ಧರ್ಮಸ್ಥಳ ಗ್ರಾಮಾಭಿವೃದ್ದಿ ಬಿ ಸಿ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
ಧರ್ಮಸ್ಥಳ ಗ್ರಾಮಾಭಿವೃದ್ದಿ ಬಿ ಸಿ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
ಹೂವಿನ ಹಡಗಲಿ 16 : ಯೋಗ ಧ್ಯಾನ ವ್ಯಾಯಾಮ ನಡಿಗೆಯಿಂದ ಆರೋಗ್ಯ ವೃದ್ಧಿ ಆಗುತ್ತದೆ ಎಂದು ಆರೋಗ್ಯ ಇಲಾಖೆಯ ಆಪ್ತ ಸಮಾಲೋಚಕ ಟಿ ವೀರೇಶ್ ಹೇಳಿದರು.ಪಟ್ಟಣದ ತುಂಗಭದ್ರಾ ಪ್ರೌಢಶಾಲೆಯಲ್ಲಿ ಶನಿವಾರ ಧರ್ಮಸ್ಥಳ ಗ್ರಾಮಾಭಿವೃದ್ದಿ ಬಿ ಸಿ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಪ್ರತಿ ದಿನ ಬೆಳಗ್ಗೆ ಸಂಜೆ ನಡಿಗೆ ದೈಹಿಕ ಕಸರತ್ತು ಮಾಡಿದರೆ ಆರೋಗ್ಯದ ಸುಧಾರಣೆಗೆ ಸಹಕಾರಿ ಆಗುತ್ತದೆ ಎಂದರು.ಗುಟ್ಕಾ ಗಾಂಜಾ ಸಿಗರೇಟು ತಂಬಾಕು ಉತ್ಪನ್ನಗಳ ದಾಸರಾದರೆ ಆರೋಗ್ಯ ಹಾಳಾಗುತ್ತದೆ. ಕುಟುಂಬದ ನೆಮ್ಮದಿ ದೃಷ್ಟಿಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಿರಿ ಎಂದು ತಿಳಿಸಿದರು.ಮೊಬೈಲ್ ಜಾಸ್ತಿ ಹೊತ್ತು ಬಳಸಿದರೆ ಕಣ್ಣಿನ ದೃಷ್ಟಿ ಸಾಮರ್ಥ್ಯ ಕಳೆದುಕೊಳ್ಳುವ ಸ್ಥಿತಿ ಬರುತ್ತದೆ. ಕಣ್ಣು, ಬಾಯಿ ಉತ್ತಮ ಸ್ಥಿತಿಯಲ್ಲಿ ಇರುವ ಹಾಗೆ ಎಚ್ಚರಿಕೆ ವಹಿಸಬೇಕು ಎಂದರು.ಸಂಪನ್ಮೂಲ ವ್ಯಕ್ತಿಯಾದ ಆರೋಗ್ಯ ಇಲಾಖೆಯ ಆಪ್ತ ಸಮಾಲೋಚಕ ಶಿವರಾಜ್ ವಿದ್ಯಾರ್ಥಿಗಳಿಗೆ ಆರೋಗ್ಯ ವೃದ್ಧಿ ಕುರಿತು ಮಾಹಿತಿ ನೀಡಿದರು.ಮುಖ್ಯ ಗುರುಗಳಾದ ಸುರೇಶ ಅಂಗಡಿ ಅಧ್ಯಕ್ಷತೆ ವಹಿಸಿದ್ದರು.ಶಾಲೆಯ ಶಿಕ್ಷಕರಾದ ಸ್ವಾಮಿನಾಥ ರಾಮಸ್ವಾಮಿ, ಬಸಪ್ಪ ಕೆ, ವೈ ಜಯಮ್ಮ, ಪ್ರತಿಮಾ ಎನ್, ರೇಖಾ ಎಸ್ ಇತರರು ಉಪಸ್ಥಿತರಿದ್ದರು.ಟ್ರಸ್ಟ್ ನ ಸವಿತಾ, ಸೊಪ್ಪಿನ ರೂಪಾ ನಿರ್ವಹಿಸಿದರು.