ಮೇಲ್ವಿಚಾರಕರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ
Supervisors honored by the District Collector
ಲೋಕದರ್ಶನ ವರದಿ
ವಿಜಯಪುರ 27: 33-ಸಿಂದಗಿ ವಿಧಾನಸಭಾ ಮತಕ್ಷೇತ್ರದ ಸಿಂದಗಿ ತಾಲೂಕಿನ ಕನ್ನೊಳಿ ಮತ್ತು ಕೊಕಟನೂರ ಗ್ರಾಮಗಳ ಭಾಗ ಸಂಖ್ಯೆ 213 ರಿಂದ 222ರವರೆಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕ್ಕರಣೆ-2026ರ ಗಣತಿ ನಮೂನೆಗಳ ವಿತರಣೆ ಹಾಗೂ ಡಿಜಿಟೈಸೇಶನ್ ಕಾರ್ಯವನ್ನು ನಿಗದಿತ ಅವಧಿಗೂ ಮುನ್ನವೇ ಶೇ.100ರಷ್ಟು ಯಶಸ್ವಿಯಾಗಿ ಪೂರ್ಣಗೊಳಿಸಿದ ಮೇಲ್ವಿಚಾರಕರನ್ನು ಜಿಲ್ಲಾಧಿಕಾರಿಗಳಾದ ಡಾ. ಆನಂದ್ ಕೆ. ಅವರು ಸನ್ಮಾನಿಸಿ ಅಭಿನಂದಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮೇಲ್ವಿಚಾರಕರಾದ ಎ.ಕೆ. ಬಿರಾದಾರ ಅವರನ್ನು ಸನ್ಮಾನಿಸಿ, ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕನ್ನೊಳಿ ಮತ್ತು ಕೊಕಟನೂರ ಗ್ರಾಮಗಳ ಭಾಗ ಸಂಖ್ಯೆ 213 ರಿಂದ 222ರವರೆಗೆ ಗಣತಿ ನಮೂನೆಗಳ ವಿತರಣೆ, ಮನೆ-ಮನೆಗೆ ಭೇಟಿ, ಮಾಹಿತಿಯ ಸಂಗ್ರಹಣೆ ಹಾಗೂ ಡಿಜಿಟೈಸೇಶನ್ ಪ್ರಕ್ರಿಯೆಯನ್ನು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಶೇ.100ರಷ್ಟು ಪೂರ್ಣಗೊಳಿಸಿರುವುದು ಜಿಲ್ಲೆಯ ಇತರೆ ಭಾಗಗಳಿಗೆ ಮಾದರಿಯಾಗಬೇಕು ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ 33-ಸಿಂದಗಿ ವಿಧಾನಸಭಾ ಮತಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ವಿನಯಕುಮಾರ ಪಾಟೀಲ, ಕನ್ನೊಳ್ಳಿ ಆಡಳಿತಾಧಿಕಾರಿಯಾದ ಎಂ.ಎಸ್. ಸಾಳುಂಕೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 