ಎಚ್ಪಿವಿ ಲಸಿಕಾ ಅಭಿಯಾನಕ್ಕೆ ಸುಕನ್ಯಾ ಚಾಲನೆ
Sukanya launches HPV vaccination campaign
ದೇವರಹಿಪ್ಪರಗಿ 06: ಪಟ್ಟಣದ ಸಮೀಪವಿರುವ ಪಡಗಾನೂರ ಗ್ರಾಮದ ಶ್ರೀ ವೆಂಕಟೇಶ್ವರ ಪ್ರೌಢಶಾಲೆಯಲ್ಲಿ ಸೋಮವಾರ ಎಚ್ಪಿವಿ ಲಸಿಕಾ ಅಭಿಯಾನಕ್ಕೆ ವೈದ್ಯಾಧಿಕಾರಿಗಳ ಅನುಪಸ್ಥಿತಿಯಲ್ಲಿ ದೇವರಹಿಪ್ಪರಗಿ ಆರೋಗ್ಯ ಕೇಂದ್ರದ ಹಿರಿಯ ಸುರಕ್ಷಣಾಧಿಕಾರಿಗಳಾದ ಸುಕನ್ಯಾ ಚಳಗೇರಿ ಲಸಿಕೆ ನೀಡುವ ಮೂಲಕ ಚಾಲನೆ ನೀಡಿದರು.ಈ ವೇಳೆ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಭಾಗಿತ್ವದ ಮಹತ್ವಾಕಾಂಕ್ಷಿ ಯೋಜನೆ ಎಚ್ಪಿವಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಹೆಣ್ಣು ಮಕ್ಕಳಿಗೆ ಗರ್ಭಕಂಠ ಕ್ಯಾನ್ಸರ್ ತಡೆಗಟ್ಟಲು 14ರಿಂದ 15 ವರ್ಷ ಒಳಗಿನ ವಯೋಮಾನದ ಹೆಣ್ಣುಮಕ್ಕಳಿಗೆ ಆರೋಗ್ಯ ಕೇಂದ್ರಗಳಲ್ಲಿ ಈ ಲಸಿಕೆ ನೀಡಲಾಗುತ್ತಿದೆ.
ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಹೆಣ್ಣು ಮಕ್ಕಳ ಸುರಕ್ಷತೆ, ಆರೋಗ್ಯ ಮತ್ತು ಭವಿಷ್ಯವನ್ನು ಉತ್ತಮಪಡಿಸಲು ಈ ಲಸಿಕೆಯನ್ನು ನೀಡಲಾಗುತ್ತಿದ್ದು ಪೋಷಕರು ಯಾವುದೇ ಹಿಂಜರಿಕೆ ಇಲ್ಲದೆ ತಮ್ಮ ಹೆಣ್ಣು ಮಕ್ಕಳಿಗೆ ಲಸಿಕೆ ಕೊಡಿಸಬಹುದು ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಆರೋಗ್ಯ ಕೇಂದ್ರದ ಹಿರಿಯ ನೀರೀಕ್ಷಣಾಧಿಕಾರಿಗಳಾದ ಲಕ್ಷ್ಮಿಕಾಂತ ಲಾಲಿ, ಸುರಕ್ಷಣಾಧಿಕಾರಿಗಳಾದ ದಾನಮ್ಮ ಪಾಟೀಲ, ಆರಿ್ಬ. ಎಸ್.ಕೆ ಡಾ. ಪ್ರಿಯಾಂಕ ಕುಂಬಾರ ಸೇರಿದಂತೆ ಶಾಲೆಯ ಶಿಕ್ಷಕರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 