ಜಿಲ್ಲಾ ಮಟ್ಟದ ಉದ್ಯೋಗ ಮೇಳ-2025 ಉದ್ಯೋಗ ಮೇಳವನ್ನು ವ್ಯವಸ್ಥಿತವಾಗಿ ಜರುಗಿಸಿ
ಗದಗ 20: ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಮಾರ್ಚ 1 ಮತ್ತು 2 ರಂದು ಹಮ್ಮಿಕೊಳ್ಳಲಾಗಿದ್ದು ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟು ನಿರ್ವಹಣೆಗೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ತಿಳಿಸಿದರು. ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಾರ್ಚ 1 ಮತ್ತು 2 ರಂದು ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗುವ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಕಂಪನಿಗಳು ನೋಂದಣಿ ಮಾಡಿಕೊಳ್ಳುತ್ತಿವೆ. ಸದರಿ ಕಂಪನಿಗಳಿಂದ 6695 ಹುದ್ದೆಗಳಿಗೆ ಬೇಡಿಕೆ ಸಲ್ಲಿಸಿರುತ್ತಾರೆ. ಉದ್ಯೋಗ ಆಕಾಂಕ್ಷಿಗಳು ವೆಬ್ ಸೈಟ್ ತಿತಿತಿ.ಉಂಆಂಉಎಓಃಈಂಋ.ಅಓಒ ನಲ್ಲಿ ಅಥವಾ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ನೊಂದಾಯಿಸಿಕೊಳ್ಳಬೇಕು. ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವಂತೆ ಕ್ರಮ ವಹಿಸಬೇಕು. ಈ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದರು. ಉದ್ಯೋಗ ಮೇಳದ ಯಶಸ್ವಿಗಾಗಿ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು ಆಯಾ ಸಮಿತಿಯ ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಅರಿತು ಉದ್ಯೋಗ ಮೇಳವನ್ನು ಯಶಸ್ವಿಗೊಳಿಸಬೇಕು. ಉದ್ಯೋಗ ಮೇಳ ಜರುಗುವ ಸ್ಥಳದ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗಾಗಿ ವಿವಿಧ ಮಳಿಗೆಗಳನ್ನು ತೆರೆಯಲಾಗುತ್ತಿದ್ದು ಯಾವುದೇ ಗೊಂದಲ ಸೃಷ್ಟಿಯಾಗದಂತೆ ನೋಡಿಕೊಳ್ಳಬೇಕು. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವವರಿಗೆ ಊಟ ಉಪಹಾರದ ವ್ಯವಸ್ಥೆ, ಶುದ್ಧ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳು ಹಾಗೂ ತುರ್ತು ಚಿಕಿತ್ಸೆಗಾಗಿ ಆಂಬ್ಯುಲನ್ಸ್ ವ್ಯವಸ್ಥೆ ಇರುವಂತೆ ಸಂಬಂಧಿತ ಇಲಾಖೆಯ ಅಧಿಕಾರಿಗಳು ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸವರಾಜ ಕೊಟ್ಟೂರ, ಕೌಶಲ್ಯಾಭಿವೃದ್ಧಿ ಅಧಿಕಾರಿ ಬಸವರಾಜ ಮಲ್ಲೂರ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿ ಶರಣುಗೋಗೇರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ನೀಲಗುಂದ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಜರಿದ್ದರು.