ನಾಗರಿಕ ಸರಬರಾಜು ಗ್ರಾಹಕ ವ್ಯಹಾರಗಳ ಜಾಗೃತಿ ಸಮಿತಿ ನಾಮನಿರ್ದೇಶನ ಸದಸ್ಯರಾಗಿ ಸುನಂದಾ ನೇಮಕ
Sunanda appointed as a nominated member of the Civil Supplies Consumer Affairs Awareness Committee
ದೇವರಹಿಪ್ಪರಗಿ 30: ಜಿಲ್ಲಾ ಮಟ್ಟದ ಆಹಾರ ನಾಗರಿಕ ಸರಬರಾಜು ಗ್ರಾಹಕ ವ್ಯಹಾರಗಳ ಜಾಗೃತಿ ಸಮಿತಿಯ ನಾಮನಿರ್ದೇಶನ ಸದಸ್ಯರಾಗಿ ನೇಮಕ ಆಗಿರುವ ಸುನಂದಾ ಅ.ಸೋನಹಳ್ಳಿ ಅವರಿಗೆ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಿವಕಾಂತಮ್ಮ ನಾಯಕ ಅವರು ಸನ್ಮಾನಿಸಿ ಅಭಿನಂದಿಸಿದರು. ವಿಜಯಪುರ ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರದಂದು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು. ನಂತರ ಮಾತನಾಡಿದ ಅವರು, ಮಹಿಳೆಯರಿಗೆ ಕೊಟ್ಟ ಎಲ್ಲ ಜವಾಬ್ದಾರಿಯನ್ನು ಪ್ರಾಮಾಣಿಕತೆಯಿಂದ ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಬಹಳ ವರ್ಷಗಳ ಹಿಂದೆ ಮಹಿಳೆಯರು ನಾಲ್ಕು ಗೋಡೆಯ ಒಳಗೆ ಸೀಮಿತವಾಗಿದ್ದರು. ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿ ಕಾಲದಿಂದ ಮಹಿಳೆಯರಿಗೆ ಸಮಾನತೆ ಬಂದಿದೆ. ಈಗ ಮಹಿಳೆಯರು ಎಲ್ಲ ರಂಗದಲ್ಲೂ ಯಶಸ್ಸು ಕಂಡಿದ್ದಾರೆ.
ರಾಜಕೀಯ, ಕ್ರೀಡೆ, ಗಗನ ಯಾತ್ರೆಯಲ್ಲೂ ಸಾಧನೆ ಮಾಡಿದ್ದಾರೆ. ಮಹಿಳೆಯರು ರಾಜಕೀಯ ಕ್ಷೇತ್ರದಲ್ಲಿ ಸೇವೆ ಮಾಡಲು ಕಾಂಗ್ರೆಸ್ ಪಕ್ಷ ನನ್ನನ್ನು ಸೇರಿದಂತೆ ಅನೇಕ ಮಹಿಳೆಯರಿಗೆ ಸ್ಥಾನ ನೀಡಿದೆ. ಅದೇ ರೀತಿ, ನನ್ನನ್ನು ನಿಗಮ ಮಂಡಳಿಯ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಸರ್ಕಾರ ಕೊಟ್ಟ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸಿ ಜಿಲ್ಲೆ ಹಾಗೂ ರಾಜ್ಯದ ಯುವಕರಿಗೆ ಉದ್ಯೋಗ ನೀಡುವಲ್ಲಿ ಪ್ರಾಮಾಣಿಕ ಸೇವೆ ಮಾಡುತ್ತೇನೆ. ನನ್ನ ಮಾರ್ಗದರ್ಶಕರು ಗಳಾದ,ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ ಮತ್ತು ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲರು ಸೇರಿದಂತೆ ಅನೇಕ ನಾಯಕರು ಪ್ರೋತ್ಸಾಹಿಸಿದ್ದಾರೆ ಅವರೆಲ್ಲರಿಗೂ ಧನ್ಯವಾದಗಳು ತಿಳಿಸಿದರು. ಇದೇ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸದಸ್ಯರಾದ ಆರತಿ ಶಹಾಪುರ, ನಾಗಠಾಣ ಕ್ಷೇತ್ರದ ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ವಸಂತ ಹೊನವಾಡ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 