ಮೂಡಲಗಿ 14: ಪಟ್ಟಣದ ಗಾರ್ಡನ್ ಅಭಿವೃದ್ದಿ ಸಂಸ್ಥೆಯ ಅಧ್ಯಕ್ಷ ಸುಧೀರ ನಾಯರ್ ಅವರಿಗೆ ಇತ್ತಿಚಿಗೆ ಕನರ್ಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದಿಂದ 2018-19ನೇ ಸಾಲಿನ "ರಾಜ್ಯ ಯುವ ಪ್ರಶಸ್ತಿ" ಪ್ರಶಸ್ತಿ ನೀಡಿ ಗೌರವಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸವಣೂರು ವಿದ್ಯಾರಶ್ಮಿ ಪ್ರಥಮ ದಜರ್ೆ ಕಾಲೇಜಿನಲ್ಲಿ ದ.ಕ.ಜಿ.ಪಂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಕನರ್ಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ(ರಿ) ಬೆಂಗಳೂರು, ನೆಹರು ಯುವ ಕೇಂದ್ರ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ(ರಿ) ಮಂಗಳೂರು, ಇವುಗಳ ಸಂಯುಕ್ತಾಶ್ರಯದಲ್ಲಿ ನಡೆದ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ, ರಾಜ್ಯ ಯುವ ಸಮ್ಮೆಳನ ಹಾಗೂ ರಾಜ್ಯ ಯುವ ಸಾಂಘಿಕ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಇವರನ್ನು ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಇವರು ಹಲವೂ ವರ್ಷಗಳಿಂದ ಸಮಾಜ ಸೇವೆ, ಜಾನಪದ ಕಲೆ, ಕ್ರೀಡೆ, ಪರಿಸರ ಸಂರಕ್ಷಣೆ, ಆರೋಗ್ಯ ಜಾಗೃತಿ, ಸ್ವಚ್ಛತಾ ಜಾಗೃತಿ ಹಾಗೂ ಯುವ ಮುಂದಾಳತ್ವದಂತಹ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಬೆಳಗಾವಿ ಜಿಲ್ಲೆಯಿಂದ ಆಯ್ಕೆಗೊಂಡಿದ್ದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ, ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷೆ ಅನಿತಾ ಹೇಮನಾಥ ಶೆಟ್ಟಿ, ಪ್ರೇರಣಾ ಟೀಂ ಸಂಚಾಲಕ ಆದರ್ಶ ಗೋಖಲೆ, ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ, ಡಿಸಿಸಿ ಬ್ಯಾಂಕ್ ನಿದರ್ೇಶಕ ಶಶಿಕುಮಾರ್, ಫಾ.ವಿಜಯ ಹಾವರ್ಿನ್, ಹರಿಣಿ ಪುತ್ತೂರಾಯ, ರಾಜ್ಯ ಯುವ ಸಂಘಗಳ ಒಕ್ಕೂಟದ ಅಧ್ಯಕ್ಷ ಡಾ.ಎಸ್.ಬಾಲಾಜಿ, ಪ್ರಧಾನ ಕಾರ್ಯದಶರ್ಿ ಸುರೇಶ ರೈ ಸೂಡಿಮುಳ್ಳ, ಬೆಳಗಾವಿ ಜಿಲ್ಲಾ ಘಟಕ ಅಧ್ಯಕ್ಷ ಸಿದ್ದಣ್ಣ ದುರದುಂಡಿ, ಪುತ್ತೂರು ತಾಲೂಕ ಅಧ್ಯಕ್ಷ ಸುಬ್ರಹ್ಮಣ್ಯ ಕರುಂಬಾರು ಮುಂತಾದ ಗಣ್ಯರ ಸಮ್ಮುಖದಲ್ಲಿ ರಾಜ್ಯದ 30 ಜಿಲ್ಲೆಯಿಂದ ಆಯ್ಕೆಯಾದ 30 ಯುವ ಪ್ರತಿಭೆಗಳಿಗೆ ಪ್ರಶಸ್ತಿ ಪತ್ರ, ಸ್ಮರಣಿಕೆ ನೀಡಿ ಸನ್ಮಾನಿಸಿದರು.