ವಿದ್ಯಾರ್ಥಿಗಳು ವಿದ್ಯಾರ್ಜನೆಗೆ ಮಹತ್ವ ನೀಡಬೇಕು. ಪ್ರೊ.ಬಿ.ಎ.ಪಾಟೀಲ
Students should give importance to education. Prof. B.A. Patil
ವಿದ್ಯಾರ್ಥಿಗಳು ವಿದ್ಯಾರ್ಜನೆಗೆ ಮಹತ್ವ ನೀಡಬೇಕು. ಪ್ರೊ.ಬಿ.ಎ.ಪಾಟೀಲ
ಕಾಗವಾಡ, 07 : ಪಟ್ಟಣದ ಶಿವಾನಂದ ಮಹಾವಿದ್ಯಾಲಯದ ದಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಬಿಕಾಂ ಮೊದಲ ವರ್ಷಕ್ಕೆ ನೂತನವಾಗಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗಾಗಿ ಪರಿಚಯಾತ್ಮಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಮುಖ್ಯ ಅತಿಥಿಗಳಾಗಿ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಕಾರ್ಯದರ್ಶಿ ಪ್ರೊ. ಬಿ.ಎ. ಪಾಟೀಲ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತ, ವಿದ್ಯಾರ್ಥಿಗಳು ಏಕಾಗ್ರತೆಯಿಂದ ಶ್ರಮ ವಹಿಸಿ ಸಾಧನೆ ಮಾಡಬೇಕು. ಸ್ತು, ಸಮಯ ಪ್ರಜ್ಞೆಯನ್ನು ಪಾಲಿಸಬೇಕು ಎಂದರು.
ಇನ್ನೋರ್ವ ಅತಿಥಿಗಳಾಗಿ ಆಗಮಿಸಿದ ಮಹಾವಿದ್ಯಾಲಯದ ಆಡಳಿತಾಧಿಕಾರಿ ಮೇಜರ್ ವ್ಹಿ.ಎಸ್. ತುಗಶೆಟ್ಟಿ ಮಾತನಾಡಿ, ಜೀವನದಲ್ಲಿ ಶಿಸ್ತು ಮುಖ್ಯ. ಶಿಸ್ತು ನಮ್ಮನ್ನು ಪ್ರಭಾವಿ ವ್ಯಕ್ತಿಯನ್ನಾಗಿಸುತ್ತದೆ. ಮಹಾವಿದ್ಯಾಲಯದ ಪ್ರಾಧ್ಯಾಪಕರು ಮಾರ್ಗದರ್ಶಕರಾಗಿ ಸೇವೆ ಸಲ್ಲಿಸುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಸ್.ಪಿ. ತಳವಾರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ. ವಿದ್ಯಾರ್ಥಿಗಳು ಕಾಲೇಜಿನ ಗ್ರಂಥಾಲಯ, ಒಳಕ್ರೀಡಾಂಗಣ, ಕಂಪ್ಯೂಟರ್ ಲ್ಯಾಬ, ಭಾಷಾ ಪ್ರಯೋಗಾಲಯ ಹಾಗೂ ಇನ್ನಿತರ ಸೌಲಭ್ಯಗಳ ಸದುಪಯೋಗ ಪಡೆದುಕೊಂಡು ತಮ್ಮ ವ್ಯಕ್ತಿತ್ವದ ಸರ್ವಾಂಗೀಣ ಬೆಳವಣಿಗೆ ಮಾಡಿಕೊಳ್ಳಬೇಕೆಂದು ಹೇಳಿದರು.
ಐಕ್ಯೂಎಸಿ ಸಂಯೋಜಕರಾದ ಪ್ರೊ. ಬಿ.ಡಿ. ಧಾಮಣ್ಣವರ ಸಂಸ್ಥೆಯ ಗುರಿ ಉದ್ದೇಶಗಳನ್ನು ಪರಿಚಯಿಸಿದರು. ಪ್ರೊ. ಎಸ್.ಎಂ. ಘೋರೆ್ಡ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ವಿದ್ಯಾರ್ಥಿ ಕಲ್ಯಾಣಾಧಿಕಾರಿ ಪ್ರೊ. ಜೆ.ಕೆ. ಪಾಟೀಲ ಮಹಾವಿದ್ಯಾಲಯದ ನಿಯಮಗಳ ಬಗ್ಗೆ ನೂತನ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಪ್ರೊ. ವ್ಹಿ.ಬಿ. ಬುರ್ಲೆ ಸ್ವಾಗತಿಸಿದರು. ಪ್ರೊ. ಎಸ್.ಎಸ್. ಫಡತರೆ ಮನರಂಜನಾ ಕಾರ್ಯಕ್ರಮ ನಡೆಸಿದರು. ಮಹೇಕ ಅಪರಾಜ ನಿರೂಪಿಸಿದರು. ಪ್ರೊ. ವಿ.ವಿ. ಪಾಟೀಲ ವಂದಿಸಿದರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಾಣಿಜ್ಯ ವಿಭಾಗದ ಎಲ್ಲ ವಿದ್ಯಾರ್ಥಿಗಳು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 