ಸತತ ಅಧ್ಯಯನದಿಂದ ಸಾಧನೆ ಸಾಧ್ಯ : ಎಸ್. ಪಾಟೀಲ್
ಹೂವಿನ ಹಡಗಲಿ 14: ಎಲ್ಲಾ ವಿಷಯಗಳಲ್ಲಿ ಸತತ ಅಧ್ಯಯನದಿಂದ ಸಾಧನೆ ಮಾಡಬಹುದು ಎಂದು ಜಿ ಬಿ ಆರ್ ಪದವಿ ಕಾಲೇಜು ಪ್ರಾಂಶುಪಾಲ ಪ್ರೊ ಎಸ್ ಎಸ್ ಪಾಟೀಲ್ ಹೇಳಿದರು. ಪಟ್ಟಣದ ಸಾರ್ವಜನಿಕ ಶಾಖಾ ಗ್ರಂಥಾಲಯದಲ್ಲಿ ಸರ್ಕಾರಿ ನೌಕರರ ಸಂಘ, ಶಾಖಾ ಗ್ರಂಥಾಲಯ ವತಿಯಿಂದ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುವ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಅವರು ಮಾತನಾಡಿದರು.ನಿಮ್ಮ ಪದವಿ ಹಂತದ ಪಠ್ಯಕ್ರಮದ ಜೊತೆಗೆ ದೇಶದ ವಿಶ್ವದ ಪ್ರಚಲಿತ ವಿದ್ಯಮಾನಗಳು, ಸಾಧನೆಗಳು,ಸಂಶೋಧನೆಗಳು ಸೇರಿದಂತೆ ವಿವಿಧ ವಿಭಾಗಗಳಲ್ಲಿ ಆಳವಾದ ಅಧ್ಯಯನ ಅಗತ್ಯ ಎಂದು ತಿಳಿಸಿದರು.ಪ್ರತಿದಿನ ದಿನ ಪತ್ರಿಕೆಗಳು, ನಿಯತಕಾಲಿಕೆಗಳು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು.ಸ್ಪರ್ಧಾತ್ಮಕ ಪರೀಕ್ಷೆಗಳ ಹಿಂದಿನ ವರ್ಷಗಳ ಪ್ರಶ್ನೆ ಪತ್ರಿಕೆಗಳನ್ನು ಬಿಡಿಸಿದರೆ ಅಂಕ ಗಳಿಕೆ ಸುಲಭವಾಗುತ್ತದೆ ಎಂದು ಹೇಳಿದರು.
ವಿದ್ಯಾರ್ಥಿಗಳು ಸಾರ್ವಜನಿಕ ಗ್ರಂಥಾಲಯದ ಸದುಪಯೋಗ ಪಡಿಸಿಕೊಳ್ಳಬೇಕು. ಉಚಿತವಾಗಿ ಲಭ್ಯ ಆಗುವ ಅನೇಕ ವೈವಿಧ್ಯಮಯ ವಿಷಯಗಳ ಪುಸ್ತಕಗಳು ಗ್ರಂಥಾಲಯದಲ್ಲಿ ಓದಲು ಸಿಗುತ್ತವೆ ಎಂದು ಹೇಳಿದರು.ಶಾಖಾ ಗ್ರಂಥಾಲಯಾಧಿಕಾರಿ ಮಂಜುನಾಥ ಬೋವಿ ಪ್ರತಿ ತಿಂಗಳು ಗ್ರಂಥಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಕುರಿತು ಉಪನ್ಯಾಸ ಏರಿ್ಡಸಲಾಗುತ್ತಿದೆ ಎಂದು ತಿಳಿಸಿದರು. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.