ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸದಸ್ಯರಾಗಿ ಸುನಂದಾ ಆಯ್ಕೆ
Sunanda selected as a member of the district level awareness committee
ದೇವರಹಿಪ್ಪರಗಿ 27 : ತಾಲೂಕಿನ ಮುಳಸಾವಳಗಿ ಗ್ರಾಮದ ಸುನಂದಾ ಸೋನ್ನಹಳ್ಳಿ ರವರನ್ನು ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.ಆಹಾರ,ನಾಗರಿಕ ಸರಬರಾಜು ಗ್ರಾಹಕ ವ್ಯವಹಾರಗಳ ಜಿಲ್ಲಾ ಮಟ್ಟದ ಜಾಗೃತಿ ಸಮಿತಿಯ ಸದಸ್ಯರಾಗಿ ಸುನಂದಾ ಸೋನ್ನಹಳ್ಳಿ ರವರನ್ನು ನಾಮನಿರ್ದೇಶನ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಆಹಾರ,ನಾಗರಿಕ ಸರಬರಾಜು ಗ್ರಾಹಕ ವ್ಯವಹಾರಗಳ ಇಲಾಖೆಯ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯದ ಎಲ್ಲಾ ಜಿಲ್ಲಾ ಮಟ್ಟದ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರನ್ನು ಆಯ್ಕೆ ಮಾಡಿದ್ದ ಅವಧಿಯಿಂದ ಸುಮಾರು ಎರಡು ವರ್ಷಗಳ ಕಾಲ ನಾಮನಿರ್ದೇಶನ ಮಾಡಲಾಗಿದೆ ಎಂದು ಆದೇಶ ಹೊರಡಿಸಿದೆ.ನೂತನ ಸದಸ್ಯರಿಗೆ ಜಿಲ್ಲಾ ಹಾಗೂ ತಾಲೂಕ ಮಟ್ಟದ ಮುಖಂಡರು ಅಭಿನಂದಿಸಿ, ಶುಭ ಹಾರೈಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 