ಆತ್ಮನಿರ್ಭರ ಗುರಿ ಸಾಧಿಸಲು ಪೂರಕವಾದ ಬಜೆಟ್‌: ಭರತ್ ಬೊಮ್ಮಾಯಿ

Supplementary budget to achieve self-sufficiency goal: Bharat Bommai

ಆತ್ಮನಿರ್ಭರ ಗುರಿ ಸಾಧಿಸಲು ಪೂರಕವಾದ ಬಜೆಟ್‌: ಭರತ್ ಬೊಮ್ಮಾಯಿ   

 ಶಿಗ್ಗಾವಿ 02: ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಉತ್ತೇಜನ, ಕೃಷಿಯತ್ತ ಯುವಕರನ್ನು ಸೆಳೆಯಲು ಧನಧಾನ್ಯ ಯೋಜನೆ ಜಾರಿಗೊಳಿಸುವ ಮೂಲಕ ಕೇಂದ್ರ ಸರ್ಕಾರ ಗ್ರಾಮೀಣ ಆರ್ಥಿಕತೆ ಸದೃಢಗೊಳಿಸುವ ಮೂಲಕ ದೇಶದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಆತ್ಮನಿರ್ಭರ ಭಾರತ ಸಾಧಿಸುವ ಬಜೆಟ್ ಇದಾಗಿದೆ ಎಂದು ಬಿಜೆಪಿ ಯುವ ಮುಖಂಡ ಭರತ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.     ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಕಿಸಾನ್ ಕ್ರೆಡಿಟ್ ಕಾರ್ಡ್‌ ಸಾಲದ ಮಿತಿ 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಳ. ರೈತರು ಮೀನುಗಾರರಿಗೆ ಸುಲಭ ಕಂತುಗಳಲ್ಲಿ ಸಾಲ ನೀಡುವುದು. 5 ಲಕ್ಷ ಎಸ್ಸಿ ಎಸ್ಟಿ ಮಹಿಳೆಯರಿಗೆ ಉದ್ಯಮ ಸ್ಥಾಪನೆಗೆ ಸಾಲ. ಭಾರತವನ್ನು ಗೊಂಬೆಗಳಿಗೆ ಗ್ಲೋಬಲ್ ಹಬ್ ಮಾಡಲು ತೀರ್ಮಾನ ಮಾಡಿರುವುದು, ಭಾರತ್ ನೆಟ್ ಯೋಜನೆ ಅಡಿ ಸೆಕೆಂಡರಿ ಶಾಲೆ ಹಾಗೂ ಪಿಎಚ್ ಸಿ ಗಳಿಗೆ ಬ್ರಾಡ್ ಬ್ಯಾಂಡ್ ಸಂಪರ್ಕ ಕಲ್ಪಿಸುವ ಮೂಲಕ ಭಾರತವನ್ನು ಇನ್ನಷ್ಟು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಈ ಬಜೆಟ್ ಪೂರಕವಾಗಿದೆ ಎಂದು ತಿಳಿಸಿದ್ದಾರೆ.ಕೇಂದ್ರ ಬಜೆಟ್ ನಲ್ಲಿ ಸಣ್ಣ ಉದ್ಯಮಗಳಿಗೆ ಬಹಳ ಮಹತ್ವ ಕೊಟ್ಟಿದೆ. ಎಮ್ ಎಸ್ ಎಂಇಗೆ ಸಾಲ ಕೊಡುವ ವ್ಯವಸ್ಥೆಯನ್ನು 10 ರಿಂದ 20 ಕೋಟಿಗೆ ಹೆಚ್ಚಳ ಮಾಡಲಾಗಿದೆ. ಇದರಿಂದ ಎಂಎಸ್ ಎಂಇ ಯ ಬಹಳ ದಿನಗಳ ಬೇಡಿಕೆ ಈಡೇರಿದಂತಾಗಿದ.ೆ     ಮುಂದಿನ 5 ವರ್ಷಗಳಲ್ಲಿ ಮೆಡಿಕಲ್ ಕಾಲೇಜುಗಳಲ್ಲಿ 75 ಸಾವಿರ ಮೆಡಿಕಲ್ ಸೀಟಗಳ ಹೆಚ್ಚಳ. ಗ್ರಾಮೀಣ ಪ್ರದೇಶದ ಪ್ರತಿ ಮನೆಗೆ ನಲ್ಲಿ ನೀರು ಒದಗಿಸುವ ಜಲಜೀವನ್ ಮಿಷನ್ ಯೋಜನೆ 2028 ರ ವರೆಗೆ ವಿಸ್ತರಣೆ. ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಡೇ ಕೇರ್ ಕೇಂದ್ರ ಸ್ಥಾಪನೆ. ಉಡಾನ್ ಯೋಜನೆ ಅಡಿ 120 ಹೊಸ ವಿಮಾನ ನಿಲ್ದಾಣ ನಿರ್ಮಾಣ. ಗಿಗ್ ಕಾರ್ಮಿಕರಿಗೆ ಆರೋಗ್ಯ ವಿಮೆ ವಿಸ್ತರಣೆ ಮಾಡುವ ಮೂಲಕ ಎಲ್ಲ ವರ್ಗದವರ ಆರೋಗ್ಯ ಕಾಪಾಡಲು ಕೇಂದ್ರ ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹವಾಗಿದೆ.ಆದಾಯ ತೆರಿಗೆ ಮಿತಿಯನ್ನು 12 ಲಕ್ಷದ ವರೆಗೆ ವಿಸ್ತರಿಸಿರುವುದು ಮಧ್ಯಮ ವರ್ಗದವರಿಗೆ ದೊಡ್ಡ ಕೊಡುಗೆ ನೀಡಿದಂತಾಗಿದೆ. ಇದರ ಮೂಲಕ ದೇಶದ ಆರ್ಥಿಕತೆಗೆ ಇನ್ನಷ್ಟು ಉತ್ತೇಜನ ಸಿಗಲಿದೆ ಎಂದು ತಿಳಿಸಿದ್ದಾರೆ.