ಸುಮಿತ್ರಾ ಮೆಣಸಿಕಾಯಿ ಅವರಿಗೆ ರಾಜ್ಯ ಯುವ ಪ್ರಶಸ್ತಿ ಪ್ರದಾನ
Sumitra Menasikai presented with State Youth Award
ಗದಗ 21: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಯುವ ಜನ ಒಕ್ಕೂಟ ಮಂಗಳೂರು ಇವರ ವತಿಯಿಂದ ಯುವಜನ ಸಂಯುಕ್ತ ಮಂಡಳಿ ಸುಳ್ಯ ಇವರ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜಯಂತೋತ್ಸವ ನಿಮಿತ್ತವಾಗಿ ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜ ಗ್ರಾಮದಲ್ಲಿ ರಾಜ್ಯ ಯುವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಗದಗ ಜಿಲ್ಲೆಯಿಂದ ಕುಮಾರಿ ಸುಮಿತ್ರಾ ಮೆಣಸಿಕಾಯಿ ಅವರಿಗೆ ರಾಜ್ಯ ಯುವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಸರ್ವಾಧ್ಯಕ್ಷರಾದ ಸುಳ್ಯ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರತಿ ಅವರು ಮಾತನಾಡಿ,
ಈ ಯುವ ಸಂಭ್ರಮ ಕಾರ್ಯಕ್ರಮ ನಮ್ಮೆಲ್ಲರಿಗೂ ಪ್ರೇರಣೆ ನಿಜಕ್ಕೂ ನಾಡಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 31 ಸಾಧಕರನ್ನು ಗುರುತಿಸಿ ಅವರಿಗೆ ಸನ್ಮಾನಿಸಿದ್ದು ಶ್ಲಾಘನೀಯ ಮತ್ತು ಅವಿಸ್ಮರಣೀಯ ಎಂದು ಹೇಳಿದರು. ರಾಜ್ಯ ಒಕ್ಕೂಟಗಳ ರಾಜ್ಯಾಧ್ಯಕ್ಷ ಎಸ್. ಬಾಲಾಜಿ ಅವರು ಮಾತನಾಡಿ, ಗದಗ ಜಿಲ್ಲೆಯಿಂದ ಆಯ್ಕೆಯಾದ ಕುಮಾರಿ ಸುಮಿತ್ರಾ ಮೆಣಸಿಕಾಯಿ ಅವರ ಸಾಮಾಜಿಕ ಹಾಗೂ ಮಹಿಳಾ ಸಬಲೀಕರಣ ಮತ್ತು ಹತ್ತು ಹಲವಾರು ಕಾರ್ಯಗಳಲ್ಲಿ ತೊಡಗಿ ಸ್ಪೂರ್ತಿದಾಯಕರಾಗಿದ್ದು ಅವರ ಸೇವೆ ಇನ್ನು ಉನ್ನತಿಗಾಗಿ ಭವಿಷ್ಯದಲ್ಲಿ ಅವರ ಕಾರ್ಯಗಳು ಸಮಾಜಕ್ಕೆ ತಲುಪಿ ಉನ್ನತ ಸ್ಥಾನ ಪಡೆಯಲಿ ಎಂದು ಆಶಿಸುತ್ತೇವೆ ಎಂದುಹೇಳಿದರು. ಈ ಸಂದರ್ಭದಲ್ಲಿ ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷರಾದ ಪವನ್ ಪಲ್ಲತ್ಕಡ್ಕ್ ಸೇರಿದಂತೆ ನಾಡಿನ ಯುವ ಸಾಧಕರು ಯುವ ನೇತಾರರು ಹಾಗು ವಿವಿಧ ಸಂಘ-ಸಂಸ್ಥೆಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 