ವಿದ್ಯಾರ್ಥಿಗಳು ಮಾನವಸಂಪನ್ಮೂಲವಾಗಿ ಬೆಳೆಯಬೇಕು: ಬಿಇಓ ರಾಮಕೃಷ್ಣ ಸದಲಗಿ
Students should grow as human resources: BEO Ramakrishna Sadalagi
ಧಾರವಾಡ : ವಿದ್ಯಾರ್ಥಿಗಳು ಆಳವಾದ ಜ್ಞಾನಾರ್ಜನೆಯೊಂದಿಗೆ ಶ್ರೇಷ್ಠ ಕೌಶಲ, ಕ್ರಿಯಾಶೀಲತೆ, ಸಮಯಪ್ರಜ್ಞೆ ಹಾಗೂ ಮೇರು ಮೌಲ್ಯಗಳನ್ನು ರೂಢಿಸಿಕೊಂಡು ದೇಶ ಬಯಸುವ ಉತ್ಕೃಷ್ಟ ಮಾನವಸಂಪನ್ಮೂಲವಾಗಿ ಬೆಳೆಯಬೇಕು. ರಾಷ್ಟ್ರವಿಕಾಸದ ಮೂಲಶಕ್ತಿ ಮಾನವಸಂಪನ್ಮೂಲವೇ ಆಗಿದೆ ಎಂದು ಧಾರವಾಡ ಗ್ರಾಮೀಣ ತಾಲೂಕು ಬಿಇಓ ರಾಮಕೃಷ್ಣ ಸದಲಗಿ ನುಡಿದರು. ಅವರು ತಾಲೂಕಿನ ತಿಮ್ಮಾಪೂರ ವಿದ್ಯಾಚೇತನ ಶಿಕ್ಷಣ ಸಂಸ್ಥೆಯ ಜ್ಞಾನಜ್ಯೋತಿ ವಿದ್ಯಾಲಯದ ಆಂಗ್ಲಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ವತಿಯಿಂದ ಸಮೀಪದ ಠಾಕೂರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಜ್ಞಾನಜ್ಯೋತಿ ಉತ್ಸವದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು. ವಿದ್ಯಾರ್ಥಿಗಳು ನಿರಂತರ ಕಲಿಕಾ ಮನೋಭಾವ, ಸೃಜನಶೀಲತೆ, ಸಂಶೋಧನಾ ದೃಷ್ಟಿ, ನಾಯಕತ್ವ, ಪ್ರಾಮಾಣಿಕತೆ, ಹೊಣೆಗಾರಿಕೆ, ಸಹಾನುಭೂತಿ, ಸಹನಶೀಲತೆ, ಆತ್ಮವಿಶ್ವಾಸ ಬೆಳೆಸಿಕೊಂಡಾಗ ಸಶಕ್ತ ಮಾನವಸಂಪನ್ಮೂಲವಾಗಿ ಹೊರಹೊಮ್ಮಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳ ಪಾಲಕರು-ಪೋಷಕರು ವ್ಯಾಪಕ ಕಾಳಜಿವಹಿಸಬೇಕೆಂದು ಸಲಹೆ ನೀಡಿದರು.
ಇನ್ನೋರ್ವ ಅತಿಥಿ ‘ಜೀವನ ಶಿಕ್ಷಣ’ ಮಾಸಪತ್ರಿಕೆಯ ವಿಶ್ರಾಂತ ಸಂಪಾದಕ ಗುರುಮೂರ್ತಿ ಯರಗಂಬಳಿಮಠ ಮಾತನಾಡಿ, ವಿದ್ಯಾರ್ಥಿಗಳ ಜೀವನ ಒಂದು ತಪಸ್ಸಿದ್ದಂತೆ. ಅಲ್ಲಿ ಪರಿಶ್ರಮದಿಂದ ಗಳಿಸಿದ ಜ್ಞಾನ, ಅನುಭವ, ನಿರಂತರ ಶಿಸ್ತು, ವ್ಯಾಸಂಗದ ಬದ್ಧತೆ ಇದ್ದಾಗ ನಿರ್ದಿಷ್ಟ ಗುರಿಯನ್ನು ಸಾಧಿಸಿ ಸಂಭ್ರಮಿಸಲು ಸಾಧ್ಯವಾಗುತ್ತದೆ ಎಂದರು. ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಸುರೇಶ ಹಿರೇಮಠ, ಕವಿವಿ ಗಣಿತ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಎಚ್.ಎಸ್. ರಮಣೆ, ಕರ್ನಾಟಕ ಕಾನೂನು ವಿವಿ ಸಹಾಯಕ ಪ್ರಾಧ್ಯಾಪಕ ಡಾ. ಮಂಜಣ್ಣ ಜಂಗವಾಡ, ಕಲಘಟಗಿ ತಾಲೂಕು ಪಾಳೆ ಗ್ರಾಮದ ಎಸ್‌ಎಂಜಿ ಸಂಸ್ಥೆ ಅಧ್ಯಕ್ಷ ಶಿವಾನಂದ ಜವಳಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ವಿದ್ಯಾಚೇತನ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಸಂಗಯ್ಯ ಹಿರೇಮಠ ಅಧ್ಯಕ್ಷತೆವಹಿಸಿದ್ದರು. ಶಿಕ್ಷಕಿ ಸೆರೂನ್ ಲಗಳಿ ಸ್ವಾಗತಿಸಿದರು. ಮುಖ್ಯಾಧ್ಯಾಪಕಿ ಬಿಂದು ಲಗಳಿ ನಿರೂಪಿಸಿದರು. ಶಾಲಾ ಆಡಳಿತ ಮಂಡಳಿ ನಿರ್ದೇಶಕ ಮೃತ್ಯುಂಜಯ ಹಿರೇಮಠ ವಂದಿಸಿದರು. ಜ್ಞಾನಜ್ಯೋತಿ ಉತ್ಸವದಲ್ಲಿ ಪ್ರದರ್ಶನಗೊಂಡ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನಸೆಳೆದವು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 