ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯಿಂದ ಸ್ವಾಸ್ಥ್ಯ ಸಂಕಲ್ಪ
Swasthya Sankalpa by Dharmasthala Village Development Corporation
ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯಿಂದ ಸ್ವಾಸ್ಥ್ಯ ಸಂಕಲ್ಪ
ದೇವರಹಿಪ್ಪರಗಿ 09: ಮಾದಕ ದ್ರವ್ಯ, ತಂಬಾಕು ಸೇವನೆ ಮುಕ್ತ ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ನಿರಂತರವಾಗಿ ಶ್ರಮಿಸುತ್ತಿರುವ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಸಮಾಜದಲ್ಲಿ ಬದಲಾವಣೆ ತರಲು ಕಾರಣವಾಗಿದೆ ಎಂದು ಯೋಗ ಶಿಕ್ಷಕರು ಹಾಗೂ ಜನಜಾಗೃತಿ ವೇದಿಕೆಯ ಜಿಲ್ಲಾ ಉಪಾಧ್ಯಕ್ಷರಾದ ಪಂಚಾಕ್ಷರಿ ಮಿಂಚನಾಳ ತಿಳಿಸಿದರು.
ಪಟ್ಟಣದ ಸಮೀಪ ತಾಂಡಾ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಗುರುವಾರದಂದು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಆಶ್ರಯದಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶುಚಿತ್ವಕ್ಕೆ ಒತ್ತು ನೀಡುವ ಸುಂದರ ಸಮಾಜ ನಿರ್ಮಾಣ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಗುರಿ ಯಾಗಿದ್ದು, ವಿದ್ಯಾರ್ಥಿಗಳ ಮೂಲಕ ಪೋಷಕರಿಗೆ ಸಂದೇಶ ತಲುಪಿಸುವ ಕೆಲಸ ಮಾಡುತ್ತಿರುವುದು ಸಾಮಾಜಿಕ ಕಾಳಜಿಗೆ ಸಾಕ್ಷಿಯಾಗಿದೆ.ದೇಶದ ಭವಿಷ್ಯವೇ ಯುವಕರಾಗಿದ್ದೀರಿ, ನೀವು ಮಾದಕ ವಸ್ತುಗಳಿಂದ ದೂರವಿರುವುದು ಸೂಕ್ತ, ಯುವಜನತೆಯ ಮೇಲೆ ದೇಶ ಅಲ್ಲದೆ ಕುಟುಂಬಗಳೂ ಸಹ ಅವಲಂಭಿತವಾಗಿರುತ್ತವೆ. ಆದರೆ, ಅದನ್ನು ಮರೆತು ಯಾವುದೋ ಕಾರಣಗಳಿಗೆ ಯುವಶಕ್ತಿಯು ಮಾದಕ ವಸ್ತುಗಳಿಗೆ ತಮ್ಮನ್ನು ಅರ್ಿಸಿಕೊಳ್ಳುವ್ಯದರಿಂದ ನಿಮ್ಮ ಕುಟುಂಬ ಅಲ್ಲದೆ ದೇಶದ ಮೇಲೆಯೂ ಆತಂಕಕಾರಿ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದರು.ವಲಯದ ಮೇಲ್ವಿಚಾರಕರಾದ ವಿಶ್ವನಾಥ ಅವರು ಮಾತನಾಡಿ,ಸ್ವಾಸ್ಥ್ಯ ಸಂಕಲ್ಪ ಪ್ರತಿಜ್ಞೆ ಬೋಧಿಸಿ ಪೂಜ್ಯ ವೀರೇಂದ್ರ ಹೆಗಡೆಯವರ ಮಾರ್ಗದರ್ಶನದಂತೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಸುತ್ತಿದ್ದು, ಇದರಿಂದ ಸಮಾಜಕ್ಕೆ ಒಳಿತಾಗಲಿ ಎಂಬುದೇ ಉದ್ದೇಶವಾಗಿದೆ ಹಾಗೂ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿಯ ಜತೆಗೆ ಜಿಲ್ಲೆ ಹಾಗೂ ತಾಲ್ಲೂಕಿನಲ್ಲಿ ಮದ್ಯವರ್ಜನ ಶಿಬಿರಗಳನ್ನು ನಡೆಸುವ ಮೂಲಕ ಅನೇಕರನ್ನು ಮದ್ಯ ಸೇವನೆಯಿಂದ ದೂರ ಮಾಡಿದೆ ಎಂದು ತಿಳಿಸಿದರು.ಸಂದರ್ಭದಲ್ಲಿ ಶಾಲೆಯ ಮುಖ್ಯ ಗುರುಗಳಾದ ಆರ್.ಎಸ್.ಒಡೆಯರ ಅವರು ಮಾತನಾಡಿ ಧರ್ಮಸ್ಥಳ ಸಂಸ್ಥೆಯ ಕಾರ್ಯಗಳ ಬಗ್ಗೆ ಶ್ಲಾಘಿಸಿದರು.
ಇದೇ ಸಂದರ್ಭದಲ್ಲಿ ಉಜ್ವಲ ಸಂಸ್ಥೆಯ ಎನ್.ಜಿ.ಒ ಗೌಡಪ್ಪ ಬಿರಾದಾರ, ಶಾಲೆಯ ಸಹ ಶಿಕ್ಷಕರುಗಳಾದ ಎಸ್.ಎಸ್.ಪವಾರ, ಗಂಜಿ ಮೇಡಂ ಹಾಗೂ ಸೇವಾ ಪ್ರತಿನಿಧಿಯಾದ ರೇಣುಕಾ ಬಿರಾದಾರ ಸೇರಿದಂತೆ ಗ್ರಾಮದ ಪ್ರಮುಖರು, ಗಣ್ಯರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 