ಲೋಕದರ್ಶನ ವರದಿ
ಬಳ್ಳಾರಿ 16: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಹೆಚ್ಚಿನ ಆದ್ಯತ ನೀಡಬೇಕು. ಅಗತ್ಯ ಬಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸುವುದಕ್ಕೆ ಮುಂದಾಗಬೇಕು. ಈ ವಿಷಯದಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಸಲ್ಲ ಎಂದು ತಾಲೂಕು ಪಂಚಾಯತ್ ಕಾರ್ಯನಿವರ್ಾಹಕ ಅಧಿಕಾರಿ ಡಿ.ಜಾನಕಿರಾಮ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ತಾಲೂಕು ಪಂಚಾಯತಿ ಅಧ್ಯಕ್ಷರಾದ ರಮೀಜಾ ಬಿ. ಅವರ ಅಧ್ಯಕ್ಷತೆಯಲ್ಲಿ ನಡೆದ ತಾಪಂ ಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶಗಳ ಕೆಲ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಹರಿಗನಡೋಣಿ, ಬಾದನಹಟ್ಟಿ, ಬೆಳಗಲ್ ತಾಂಡಾಗಳಲ್ಲಿ ಹೆಚ್ಚಿನ ನೀರಿನ ಸಮಸ್ಯೆ ಉದ್ಭವಿಸಿದ್ದು, ಆ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿ, ನೀರಿನ ಸಮಸ್ಯೆಗಳನ್ನು ಇತ್ಯರ್ಥಗೊಳಿಸಲು ಅಧಿಕಾರಿಗಳು ಗಮನವಹಿಸಿ ಕೆಲಸ ಮಾಡಬೇಕು ಎಂದು ಹೇಳಿದರು. ಮೀನಗಾರಿಕೆ ಇಲಾಖೆಯಲ್ಲಿ 24ಲಕ್ಷ ಮೀನುಗಳನ್ನು ರೈತರಿಗೆ, ಮೀನು ಸಾಕಾಣಿದಾರರಿಗೆ, ಸ್ವಯಂ ಸಂಘ ಸಂಸ್ಥೆಗಳಿಗೆ ಹಾಗೂ ಖಾಸಗಿ ಕೊಳದಲ್ಲಿ ಬಿಡುವುದಕ್ಕೆ ವಿತರಿಸಲಾಗಿದ್ದು, ಆದರೆ ಇದಕ್ಕೆ ಸಂಬಂಧಿಸಿದಂತೆ ಸರಿಯಾದ ಅಂಕಿ ಅಂಶಗಳಿಲ್ಲ, ಇದರ ದಾಖಲೆಗಳನ್ನು ಯಾರಿಗೆ ವಿತರಿಸಿದ್ದಾರೆ ಎಂಬ ಸ್ಪಷ್ಟ ಮಾಹಿತಿ ನೀಡುವಂತೆ ಅವರು ಸೂಚಿಸಿದರು. ಅಂಗನವಾಡಿ ಕೇಂದ್ರಗಳಲ್ಲಿ ಕುಡಿಯುವ ನೀರು, ಮೂಲಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿ, ಸಂಬಂಧಿಸಿದ ಅಧಿಕಾರಿಗಳು ಪ್ರತಿ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಶೌಚಾಲಯ, ಸ್ವಚ್ಛತೆಯ ಬಗ್ಗೆ ಪರಿಶೀಲಿಸಬೇಕು. ಸಮಸ್ಯೆಗಳ ಪಟ್ಟಿ ಮಾಡಿಕೊಂಡು ಬಗೆಹರಿಸಲು ಮುಂದಾಗಬೇಕು ಎಂದರು. ಇದೇ ಜೂ.19ರಂದು ನಡೆಯುವ ಸಾಮಾನ್ಯ ಸಭೆಗೆ ತಾಲೂಕು ಮಟ್ಟದ ಅಧಿಕಾರಿಗಳು ಸಮಗ್ರ ವರದಿಯೊಂದಿಗೆ ಯಾವುದೇ ಅಧಿಕಾರಿಗಳನ್ನು ನಿಯೋಜನೆ ಮಾಡದೇ ಖುದ್ದಾಗಿ ಹಾಜರಾಗಿ ಮಾಹಿತಿ ನೀಡಬೇಕು ಖಡಕ್ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಉಪಾಧ್ಯಕ್ಷರಾದ ಪುಷ್ಪ್ಪಾವತಿ ಹಾಗೂ ತಾಲೂಕ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.