ವಿದ್ಯಾರ್ಥಿಗಳು ಕಠಿಣಶ್ರಮದಿಂದ ವಿದ್ಯಾಭ್ಯಾಸ ಮಾಡಿ ಉತ್ತಮ ಪ್ರಜೆಗಳಾಗಬೇಕು: ಪಾಟೀಲ್
Students should study hard and become good citizens: Patil
ವಿದ್ಯಾರ್ಥಿಗಳು ಕಠಿಣಶ್ರಮದಿಂದ ವಿದ್ಯಾಭ್ಯಾಸ ಮಾಡಿ ಉತ್ತಮ ಪ್ರಜೆಗಳಾಗಬೇಕು: ಪಾಟೀಲ್
ಧಾರವಾಡ 13: ವಿದ್ಯಾರ್ಥಿಗಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಕಠಿಣಶ್ರಮದಿಂದ ವಿದ್ಯಾಭ್ಯಾಸ ಮಾಡಿ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕು. ಗುರು ಹಿರಿಯರಿಗೆ ಗೌರವ ಕೊಡಬೇಕೆಂದು. ಮಹಾಪೌರ ಜ್ಯೋತಿ ಪಾಟೀಲ್ ಹೇಳಿದರು.
ಇಲ್ಲಿನ ಕೆ.ಇ.ಬೋರ್ಡಿನ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಶನಿವಾರ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಹಾಗೂ ವಿದ್ಯಾರ್ಥಿ ಒಕ್ಕೂಟ, ಸಾಂಸ್ಕೃತಿಕ, ಎನ್.ಎಸ್. ಎಸ್ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಕಾಲೇಜು ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಸುನೀತ್ ಪುರೋಹಿತ್ ಮಾತನಾಡಿ, ವಿದ್ಯಾರ್ಥಿಗಳು ಗ್ರಾಮಾಂತರ ವಿದ್ಯಾರ್ಥಿಗಳಿಗಾಗಿ ಕಡಿಮೆ ವೆಚ್ಚದಲ್ಲಿ ಮೌಲ್ಯಧಾರಿತ ಶಿಕ್ಷಣವನ್ನು ನೀಡುತ್ತಿದೆ ಎಂದರು.
ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯ ಎಂ.ಎ. ಸಿದ್ಧಾಂತಿ ಮಾತನಾಡಿ, ವಿದ್ಯಾರ್ಥಿಗಳು ಮಹಾವಿದ್ಯಾಲಯದಲ್ಲಿನ ಮೂಲ ಸೌಕರ್ಯಗಳನ್ನು ಸದುಪಯೋಗ ಪಡಿಸಿಕೊಂಡು ಸಮಾಜದಲ್ಲಿ ಸತ್ಪ್ರಜೆಯಾಗಿ ಬಾಳಬೇಕೆಂದು ತಿಳಿಸಿದರು. ಗುರುರಾಜ್ ಜಮಖಂಡಿ ಮಾತನಾಡಿದರು. ಕುಮಾರಿ ಮೇಘ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಪ್ರೊ. ಈಶ್ವರ ರಾವ್ ಕರಾತ್ ಸ್ವಾಗತಿಸಿದರು. ಬಸವರಾಜ ಉಡಿಕೇರಿ ಪ್ರಾಸ್ತಾವಿಕ ಮಾತನಾಡಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 