ವಿದ್ಯಾಥರ್ಿಗಳು ಕ್ರೀಡಾಮನೋಭಾವದಿಂದ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು: ಶಾಸಕ ಓಲೇಕಾರ
ಹಾವೇರಿ: ಉತ್ತಮ ಜೀವನಕ್ಕಾಗಿ ಶಿಕ್ಷಣ ಎಷ್ಟು ಮುಖ್ಯವೋ ಕ್ರೀಡಾ ಚಟುವಟಿಕೆಗಳು ಅಷ್ಟೇ ಮುಖ್ಯವಾಗಿದೆ. ವಿದ್ಯಾಥರ್ಿಗಳು ಶಿಸ್ತು, ಸಂಯಮ ಹಾಗೂ ಕ್ರೀಡಾಮನೋಭಾವದಿಂದ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು ಎಂದು ಶಾಸಕ ನೆಹರು ಓಲೇಕಾರ ಅವರು ಹೇಳಿದರು.
ಬುಧವಾರ ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾದ ಹಾವೇರಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾಥರ್ಿಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕ್ರೀಡೆಗಳ ಉತ್ತೇಜನಕ್ಕಾಗಿ ಸಕರ್ಾರಿಂದ ಅನೇಕ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಕ್ರೀಡಾಪಟುಗಳು ಈ ಸೌಲಭ್ಯಗಳ ಸದುಪಯೋಗಪಡೆದುಕೊಂಡು ರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ಜಿಲ್ಲೆಯ ಕೀತರ್ಿ ಹೆಚ್ಚಿಸಬೇಕು ಎಂದು ಹೇಳಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿದರ್ೆಶಕ ಎಸ್.ಸಿ. ಪಿರಜಾದೆ ಅವರು ಓಲಂಪಿಕ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸೋಲು-ಗೆಲುವು ಮುಖ್ಯವಲ್ಲ, ಕ್ರೀಡಾಕೂಟದಲ್ಲಿ ಭಾಗವಹಿಸುವುದು ಮುಖ್ಯವಾಗಿದೆ. ನಿಮ್ಮ ಪ್ರಯತ್ನಕ್ಕೆ ಪ್ರತಿಫಲ ಸಿಗುತ್ತದೆ ಹಾಗಾಗಿ ಕ್ರೀಡೆಯಲ್ಲಿ ಯಶಸ್ಸು ಸಾಧಿಸುವರೆಗೆ ನಿರಂತರ ಪ್ರಯತ್ನಮಾಡಬೇಕು ಎಂದು ಹೇಳಿದರು.
ಲ್ಯಾಪ್ಟಾಪ್ ವಿತರಣೆ: ಇದೇ ಸಂದರ್ಭದಲ್ಲಿ ಕಳೆದ 2017-18ನೇ ಸಾಲಿನ ದ್ವಿತೀಯ ಪಿ.ಯು.ಸಿ.ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾಥರ್ಿಗಳಾದ ಕಮಲಾಕ್ಷಿ ಲಮಾಣಿ, ರಾಜೇಶ್ವರಿ ತಿಪ್ಪಣ್ಣನವರ, ವಿರೇಶ ಲಮಾಣಿ, ದೀಪಾ ಲಮಾಣಿ, ರಂಜಿತಾ ಹರಿಜನ ಹಾಗೂ ಲಕ್ಷ್ಮೀ ಶೀಗಿಹಳ್ಳಿ ಅವರಿಗೆ ಶಾಸಕರು ಲ್ಯಾಪ್ಟಾಪ್ ವಿತರಿಸಿದರು.
ಕಾರ್ಯಕ್ರಮದಲ್ಲಿ ಕನರ್ಾಟಕ ರಾಜ್ಯ ಪ.ಪೂ.ಕಾಲೇಜು ನೌಕರರ ಸಂಘದ ಕಾಯರ್ಾಧ್ಯಕ್ಷರು ಹಾಗೂ ಹಾವೇರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಲಿಂಗಯ್ಯ ಹಿರೇಮಠ, ಹಾವೇರಿ ಜಿಲ್ಲಾ ಪ.ಪೂ.ಕಾಲೇಜುಗಳ ವಿವಿಧ ಸಂಘಟನೆಯ ಪದಾಧಿಕಾರಿಗಳಾದ ಎಸ್.ಎಚ್.ಕಬ್ಬಿನಕಂತಿಮಠ, ಎಚ್.ಡಿ.ಗಂಟೇರ, ಬಸವರಾಜ ಕಾಡಪ್ಪನವರ, ಪ್ರಕಾಶ ಡಮ್ಮಳ್ಳಿ, ಜಿ.ಬಿ.ಪೂಜಾರ ಹಲವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 