ವಿದ್ಯಾರ್ಥಿಗಳು ಕಷ್ಟಪಟ್ಟು ಅಭ್ಯಾಸ ಮಾಡಿ ಮುಂದೆ ಬರಬೇಕು
Students should practice hard and come forward.
ವಿದ್ಯಾರ್ಥಿಗಳು ಕಷ್ಟಪಟ್ಟು ಅಭ್ಯಾಸ ಮಾಡಿ ಮುಂದೆ ಬರಬೇಕು
ಗದಗ 24: ಸರ್ಕಾರಿ ಪಾಲಿಟೆಕ್ನಿಕ್, ಗದಗ ಸಂಸ್ಥೆಯಲ್ಲಿ ದಿನಾಂಕ: 23-09-2025 ರಂದು 2025-26ನೇ ಸಾಲಿನ ವಿದ್ಯಾರ್ಥಿ ಸಂಘ, ಕ್ರೀಡಾ ಸಂಘ, ಯುವ ರೆಡ್‌ಕ್ರಾಸ್ ಘಟಕ ಹಾಗೂ ಎನ್.ಎಸ್.ಎಸ್. ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಲ್ಪನಾ ಚಚಡಿ, ಪ್ರಾಚಾರ್ಯರು, ಕೆ.ಎಲ್.ಇ. ಸೊಸೈಟಿ ಸ್ಕೂಲ್, ಗದಗ ರವರು ಮಾತನಾಡಿ, ವಿದ್ಯಾರ್ಥಿಗಳು ಕಷ್ಟಪಟ್ಟು ವಿದ್ಯಾಭ್ಯಾಸ ಮಾಡಿ ಸ್ಪರ್ಧಾತ್ಮಕವಾಗಿ ಸಾಧನೆ ಮಾಡಿ ಜೀವನದಲ್ಲಿ ಮುಂದೆ ಬರಲು ಕರೆ ನೀಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ಭರಮಪ್ಪ ಬಡಪ್ಳವರ ಇವರು ಮಾತನಾಡಿ ಜೀವನದಲ್ಲಿ ನಿಮಗೆ ಉತ್ತಮ ಇಂಜೀನೀಯರಾಗಲು ಸದಾವಕಾಶ ದೊರಕಿದ್ದು ಹಾಗೂ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ದೊರಕಬಹುದಾದ ಸೌಲಭ್ಯಗಳನ್ನು ತಿಳಿಸಿದರು ಮತ್ತು ವಿದ್ಯಾರ್ಥಿಗಳಿಗೆ ಸಂಸ್ಥೆಯಲ್ಲಿ ಗುಣಮಟ್ಟದ ತಾಂತ್ರಿಕ ಶಿಕ್ಷಣ ನೀಡಲು ಕಾಲೇಜಿನ ಆಡಳಿತ ಹಾಗೂ ಎಲ್ಲ ಬೋಧಕ ಸಿಬ್ಬಂದಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು, ವಿದ್ಯಾರ್ಥಿಗಳ ಯಶಸ್ವಿ ಅಭ್ಯಾಸಕ್ಕೆ ಎಲ್ಲ ರೀತಿಯ ಬೆಂಬಲ ನೀಡುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ವಿಭಾಗಾಧಿಕಾರಿಗಳ ಜೈನಾಬಿ, ಕೊಟ್ರಗೌಡ, ಶಿವಾನಂದ ಪೂಜಾರ, ಮಂಗಳಗೌರಮ್ಮ ಶಿವಸಿಂಪಿಗೇರ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಮಂಜೂರ ಹಸನ್ ಹಾಗೂ ಕಛೇರಿ ಅಧೀಕ್ಷಕರುಗಳಾದ ವೀರೇಶ ಕಂಠಿಮಠ ಮತ್ತು ರಮೇಶ ಮಾವಿನಕಾಯಿ ಹಾಗೂ ಸಮಸ್ತ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಕು. ಶ್ರೀನಿವಾಸ ಪಾಟೀಲ, ಕು. ಚಂದ್ರು ಆರ್., ಕು. ಕನಕರಾಯ, ಕು. ಕಾರ್ತಿಕ ಶೀಲವಂತರ, ಕು. ಸ್ನೇಹಾ ನರೇಗಲ್ ಮತ್ತು ಸಂಸ್ಥೆಯ ಎಲ್ಲ ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 