ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿ ಸರ್ವೇ ಮಾಡಿ : ಸಚಿವ ಮಾಂಕಾಳ ವೈದ್ಯ
ಕಾರವಾರ 03: ಜಿಲ್ಲೆಯ ಭಟ್ಕಳದಿಂದ ಕಾರವಾರದ ಗಡಿ ಭಾಗದವರೆಗೆ ನಡೆದಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಪ್ರಗತಿ ಕುರಿತು 10 ದಿನದಲ್ಲಿ ವರದಿ ನೀಡುವಂತೆ ಜಿಲ್ಲಾಧಿಕಾರಿಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಸೂಚನೆ ನೀಡಿದರು.
ಅವರು ಸೋಮವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಶೀಲನಾ ಸಭೆಯ ಅಧ್ಯಕತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ರಾಷ್ರ್ಟೀಯ ಹೆದ್ದಾರಿ ಕಾಮಗಾರಿ ಆರಂಭಗೊಂಡ ನಂತರ ಅಸಾಮಾರ್ಕಕ ಕಾಮಗಾರಿಯಿಂದ 260 ಕ್ಕೂ ಅಧಿಕ ಜನ ಪ್ರಾಣ ಕಳೆದುಕೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಹಿಕೊಂಡಿರುವ ಕಂಪೆನಿಯ ಅಧಿಕಾರಿಗಳು ಜನರ ಜೀವದ ಬಗ್ಗೆ ನಿರ್ಲಕ್ಷವಹಿಸಿದ್ದು, ಇದುವರೆಗೂ ಸಂಪೂರ್ಣ ಕಾಮಗಾರಿ ಪೂರ್ಣಗೊಳಿಸಿಲ್ಲ. ಕಾಮಗಾರಿ ಗುತ್ತಿಗೆ ಪಡೆದ ಕಂಪನಿಯವ ನಿರ್ಲಕ್ಷ ಧೋರಣೆಯಿಂದಾಗಿ ಪ್ರಾಣ ಕಳೆದುಕೊಂಡ ಕುಟುಂಬದವರಿಗೆ ಯಾವುದೇ ಸಾಂತ್ವನ ಪರಿಹಾರ ನೀಡುವ ಸೌಜನ್ಯವೂ ಇಲ್ಲದ ಕಂಪನಿಯವರು ಜಿಲ್ಲಾಡಳಿತ ವತಿಯಿಂದ ಯಾವುದೇ ಅನುಮತಿ ಪಡೆಯದೇ ರಸ್ತೆ ನಿರ್ಬಂಧ ಮಾಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ ಅವರು, ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸದೇ ಇದ್ದಲ್ಲಿ ನೀಡುರುವ ಅನುಮತಿ ಗಳನ್ನು ರದ್ದೂಗೊಳೊಸುವಂತೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಯಾವುದೇ ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸದಂತೆ ಸೂಚಿಸಿದ ಅವರು, ಈ ವರ್ಷ ಎಲ್ಲಾ ಅಂಗನವಾಡಿಗಳು ಸ್ವಂತ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುವಂತೆ ಅಗತ್ಯ ಕ್ರಮಕೈಗೊಳ್ಳುವಂತೆ ಹಾಗೂ ಜಿಲ್ಲೆಯ ಎಲ್ಲಾ ಶಾಲೆಗಳು ಅಂಗನವಾಡಿ ಸೇಫ್ಟಿ ಆಡಿಟ್ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು
ಎಸ್ ಎಸ್ ಎಲ್‌ಸಿ ಫಲಿತಾಂಶದಲ್ಲಿ ಜಿಲ್ಲೆಯು ಪ್ರಥಮ ಸ್ಥಾನ ಪಡೆಯಲು ವಿಶೇಷ ತರಗತಿ ಸೇರಿದಂತೆ ವಿವಿಧ ಪಠ್ಯಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಬೇಕು. ಹಾಗೂ ನಿರಂತರವಾಗಿ ಶಾಲೆಗಳಲ್ಲಿ ಮೊಟ್ಟೆ ವಿತರಣೆಯಲ್ಲಿ ಕೊರತೆ ಆಗದಂತೆ ಎಚ್ಚರ ವಹಿಸಬೇಕು ಎಂದರು.
ಜಿಲ್ಲಾ ವೈದ್ಯಕೀಯ ಆಸ್ಪತ್ರೆಯಲ್ಲಿ ಆಂಬುಲೆನ್ಸ್ ಸೇವೆ ಸಮರ್ಕವಾಗಿರುವಂತೆ ನೋಡಿಕೊಳ್ಳಬೇಕು. ರಾಷ್ಟ್ರೀಯ ಹೆದ್ದಾರಿಯಿಂದ ಆಸ್ಪತ್ರೆಗೆ ಆಂಬುಲೆನ್ಸ್ ಸಂಚಾರಕ್ಕೆ ಅನುಕೂಲ ಆಗುವಂತೆ ನೇರ ರಸ್ತೆ ಸಂಪರ್ಕ ಕಲ್ಪಿಸುವಂತೆ ಮತ್ತು ಎಲ್ಲಾ ಆಂಬುಲೆನ್ಸ್‌ಗಳು ಸುಸ್ಥಿತಿಯಲ್ಲೂರುವಂತೆ ನೋಡಿಳೊಲ್ಲಕಬೇಕು ಎಂದರು
ಇಡೀ ರಾಜ್ಯದ ವಿದ್ಯುತ್ ಬಳಕೆಯ ಶೇ. 25 ರಷ್ಟು ವಿದ್ಯುತ್ ಜಿಲ್ಲೆಯಿಂದ ಉತ್ಪಾದನೆ ಆಗುತ್ತಿದ್ದು, ಜಿಲ್ಲೆಗೆ ವಿದ್ಯುತ್ ಕೊರತೆ ಆಗಬಾರದು. ಜಿಲ್ಲೆಯಲ್ಲಿ ಯಾವುದೇ ಮನೆ ವಿದ್ಯುತ್ ಸಂಪರ್ಕ ಇಲ್ಲದ್ದಿರುವಂತೆ ನೋಡಿಕೊಳ್ಳಬೇಕು ಎಂದು ಹೆಸಕಾಂ ಅಧಿಕಾರಿಗಳಿಗೆ ಸೂಚಿಸಿದರು
ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ ಆದರೆ ಈ ಬಗ್ಗೆ ಅಧಿಕಾರಿಗಳು ಯಾವುದೇ ಫಲಕ ಅಳವಡಿಸಿತ್ತಿಲ್ಲ... ಕಾಮಗಾರಿ ಆರಂಭದ ಬಗ್ಗೆ ಶಾಸಕಕರಿಗೆ ಮಾಹಿತಿ ನೀಡುತ್ತಿಲ್ಲ.. ಮಾಧ್ಯಮಗಲ್ಲಿಗೂ ಮಾಹಿತಿ ನೀಡುತ್ತಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ ಸಚಿವರು, ಇನ್ನು ಮುಂದೆ ಕಾಮಗರಿಗಳ ಆರಂಭ ಮುಕ್ತಾಯ ದ ಬಗ್ಗೆ ಸ್ಥಳೀಯ ಶಾಸಕರು ಮತ್ತು ಮಾಧ್ಯಮ ಗಳಿಗೆ ತಪ್ಪದೇ ಮಾಹಿತಿ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ರಾಷ್ಟ್ರೀಕೃತ ಬ್ಯಾಂಕ್‌ಗಳು ಹೆಚ್ಚಿನ ಸಂಖ್ಯೆಯಲ್ಲಿ ಸಾಲ ವಿತರಿಸಿದರೆ ಸಾರ್ವಜನಿಕರು ಮೈಕ್ರೋ ಫೈನಾನ್ಸ್ ಹಾವಳಿ ಒಳಗಾಗುವುದನ್ನು ತಪ್ಪಿಸಲು ಸಾಧ್ಯ. ಆದರಿಂದ ಬ್ಯಾಂಕ್‌ಗಲ್ಲಿ ಸಣ್ಣ ಪುಟ್ಟ ಕಾರಣಗಳಿಗೆ ಸಾಲದ ಅರ್ಜಿಗಳನ್ನು ತಿರಸ್ಕರಿಸದಂತೆ ಸೂಚನೆ ನೀಡುವಂತೆ ಲೀಡ್ ಬ್ಯಾಂಕ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು
ಹಳೆಯ ಅರಣ್ಯ ಅತಿಕ್ರಮಣ ದಾರರಿಗೆ ಯಾವುದೇ ತೊಂದರೆ ನೀಡದಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಸಚಿವರು, ಹೊಸ ಅತಿಕ್ರಮಣ ಮಾಡಲು ಅವಕಾಶ ನೀಡದೇ ಎಚ್ಚರ ವಹಿಸುವಂತೆ ಮತ್ತು ಶಾಲೆ, ರಸ್ತೆ, ಅಂಗನವಾಡಿ, ಕುಡಿಯುವ ನೀರು ಸರಬರಾಜು ಕಾಮಗಾರಿ ಹಾಗೂ ವಿದ್ಯುತ್ ಸಂಪರ್ಕ ಕಾಮಗಾರಿಗಳಿಗೆ ಅಡಚಣೆ ಮಾಡದಂತೆ ಅರಣ್ಯ ಇಲಾಖೆ ಆಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯಲ್ಲಿನ ಹೋಮ್ ಸ್ಟೇ, ರೆಸಾರ್ಟ್ ಗಳಲ್ಲಿ ಮಾದಕ ವಸ್ತುಗಳ ಬಳಕೆ ಸೇರಿದಂತೆ ಯಾವುದೇ ರೀತಿಯ ಅಕ್ರಮ ಚಟುವಟಿಕೆ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದರು.
ಕೊಂಕಣ ರೈಲ್ವೆ ಯೋಜನೆ ಇಂದ ನಿರಾಶ್ರಿತರಾದವರಿಗೆ ಮಾರ್ಚ್ ಒಳಗೆ ಪರಿಹಾರ ಮೊತ್ತ ಪಾವತಿಸುವಂತೆ ಕುಮಟಾ ಉಪವಿಭಾಗಾಧಿಕಾರಿಗೆ ಸೂಚನೆ ನೀಡಿದರು
ಎಲ್ಲಾ ಇಲಾಖೆಗಳು ಮಾರ್ಚ್ ಅಂತ್ಯದವರೆಗೆ ತಮಗೆ ನಿಗಧಿಪಡಿಸಿರುವ ಸಂಪೂರ್ಣ ಆರ್ಥಿಕ ಮತ್ತು ಭೌತಿಕ ಗುರಿ ಸಾಧಿಸುವಂತೆ ಮತ್ತು ಅನುದಾನ ವ್ಯರ್ಥವಾದಲ್ಲಿ ಅದಕ್ಕೆ ಸಂಬಂಧ ಪಟ್ಟ ಅಧಿಕಾರಿಗಳೇ ಜವಾಬ್ದಾರರು ಎಂದರು.
ಸಭೆಯಲ್ಲಿ ಕರ್ನಾಟಕ ರಾಜ್ಯ ಮಾರ್ಕೇಟಿಂಗ್ ಕನ್ಸಲೆಂಟ್ ಅಂಡ್ ಏಜೆನ್ಸಿಸ್ ಅಧ್ಯಕ್ಷ ಹಾಗೂ ಕಾರವಾರ ಅಂಕೋಲಾ ಕ್ಷೇತ್ರದ ಶಾಸಕ ಸತೀಶ್ ಕೆ ಸೈಲ್, ಶಾಸಕರಾದ ಭೀಮಣ್ಣ ಟಿ ನಾಯ್ಕ, ದಿನಕರ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಗಣಪತಿ ಡಿ ಉಳ್ವೇಕರ್, ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಯಣ ಎಂ ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಉಪ ವಿಭಾಗಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.