ಕೇಂದ್ರ ಸರ್ಕಾರ ವಿರುದ್ದ ವಿದ್ಯುತ್ ಖಾಸಗೀಕರಣ ಖಂಡಿಸಿ, ಕಪ್ಪು ಪಟ್ಟಿ ಧರಿಸಿ ಸಾಂಕೇತಿಕ ಪ್ರತಿಭಟನೆ
Symbolic protest by wearing black armbands against the central government, condemning the privatiza
ಕಂಪ್ಲಿ 12: ವಿದ್ಯುತ್ ಇಲಾಖೆಯನ್ನು ಖಾಸಗೀಕರಣಗೊಳಿಸಲು ಮುಂದಾಗಿರುವ ಕೇಂದ್ರದ ನಡೆ ಖಂಡಿಸಿ, ಜೆಸ್ಕಾಂ ನೌಕರರು ಹಾಗೂ ಸಿಬ್ಬಂದಿಗಳು ಪಟ್ಟಣದ ಜೆಸ್ಕಾಂ ಕಛೇರಿ ಮುಂಭಾಗದಲ್ಲಿ ಕಪ್ಪು ಪಟ್ಟಿ ಧರಿಸಿ, ಸಾಂಕೇತಿಕ ಪ್ರತಿಭಟನೆ ನಡೆಸಿದರು. ನಂತರ ಎಇಇ ಶ್ರೀನಿವಾಸ ಪ್ರಸಾದ್ ಮಾತನಾಡಿ, ವಿದ್ಯುತ್ ಖಾಸಗೀಕರಣ ಕಾಯ್ದೆ ತರಲು ಕೇಂದ್ರ ಸರ್ಕಾರ ಪಿತೂರಿ ನಡಸಿದೆ. ಇದಕ್ಕೆ ವಿದ್ಯುತ್ ಇಲಾಖೆಯ ನೌಕರರ ತೀವ್ರ ವಿರೋಧವಿದೆ. ಕೇಂದ್ರದ ನಡೆ ತದ್ವಿರುದ್ಧವಾಗಿದೆ. ಇಂಧನ ಇಲಾಖೆಯು ಸಾರ್ವಜನಿಕರ ಆಸ್ತಿಯಾಗಿದ್ದು, ಇದನ್ನು ಖಾಸಗಿ ವಲಯಕ್ಕೆ ಹಸ್ತಾಂತರಿಸುವುದರಿಂದ ರೈತರಿಗೆ ಮತ್ತು ಸಾಮಾನ್ಯ ಗ್ರಾಹಕರಿಗೆ ದೊಡ್ಡ ಮಟ್ಟದ ಅನ್ಯಾಯವಾಗಲಿದೆ.
ಅಧಿವೇಶನದಲ್ಲಿ ಮಂಡಿಸಲು ಉದ್ದೇಶಿಸಿರುವ ವಿದ್ಯುತ್ ಕಾಯ್ದೆ ತಿದ್ದುಪಡಿ ಬಿಲ್ ನೌಕರರ ಹಿತಾಸಕ್ತಿಗೆ ವಿರುದ್ಧವಾಗಿದೆ. ಸಾವಿರಾರು ನೌಕರರ ತ್ಯಾಗ ಮತ್ತು ಶ್ರಮದಿಂದ ಕಟ್ಟಲ್ಪಟ್ಟ ಈ ಬೃಹತ್ ಸಂಸ್ಥೆಯನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ನೌಕರರ ಒಗ್ಗಟ್ಟಿನೊಂದಿಗೆ ಹೋದಾಗ ಮಾತ್ರ ಈ ಕಾಯ್ದೆಯನ್ನು ತಡೆಯಲು ಸಾಧ್ಯ. ಈ ಕೂಡಲೇ ಕೇಂದ್ರ ಸರ್ಕಾರವು ಖಾಸಗೀಕರಣದ ನಿರ್ಧಾರವನ್ನು ಕೈಬಿಡಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ಸೆಕ್ಷನ್ ಅಧೀಕ್ಷಕ ವಿನೋದ್, ಜೆಇ ಭೀಮೇಶ, ಪಟ್ಟಣ ಶಾಖಾ ಅಧಿಕಾರಿ ಶಮಿವುಲ್ಲಾ ಸೇರಿದಂತೆ ಪಟ್ಟಣ ಮತ್ತು ಗ್ರಾಮೀಣ ನೌಕರರು ಇದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 