ದೇವರಹಿಪ್ಪರಗಿ ಪ.ಪಂ ಯಿಂದ ಸ್ವಚೋತ್ಸವ, ಜನಜಾಗೃತಿ. ಸ್ವಚ್ಛತೆ ಜಾಗೃತಿ ಮೂಡಿಸುವ ಗೋಡೆ ಬರಹ, ಚಿತ್ರಗಳು
Swachotsava, public awareness from Devarahipparagi P.P. Wall writing, pictures to create cleanlines
ದೇವರಹಿಪ್ಪರಗಿ 08: ಪ್ರತಿನಿತ್ಯ ಕಸದ ರಾಶಿಯಿಂದ ತುಂಬಿ ಗಬ್ಬೆದ್ದು ನಾರುತ್ತಿದ್ದ ಪಟ್ಟಣದ ರಾಷ್ಟ್ರೀಯ ಹೆದ್ದಾರಿ-50ರ ಪಕ್ಕ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಪೌರಕಾರ್ಮಿಕರು ರವಿವಾರ ಸ್ವಚ್ಛತಾ ಕಾರ್ಯ ಕೈಗೊಂಡು ಸುತ್ತಲಿನ ನಿವಾಸಿಗಳು, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಪ.ಪಂ ಯಿಂದ ಸ್ವಚೋತ್ಸವಕ್ಕೆ ಚಾಲನೆ ನೀಡಲಾಯಿತು. ಪಟ್ಟಣದ ಉರ್ದು ಶಾಲೆ ಹಾಗೂ ಪೊಲೀಸ್ ಠಾಣೆ ಮುಂಭಾಗದಲ್ಲಿ ಸಂಪೂರ್ಣ ಸ್ವಚ್ಛತಾ ಕಾರ್ಯ ಕೈಗೊಂಡು ಕಾಂಪೌಂಡ್ ಮೇಲೆ ಸ್ವಚ್ಛತೆಯ ಕುರಿತು ಅರಿವು ಮೂಡಿಸುವ ಗೋಡೆ ಬರಹಗಳು, ಚಿತ್ರಗಳನ್ನು ಬಿಡಿಸಿ ಕಸವಿದ್ದ ಜಾಗದಲ್ಲಿ ಗಿಡಗಳನ್ನು ನೆಟ್ಟು ಸುತ್ತಮುತ್ತಲಿನ ನಿವಾಸಿಗಳಿಗೆ ಸ್ವಚ್ಛತೆಯ ಮಹತ್ವ, ಕಸ ಸಂಗ್ರಹಣೆ, ತ್ಯಾಜ್ಯ ನಿರ್ವಹಣೆ ಕುರಿತು ಜಾಗೃತಿ ಮೂಡಿಸಲಾಯಿತು. ನಂತರ ಪ.ಪಂ ಮುಖ್ಯಾಧಿಕಾರಿ ಅಪ್ರೋಜ ಅಹ್ಮದ ಪಟೇಲ ಅವರು ಮಾತನಾಡಿ,
ಪಟ್ಟಣದ ಪ್ರತಿಯೊಂದು ವಾರ್ಡ್ ಸ್ವಚ್ಛ, ಸುಂದರ, ಆರೋಗ್ಯಯುತ ಹಾಗೂ ತ್ಯಾಜ್ಯ ಮುಕ್ತವಾಗಿಸುವ ಉದ್ದೇಶದಿಂದ ಪಟ್ಟಣದಲ್ಲಿ ಪ್ರತಿನಿತ್ಯ ಸಾರ್ವಜನಿಕರು ಕಸ ಸುರಿಯುವ ಇಂತಹ ಸುಮಾರು 8ತ್ಯಾಜ್ಯ ತುಂಬಿದ ಜಾಗಗಳನ್ನು ಗುರುತಿಸಲಾಗಿದ್ದು, ಇದೇ ಮಾದರಿಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗುವುದು. ಸ್ಥಳೀಯ ನಿವಾಸಿಗಳಿಗೆ, ಜನರಿಗೆ ತ್ಯಾಜ್ಯ ಎಸೆಯುವ ರೂಢಿ ತಪ್ಪುವವರೆಗೂ ಪ್ರತಿವಾರ ಪಟ್ಟಣದ ಖಾಲಿ ಜಾಗಗಳಲ್ಲಿ ಬಿದ್ದಿರುವ ಪ್ಲಾಸ್ಟಿಕ್ ಕಸವನ್ನು ಎಲ್ಲೆಂದರಲ್ಲಿ ಎಸೆಯಬೇಡಿ, ಸ್ವಚ್ಛಗೊಳಿಸಿದ ಪ್ರತಿ ಸ್ಥಳಗಳಲ್ಲಿ ವಾಟರ್ ಮೆನ್, ಸೂಪರ್ವೈಸರ್ ಗಳನ್ನು ತಿಂಗಳಗಳ ಕಾಲ ನೋಡಲ್ ಅಧಿಕಾರಿಗಳನ್ನಾಗಿ ನಿಯೋಜಿಸಲಾಗುತ್ತಿದೆ. ಪಟ್ಟಣದಲ್ಲಿ ಏಕಬಳಕೆ ಪ್ಲಾಸ್ಟಿಕ್ ಮಾರುವ, ಬಳಸುವ ದಂಡ ಪ್ರಯೋಗ ಮೂಲಕ ಪ್ಲಾಸ್ಟಿಕ್ ಮುಕ್ತವಾಗಿಸುವ ಕಾರ್ಯ ಮಾಡಲಾಗುವುದು ಎಂದರು.ಇದೇ ಸಂದರ್ಭದಲ್ಲಿ ಪ.ಪಂ ಸಿಬ್ಬಂದಿಗಳಾದ ಮುತ್ತುರಾಜ ಹಿರೇಮಠ, ಸೋಮು ಭೋವಿ, ಮಾರ್ತುಂಡ ಗುಡಿಮನಿ, ಶ್ಯಾನಿಟರಿ ಸೂಪರ ವೈಜರ ಶಿಲಾಧರ ಘತ್ತರಗಿ, ಕಮ್ಯುನಿಟಿ ಮೋಗಲೈಜರ ಅಂಬಿಕಾ ಕುಲಕರ್ಣಿ, ಕಿರಿಯ ಆರೋಗ್ಯ ನೀರೀಕ್ಷಕರು ಹಾಗೂ ನೈರ್ಮಲ್ಯ ಸಿಬ್ಬಂದಿಗಳು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 