ಅನೀರೀಕ್ಷಿತ ಭೇಟಿ: ಶಾಲೆಗಳ ಪರೀಶೀಲನೆ, ಶಿಕ್ಷಕರಿಗೆ ಕಟ್ಟುನಿಟ್ಟಿನ ಸೂಚನೆ

ಅನೀರೀಕ್ಷಿತ ಭೇಟಿ: ಶಾಲೆಗಳ ಪರೀಶೀಲನೆ, ಶಿಕ್ಷಕರಿಗೆ ಕಟ್ಟುನಿಟ್ಟಿನ ಸೂಚನೆ  Surprise Visit: School Inspection and Strict Instructions to Teachers


ಸಂಬರಗಿ, 27: ಅಥಣಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್‌.ಎಂ. ಮುಂಜೆ ಅವರು ಅನಂತಪುರದ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗೆ ಅನೀರೀಕ್ಷಿತ ಭೇಟಿ ನೀಡಿ, ಶಾಲೆಯಲ್ಲಿನ ಅವ್ಯವಸ್ಥೆ ಪರೀಶೀಲಿಸಿದರು. ಬಳಿಕ ಶಿಕ್ಷಕರಿಗೆ ಸೂಕ್ತ ಸೂಚನೆಗಳನ್ನು ನೀಡಿದರು.  

ತಮ್ಮ ಕ್ಷೇತ್ರ ವ್ಯಾಪ್ತಿಯ ಹಲವು ಶಾಲೆಗಳಿಗೆ 576 ಬೆಂಚುಗಳನ್ನು ವಿತರಿಸಲಾಗಿದೆ ಎಂದು ಅವರು ತಿಳಿಸಿದರು. ಗಡಿ ಪ್ರದೇಶದ ಪ್ರತಿಯೊಂದು ಶಾಲೆಯನ್ನೂ ಪರೀಶೀಲಿಸಲಾಗುತ್ತಿದ್ದು, ಶಿಕ್ಷಕರು ನಿರ್ಲಕ್ಷ್ಯ ವಹಿಸಿರುವುದು ಕಂಡುಬಂದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.  

ಶಿಕ್ಷಣ ಇಲಾಖೆಯಿಂದ ಪ್ರತಿಯೊಂದು ಶಾಲೆಗೂ ಅಗತ್ಯ ಮೂಲಸೌಕರ್ಯ ಹಾಗೂ ಬೆಂಚುಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಗಡಿ ಪ್ರದೇಶದ ಹಲವು ಶಾಲೆಗಳಿಗೆ ಈಗಾಗಲೇ ಸೌಲಭ್ಯಗಳನ್ನು ಒದಗಿಸಲಾಗಿದ್ದು, ಈ ವರ್ಷ 576 ಬೆಂಚುಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು.  

ಅನಂತಪುರದ ಪ್ರಾಥಮಿಕ ಶಾಲೆಯ ಕಟ್ಟಡ ಕಾಮಗಾರಿಯನ್ನೂ ಪರೀಶೀಲಿಸಿದ ಅವರು, ಶಾಲೆಯ ಮುಖ್ಯ ಶಿಕ್ಷಕ ಅಣ್ಣಾಸಾಹೇಬ ಧೂಳಗಾವೆ ಅವರಿಂದ ಶಾಲೆಯ ಸಂಪೂರ್ಣ ಮಾಹಿತಿ ಪಡೆದುಕೊಂಡರು. ಶಾಲೆಯಲ್ಲಿ ಬಳಸಲಾಗುತ್ತಿರುವ ನೆಲಹಾಸನ್ನೂ ಪರೀಶೀಲಿಸಿದರು.  

ಗಡಿ ಪ್ರದೇಶದ ಹಲವು ಶಾಲೆಗಳಲ್ಲಿ ಶಿಕ್ಷಕರು ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗುತ್ತಿಲ್ಲ ಹಾಗೂ ಬಯೋಮೆಟ್ರಿಕ್ ಹಾಜರಾತಿ ದಾಖಲಿಸದೆ ಶಾಲೆಯಿಂದ ತೆರಳುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಕರ್ತವ್ಯಲೋಪವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್ಚರಿಕೆ ನೀಡಿದರು.  

ಯಾವುದೇ ಶಾಲೆಗೆ ಅನೀರೀಕ್ಷಿತ ಭೇಟಿ ನೀಡಿದ ಸಂದರ್ಭದಲ್ಲಿ ಶಿಕ್ಷಕರು ಗೈರುಹಾಜರಾಗಿರುವುದು ಅಥವಾ ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿರುವುದು ಕಂಡುಬಂದರೆ ಸ್ಥಳದಲ್ಲಿಯೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.