ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಸ್ವಾಮಿ ವಿವೇಕಾನಂದ ಆಚರಣೆ
Swami Vivekananda Celebration at Ramakrishna Vivekananda Ashram
ಹುಬ್ಬಳ್ಳಿ 13: ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ 163ನೇ ಜಯಂತಿ ಪ್ರಯುಕ್ತ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಸ್ವಾಮಿ ವಿವೇಕಾನಂದ ಅವರ ಭಾವಚಿತ್ರಕ್ಕೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮಾಲಾರೆ್ಣ ಮಾಡಿ ಶ್ರದ್ಧಾ, ಭಕ್ತಿಯಿಂದ ಗೌರವ ನಮನ ಸಲ್ಲಿಸಿದರು. ರಾಮಕೃಷ್ಣ-ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಪರಮ ಪೂಜ್ಯ ಸ್ವಾಮಿ ತೇಜಸಾನಂದಜೀ ಮಹಾರಾಜ್ ಅವರಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮಾಲಾರೆ್ಣ ಮಾಡಿ ಗೌರವಿಸಿದರು.
ಸುಜಯ್ ಸುರೇಶ್ ಹೊರಕೇರಿ , ಸೋಹನ್ ಸುರೇಶ್ ಹೊರಕೇರಿ, ರಾಣಿ ಚೆನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಮಲ್ಲಿಕಾರ್ಜುನ್, ಶ್ರದ್ಧಾ , ಪ್ರಿಯಾ , ಮುಂತಾದವರು ಇದ್ದರು. ಮನುಕುಲದ ಉದ್ಧಾರಕ್ಕೆ ಅವತರಿಸಿ ಬಂದವರು ಸ್ವಾಮಿ ವಿವೇಕಾನಂದರು. ಭಗವಾನ್ ರಾಮಕೃಷ್ಣ ಪರಮಹಂಸರ ತತ್ವಗಳನ್ನು ಜಗತ್ತಿನಾದ್ಯಂತ ಬಿತ್ತರಿಸಿದರು. ವಿದ್ಯಾರ್ಥಿಗಳು ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಸ್ವಾಮಿ ವಿವೇಕಾನಂದರ ವಿಚಾರಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಪಠ್ಯದಲ್ಲಿ ಅಳವಡಿಸಬೇಕು. ಯುವಕರು ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಪಾಲಿಸಿದರೆ ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 