ವಿದ್ಯಾರ್ಥಿಗಳು ಶಾಲೆಗಳಲ್ಲಿ ವೇದಿಕೆ ಬಳಸಿಕೊಂಡು ತಮ್ಮ ಪ್ರತಿಭೆ ಹೊರಹಾಕಿ : ದುಂಡಿಗೌಡ್ರ
Students should use the platform in schools to showcase their talent: Dundigowdra
ಶಿಗ್ಗಾವಿ 13 : ವಿದ್ಯಾರ್ಥಿಗಳು ಶಾಲೆಗಳಲ್ಲಿ ಸಿಗುವಂತಹ ವೇದಿಕೆಯನ್ನು ಬಳಸಿಕೊಂಡು ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಿ ತಮ್ಮ ಮುಂದಿನ ಜೀವನದ ದಾರಿಯನ್ನು ಸುಗಮಗೊಳಿಸಿಕೊಳ್ಳಬೇಕೆಂದು ಭಾರತ ಸೇವಾ ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು. ತಾಲೂಕಿನ ದುಂಡಸಿ ಗ್ರಾಮದ ಶ್ರೀ ಗಾಯತ್ರಿ ಕಾನ್ವೆಂಟ್ ಶಾಲೆಯಲ್ಲಿ ನಡೆದ ಸಮೂಹ ಸಂಪನ್ಮೂಲ ಕೇಂದ್ರದ, ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಸೋಲು ಗೆಲುವನ್ನು ಪರಿಗಣಿಸದೆ, ಆತ್ಮವಿಶ್ವಾಸದಿಂದ ಸ್ಪರ್ಧೆಗಳಲ್ಲಿ ಸ್ವಯಂ ಪ್ರೇರಣೆಯಿಂದ ಭಾಗವಹಿಸಬೇಕು ಎಂದು ಹೇಳಿದರು.ಸಾಹಿತಿ ಶಿವಾನಂದ ಮ್ಯಾಗೇರಿ ಮಾತನಾಡಿ, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪ್ರತಿಭಾ ಕಾರಂಜಿ ಒಂದು ನವೀನ ಕಾರ್ಯಕ್ರಮವಾಗಿದ್ದು, ಶಿಕ್ಷಣದ ಜೊತೆಗೆ ನಡೆಯುವ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿಕೊಳ್ಳಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ಹೊಸೂರ ಗ್ರಾಮ ಪಂಚಾಯತ ಅಧ್ಯಕ್ಷೆ ರಾಜೇಶ್ವರಿ ಲಮಾಣಿ, ಎನ್ ಬಿ ಕುಲಕರ್ಣಿ, ನರಹರಿ ಕಟ್ಟಿ, ನಾಗರಾಜ ಸೊರಗೊಂಡ, ಅಜ್ಜಪ್ಪ ಲಮಾಣಿ, ವೀರನಗೌಡ ಪಾಟೀಲ, ಅಣ್ಣಪ್ಪ ಲಮಾಣಿ, ಶಿವನಗೌಡ ಪಾಟೀಲ, ಮಹಾವೀರ ಧಾರವಾಡ ಹಾಗೂ ವಿವಿಧ ಶಾಲೆಗಳ ಶಿಕ್ಷಕ,ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಗ್ರಾಮಸ್ಥರು ಭಾಗವಹಿಸಿದ್ದರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 