ಯಶಸ್ವಿಯಾಗಿ ಜರುಗಿದ ‘ವಸತಿ ಸಹಿತ ಉಚಿತ ಶಿಕ್ಷಣ’ ಸ್ಪರ್ಧಾತ್ಮಕ ಪರೀಕ್ಷೆ
Successfully conducted ‘Free Education with Housing’ competitive examination
ಲೋಕದರ್ಶನ ವರದಿ
ವರದಿ: ಅಡಿವೇಶ ಮುಧೋಳ
ಬೆಟಗೇರಿ 08: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬೆಟಗೇರಿ ಕೃಷ್ಣಶರ್ಮ ಚೈತನ್ಯ ಶಾಲೆಯಲ್ಲಿ ಅಕ್ಷರದಾಸೋಹಿ ದಿ. ಎಸ್.ಎಸ್.ಹೊರಟ್ಟಿ ವಿದ್ಯಾ ವಿಕಾಸ ಪ್ರತಿಷ್ಠಾನದ ಅಡಿಯಲ್ಲಿ ವಸತಿ ಸಹಿತ ಉಚಿತ ಶಿಕ್ಷಣದ ಸ್ಪರ್ಧಾತ್ಮಕ ಪರೀಕ್ಷೆ ರವಿವಾರ ಮಾ.8ರಂದು ಯಶಸ್ವಿಯಾಗಿ ಜರುಗಿತು.
ವಸತಿ ಸಹಿತ ಉಚಿತ ಶಿಕ್ಷಣಕ್ಕಾಗಿ ಪ್ರಸ್ತುತ 3 ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಸ್ಪರ್ಧಾತ್ಮಕ ಪರೀಕ್ಷೆ ಹಮ್ಮಿಕೊಳ್ಳಲಾಯಿತು. ಬೆಳಗಾವಿ, ಬಾಗಲಕೋಟ, ವಿಜಯಪುರ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಿಂದ ಸುಮಾರು 600ಕ್ಕೂ ಅಧಿಕ 3 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ಈ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಿದ್ದರು.
ಈ ಪರೀಕ್ಷೆಯಲ್ಲಿ ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ 4 ಮತ್ತು 5 ನೇ ತರಗತಿಗೆ 2 ವರ್ಷ ಕನ್ನಡ ಮಾಧ್ಯಮದಲ್ಲಿ ಸಂಪೂರ್ಣ ವಸತಿ ಸಹಿತ ಉಚಿತ ಶಿಕ್ಷಣ ನೀಡಲಾಗುವುದು ಎಂದು ಪ್ರತಿಷ್ಠಾನದ ಆಯೋಜಕ ಸಮಿತಿ ಸಂಚಾಲಕ ರವಿ ಭರಮನಾಯ್ಕ ತಿಳಿಸಿದರು. ಈ ವೇಳೆ ಅಪಾರ ಸಂಖ್ಯೆಯಲ್ಲಿ ವಿದ್ಯಾರ್ಥಿ ಪಾಲಕರು ಶಾಲಾ ಮಕ್ಕಳು, ನಾಗರಿಕರು ಇದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 