಥಿಗಳನ್ನು ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಸೀಮಿತವಾಗಿರಿಸದೆ ಸಾಮಾಜಿಕವಾಗಿ ತೊಡಗಿಸಿಕೊಳ್ಳಲು ಶಿಕ್ಷಕರು ಉತ್ತೇಜಿಸಬೇಕು ಎಂದು ಹೇಳಿದರು.
ವಿವಿಯ ಮೌಲ್ಯಮಾಪನ ಕುಲಸಚಿವರಾದ ಪ್ರೊ ಎನ್ ಎಂ ಸಾಲಿ ಮಾತನಾಡಿ, ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿಯನ್ನು ಅರಿತುಕೊಳ್ಳಬೇಕು ಎಂಬುದು ಮಹಾತ್ಮ ಗಾಂಧೀಜಿಯವರ ಕನಸಾಗಿತ್ತು. ನಾಯಕನಾದವನು ತ್ಯಾಗ ಮನೋಭಾವವನ್ನು ಹೊಂದಿರಬೇಕು. ಎಲ್ಲರೊಂದಿಗೆ ಬೆರೆತು ಎಲ್ಲವನ್ನು ಸರಿದೊಗಿಸಿಕೊಂಡು ಹೋಗುವ ದಿಟ್ಟತನವಿರಬೇಕು ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯ ಮಟ್ಟದ ರಾಷ್ಟ್ರೀಯ ಸೇವಾ ಯೋಜನೆಯ 2023-24ನೇ ಸಾಲಿನ ಉತ್ತಮ ಎನ್‌ಎಸ್‌ಎಸ್ ಘಟಕ ಕಾರ್ಯಕ್ರಮ ಅಧಿಕಾರಿಗಳು ಮತ್ತು ಸ್ವಯಂ ಸೇವಕ/ಸೇವಕಿಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ರಾ.ಸೇ.ಯೋ. ಸಂಯೋಜನಾಧಿಕಾರಿಗಳಾದ ಡಾ ಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ ಆರ್ ವಿ ಚಂದ್ರಶೇಖರ ವೇದಿಕೆಯಲ್ಲಿದ್ದರು.
ಕನ್ನಡ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ ಕೆ ಎಸ್ ಶಿವಕುಮಾರ ನಿರೂಪಿಸಿದರು. ಡಾ ಗಾದೆಪ್ಪ ವಂದಿಸಿದರು. ವಿವಿಧ ನಿಕಾಯಗಳ ಡೀನರು, ವಿಭಾಗಗಳ ಮುಖ್ಯಸ್ಥರುಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಸಂಶೋಧನಾ ವಿದ್ಯಾರ್ಥಿಗಳು, ವಿದ್ಯಾರ್ಥಿಗಳು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 