ಸುಭಾಷ್ ಚಂದ್ರ ಬೋಸ್ ಜಯಂತಿ ಆಚರಣೆ
ಹೂವಿನ ಹಡಗಲಿ 23: ಅಪ್ರತಿಮ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ರವರ ಆದರ್ಶಗಳನ್ನು ಅಳವಡಿಸಿಕೊಳ್ಳಿರಿ ಎಂದು ಚಿತ್ರಕಲಾ ಶಿಕ್ಷಕರಾದ ದ್ವಾರಕೀಶ್ ರೆಡ್ಡಿ ಎಸ್ ಹೇಳಿದರು.ಪಟ್ಟಣದ ಸರ್ಕಾರಿ ಅನುದಾನಿತ ತುಂಗಭದ್ರಾ ಪ್ರೌಢಶಾಲೆಯಲ್ಲಿ ಗುರುವಾರ ಸುಭಾಷ್ ಚಂದ್ರ ಬೋಸ್ ಜಯಂತಿ ಆಚರಣೆಯಲ್ಲಿ ಅವರು ಮಾತನಾಡಿದರು.ಮುಖ್ಯ ಗುರು ಸುರೇಶ ಅಂಗಡಿ ಮಾತನಾಡಿದರು. ಶಿಕ್ಷಕರಾದ ಸ್ವಾಮಿನಾಥ ರಾಮಸ್ವಾಮಿ ಬಸಪ್ಪ ಕೆ ಲಂಬಾಣಿ ಗಿಡ್ಡಾನಾಯ್ಕ್ ಗೀತಾ ಪಿ ಎಂ ರೇಖಾ ಎಸ್ ಸಂಗಮೇಶ ಸುಂಕದ ಪ್ರಸಾದ್ ಸಂತೋಷ ಕುಮಾರ್ ವೈ ಜಯಮ್ಮ ಇತರರು ಉಪಸ್ಥಿತರಿದ್ದರು.